ಸಿನಿಮಾ

ಬಿಗ್ ಬಾಸ್ ಸಂಚಿಕೆ-5ರಲ್ಲಿ ನೀವೂ ಸಹ ಸ್ಪರ್ಧಿಸಬಹುದು!ಹೇಗಂತೀರಾ?ಈ ಲೇಖನಿ ಓದಿ….

2599

ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.

ಆದ್ರೆ ಈಗ ಬಿಗ್ ಬಾಸ್ ಜನಪ್ರಿಯತೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗ್ತಾನೇ ಇದ್ದು, ಬಿಗ್ ಬಾಸ್ ಮೂಲಕ ಮತ್ತೊಂದು ಹೊಸ ದಾಖಲೆ ಮಾಡುವ ಪ್ರಯತ್ನ ಕೂಡ ನಡೆದಿದೆ. ಅದೇನಂದ್ರೆ ಮುಂದೆ ಬರಲಿರುವ ಬಿಗ್ ಬಾಸ್ ಸೀಸನ್ 5ರಲ್ಲಿ ಪಾಲ್ಗೊಳ್ಳಲು ವಾಹಿನಿ ಜನಸಾಮಾನ್ಯರಿಗೂ ಅವಕಾಶ ಕಲ್ಪಿಸಿದೆ.

ಬಿಗ್ ಬಾಸ್ ಸೀಸನ್ 5ರಲ್ಲಿ ಜನಸಾಮಾನ್ಯರಿಗೂ ಅವಕಾಶ…            

ಬಿಗ್ ಬಾಸ್ ನಲ್ಲಿ ಭಾಗವಹಿಸುವ ಆಸಕ್ತಿ ಉಳ್ಳವರು ಆನ್ ಲೈನ್ ಆಡಿಶನ್ ನಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಬಹುದು. ನೀವ್ಯಾಕೆ ಬಿಗ್ ಬಾಸ್ ಸೀಸನ್ 5ರಲ್ಲಿ ಭಾಗವಹಿಸಲು ಇಷ್ಟಪಡುತ್ತೀರಾ? ಇತರರಿಗಿಂತ ನೀವು ಅರ್ಹರೆಂದು ನಿಮಗೇಕೆ ಅನಿಸುತ್ತದೆ? ಇಂತಹ ಸರಳ ಪ್ರಶ್ನೆಗಳನ್ನು ಕೇಳಲಾಗುತ್ತದೆ.

ಆಡಿಶನ್ ಗೆ ರಿಜಿಸ್ಟ್ರೇಶನ್ ಈಗಾಗಲೇ ಓಪನ್ ಆಗಿದೆ. ಆಡಿಶನ್ ಮುಗಿದ ಬಳಿಕ ವಿಜೇತರ ಹೆಸರನ್ನು ಪ್ರಕಟಿಸಲಾಗುತ್ತದೆ. ಬಿಗ್ ಬಾಸ್ ಸೀಸನ್ 5 ಸಪ್ಟೆಂಬರ್ ನಲ್ಲಿ ಆರಂಭವಾಗಲಿದ್ದು, ಈ ಆಡಿಶನ್ ನಲ್ಲಿ ಗೆದ್ದವರು ಬಿಗ್ ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸಬಹುದು.

ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ಬಿಗ್ ಬಾಸ್ ಸೀಸನ್ 5’ ಪ್ರಸಾರವಾಗಲಿದೆ. ನಟ ಕಿಚ್ಚ ಸುದೀಪ್ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಾಲೆಯ ಬಾಗಿಲಿನ ಬಳಿ ನಿಂತ ಬಾಲಕಿ. ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ಅಡ್ಮಿಶನ್.

    ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ  ಅವುಲಾ ಶ್ರೀನಿವಾಸ್  ಎಂಬುವವರು…

  • ಸುದ್ದಿ

    ಅಮ್ಮ ಸಾವನ್ನಪ್ಪಿರುವ ವಿಷಯ ತಿಳಿಯದ ಪುಟ್ಟ ಕಂದಮ್ಮಆಟವಾಡುತ್ತಾ, ಅಮ್ಮ ಎಂದು ಕರೆದು ಎಬ್ಬಿಸುತ್ತಿರುವ ವಿಡಿಯೋ ವೈರಲ್.

    ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್‍ನ ಅಲಹಾಬಾದ್‍ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್​ಡೌನ್​…

  • ಸುದ್ದಿ

    ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

    ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…

  • ಜ್ಯೋತಿಷ್ಯ

    ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….

  • ವ್ಯಕ್ತಿ ವಿಶೇಷಣ

    ಭಗತ್ ಸಿಂಗ್’ರವರ ಬಾಲ್ಯದ, ಈ ರೋಚಕ ಕಥೆ ಓದಿದ್ರೆ ನೀವು ಶಾಕ್ ಆಗ್ತೀರಾ..!

    ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.

  • ಸರ್ಕಾರದ ಯೋಜನೆಗಳು

    ಮನೆಯಲ್ಲಿ ಕುಳಿತು ನೀವು ಈ ಕೆಲಸ ಮಾಡಿದ್ರೆ ಸಿಗುತ್ತೆ 1 ಲಕ್ಷ ರೂ..!ತಿಳಿಯಲು ಈ ಲೇಖನ ಓದಿ..

    ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.