ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಹಾಗೂ ವಸತಿ ರಹಿತ ಕುಟುಂಬಗಳಿಗೆ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿರುವ ಬಹುಮಹಡಿ ಕಟ್ಟಡಗಳಲ್ಲಿ ಮನೆ ನೀಡುವ ಯೋಜನೆ ಇಂದು ಅಧಿಕೃತವಾಗಿ ಜಾರಿಗೊಂಡಿತು.

ಬೆಂಗಳೂರಿನಲ್ಲಿ ಒತ್ತುವರಿ ತೆರವುಗೊಳಿಸಿ ವಶಕ್ಕೆ ತೆಗೆದುಕೊಂಡ ಸಾಕಷ್ಟು ಜಮೀನು ಇದೆ. ಅಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಒಂದೇ ಕಡೆ ನಿರ್ಮಾಣ ಆಗುತ್ತಿಲ್ಲ. ನಗರದ ಬೇರೆ ಬೇರೆ ಭಾಗಗಳಲ್ಲಿ ನಿರ್ಮಿಸಲಾಗುತ್ತದೆ. ವಾರ್ಷಿಕ ಆದಾಯ ₹ 87,600 ಕ್ಕಿಂತ ಕಡಿಮೆ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ಸಾಮಾನ್ಯ ವರ್ಗದವರು ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದರು.

ಒಂದು ಕುಟುಂಬದಿಂದ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದ್ದು, ಅರ್ಜಿಯೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ ಹಾಗೂ ವಾಸಸ್ಥಳದ ದೃಢೀಕರಣ ಪತ್ರಗಳ ಆರ್ಡಿ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ನೀಡುವುದು ಕಡ್ಡಾಯ. ಇನ್ನುಳಿದ ಮಾಹಿತಿಯನ್ನು ಆನ್ಲೈನ್ ಮೂಲಕವೇ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.


ವಸತಿ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿಯವರಿಗೆ ಶೇ 30, ಪರಿಶಿಷ್ಟ ಪಂಗಡಕ್ಕೆ ಶೇ 10, ಅಲ್ಪಸಂಖ್ಯಾತರಿಗೆ ಶೇ 10 ರಷ್ಟು ಮೀಸಲು ಇದೆ. ಉಳಿದ ಶೇ 50 ಮನೆಗಳನ್ನು ಸಾಮಾನ್ಯ ವರ್ಗಕ್ಕೆ ಹಂಚಲಾಗುತ್ತದೆ.

ಪರಿಶಿಷ್ಟ ಜಾತಿ, ಪಂಗಡ ಮತ್ತು ಅಲ್ಪಸಂಖ್ಯಾತರಿಗೆ ₹ 3.50 ಲಕ್ಷ ಹಾಗೂ ಸಾಮಾನ್ಯ ವರ್ಗಕ್ಕೆ ₹ 2.70 ಲಕ್ಷ ಸಹಾಯ ಧನ ನೀಡಲಾಗುತ್ತದೆ. ಉಳಿದ ಮೊತ್ತವನ್ನು ಬ್ಯಾಂಕ್‌ನಿಂದ ಸಾಲ ಕೊಡಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಅರ್ಜಿ ಸಲ್ಲಿಕೆಗೆ ಬಿಬಿಎಂಪಿಯ ಎಲ್ಲ ವಾರ್ಡ್, ಕಚೇರಿಗಳಲ್ಲಿ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಇದರೊಂದಿಗೆ ಯಾವುದೇ ಬ್ರೌಸಿಂಗ್ ಸೆಂಟರ್ನ್ಲ್ಲಿಯೂ ಆನ್ಲೈಂನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, 2018ರ ಜನವರಿ 5 ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿದೆ.
