News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಕೋಲಾರ ಜಿಲ್ಲೆ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023
ಕರ್ನಾಟಕ ಮೇ.೧೦ ಚುನಾವಣೆ
ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ
RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ
ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ
ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ
ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ
ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ
ಮನರಂಜನೆ

ಬಿಗ್ ಬಾಸ್ ಕಿರೀಟ ಧರಿಸಿದ ಆಧುನಿಕ ರೈತ..!ಬಿಗ್ ಬಾಸ್ ನಲ್ಲಿ ಅನ್ಯಾಯ ಆಗಿದೆ ಎಂದ ವೀಕ್ಷಕರು…

571

ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ.

ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್‍ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್‍ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ ವಿನ್ನರ್ ಶಶಿಕುಮಾರ್ 50 ಲಕ್ಷ ರೂಪಾಯಿ ಮತ್ತು ಆಕರ್ಷಕ ಟ್ರೋಫಿಯನ್ನ ತಮ್ಮದಾಗಿಸಿಕೊಂಡರು.

ಸೀಸನ್ -6ರ 12ನೇ ಕಂಟೆಸ್ಟೆಂಟ್ ಆಗಿ ಶಶಿ ಬಿಗ್‍ಬಾಸ್ ಮನೆಯೊಳಗೆ ಎಂಟ್ರಿ ನೀಡಿದ್ದರು. ಮಾಡರ್ನ್ ರೈತ ಅಂತಾನೇ ಫೇಮಸ್ ಆಗಿದ್ದ ಇವರು, ಎಲ್ಲಾ ಟಾಸ್ಕ್‍ಗಳನ್ನ ಕೂಡ ಚೆನ್ನಾಗಿಯೇ ಮಾಡಿದ್ದರು. ಹೀಗಾಗಿ, ರೈತನೊಬ್ಬ ಮೊದಲ ಬಾರಿಗೆ ಬಿಗ್ ಬಾಸ್ ಗೆಲ್ತಾನೆ ಅನ್ನೋ ಮಾತು ಕೇಳಿ ಬಂದಿತ್ತು. ಅದರಂತೆ ಶಶಿಕುಮಾರ್ ಬಿಗ್‍ಬಾಸ್ ಸೀಜನ್ -6 ರ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ.

ಬಿಗ್‍ಬಾಸ್ ಮನೆಯೊಳಗೆ ಎಂಟ್ರಿ ನೀಡಿದ್ದ 20 ಮಂದಿಯಲ್ಲಿ ಕೊನೆಗೆ ಮೂವರು ಉಳಿದಿದ್ರು. ಕವಿತಾ ಮೊದಲು ಮನೆಯಿಂದ ಹೊರಬಂದರು. ಶಶಿ, ನವೀನ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ಗಾಯಕ ನವೀನ್ ಸಜ್ಜು ಅವರೇ ವಿನ್ ಆಗುತ್ತಾರೆ ಅನ್ನೋ ಅಭಿಪ್ರಾಯ ಬಹುತೇಕರಲ್ಲಿತ್ತು. ಆದ್ರೆ ಅದು ಸುಳ್ಳಾಗಿದೆ. ಮಾಡರ್ನ್ ರೈತ ಶಶಿ ಬಿಗ್‍ಬಾಸ್ ವಿನ್ನರ್ ಆಗಿದ್ದಾರೆ. ಈ ಸಂಬಂಧ ಸೋಶಿಯಲ್ ಮಿಡಿಯಾದಲ್ಲಿ ಭಾರೀ ಚರ್ಚೆ ನಡೆದಿದೆ. ಶಶಿ ಬಿಗ್‍ಬಾಸ್ ವಿನ್ನರ್.. ನವೀನ್ ಸಜ್ಜು ಜನರ ದಿಲ್‍ದಾರ್ ಎಂಬ ಡೈಲಾಗ್ ಹೊರಬೀಳುತ್ತಿವೆ.

ಬಿಗ್ ಬಾಸ್ ಸೀಸನ್ 1 ರಲ್ಲಿ ನಟ ವಿಜಯ್ ರಾಘವೇಂದ್ರ, ಸೀಸನ್ 2ರಲ್ಲಿ ನಿರೂಪಕ ಅಕುಲ್ ಬಾಲಾಜಿ, ಸೀಸನ್ 3 ರಲ್ಲಿ ನಟಿ ಶೃತಿ, ಸೀಸನ್ 4 ರಲ್ಲಿ ನಿರ್ದೇಶಕ ಪ್ರಥಮ್, ಸೀಸನ್ 5 ರಲ್ಲಿ ಗಾಯಕ ಚಂದನ್ ಶೆಟ್ಟಿ ಹಾಗೂ ಸೀಸನ್ 6ರಲ್ಲಿ ಮಾಡರ್ನ್ ರೈತ ಶಶಿಕುಮಾರ್ ವಿಜೇತರಾದಂತಾಗಿದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ