ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕ ಕಲ್ಪಿಸಿ, ಬಯೋಮೆಟ್ರಿಕ್ ಪದ್ಧತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗುತ್ತಿದೆ ಎಂದರು. ಸಾರ್ವಜನಿಕರು ಪಡಿತರ ಚೀಟಿಯನ್ನು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಸ್ಪೀಡ್ ಪೋಸ್ಟ್ ಮೂಲಕ ಪಡೆದುಕೊಳ್ಳಬಹುದಾಗಿದೆ ಎಂದು ಸಚಿವರು ವಿವರಿಸಿದರು. ಸರ್ಕಾರ ಬಿಪಿಎಲ್ ಮತ್ತು ಎಪಿಎಲ್ ಬದಲಾಗಿ ಆದ್ಯತಾ ಮತ್ತು ಆದ್ಯತಾ ರಹಿತ ಕುಟುಂಬಗಳೆಂದು ಗುರ್ತಿಸಲಾಗಿದ್ದು, 1.20 ಲಕ್ಷ ರೂ. ಆದಾಯ ಮಿತಿ ಹೊಂದಿರು ವವರನ್ನು ಆದ್ಯತಾ ಕುಟುಂಬವೆಂದು, ಉಳಿದಂತೆ ಆದ್ಯತಾ ರಹಿತ ಕುಟುಂಬ ಎಂದು ಗುರುತಿಸಲಾಗಿದೆ ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮುಗಳಲ್ಲಿಯೂ ಬಯೋಮೆಟ್ರಿಕ್ ಅಳವಡಿಸಲಾಗುತ್ತಿದೆ. ಇದರಿಂದ ಗೋದಾ ಮುನಿಂದ ನ್ಯಾಯಬೆಲೆ ಅಂಗಡಿಗಳಿಗೆ ಎಷ್ಟು ಆಹಾರ ಪೂರೈಕೆಯಾಗಿದೆ. ನ್ಯಾಯಬೆಲೆ ಅಂಗಡಿಗಳಿಂದ ಎಷ್ಟರ ಮಟ್ಟಿಗೆ ಆಹಾರ ವಿತರಣೆಯಾಗಿದೆ ಎಂಬ ಮಾಹಿತಿ ದೊರೆಯಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಅಭಿಪ್ರಾಯ ಪಟ್ಟರು.

ರಾಜ್ಯದಲ್ಲಿ ಹತ್ತೂವರೆ ಲಕ್ಷ ಬೋಗಸ್ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದರಿಂದ ನಕಲಿ ಕಾರ್ಡ್‌ಗಳಿಗೆ
ಅವಕಾಶವಿರುವುದಿಲ್ಲ ಎಂದರು. ಆದರೂ ಬೋಗಸ್ ಕಾರ್ಡ್ ಪಡೆದಿರುವ ಬಗ್ಗೆ ಮಾಹಿತಿ ನೀಡಿದರೆ ಅಂತವರಿಗೆ 4೦೦ ರೂ., ಹಾಗೆಯೇ ಕಾಳಸಂತೆ ಆಹಾರ ಪತ್ತೆ ಹಚ್ಚುವವರಿಗೆ ಬಹುಮಾನ ನೀಡಲಾಗುವುದು ಎಂದು ಸಚಿವರು ನುಡಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸೌಲಭ್ಯಗಳು ಆದ್ಯತಾ ಹಾಗೂ ಆದ್ಯತಾ ರಹಿತ ಕುಟುಂಬಗಳಿಗೆ ತಲುಪಬೇಕು ಎಂದರು. ಯಾವುದೇ ರೀತಿಯ ದೂರುಗಳು ಕೇಳಿ ಬರದಂತೆ ನೋಡಿಕೊಳ್ಳಲಾಗುವುದು.ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಿದರೆ ಒಂದು ವಾರದಲ್ಲಿ ಪಡಿತರ ಚೀಟಿ ನೀಡಬೇಕು. ಈಗಾಗಲೇ ಈ ಪ್ರಕ್ರಿಯೆಯು ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಆರಂಭಗೊಂಡಿದೆ ಎಂದು ಸಚಿವರು ಮಾಹಿತಿ ನೀಡಿದರು.

ಎಲ್ಲಾ ಪಡಿತರ ಚೀಟಿಗೆ ಆಧಾರ್ ಜೋಡಣಾ ಕಾರ್ಯವು ನಡೆದಿದೆ. ಜಿಲ್ಲೆಯಲ್ಲಿ ಶೇ.50ರಷ್ಟು ಕಾರ್ಯ ಪೂರ್ಣಗೊಂಡಿದೆ ಎಂದು ಸಚಿವರು ತಿಳಿಸಿದರು. ಹಾಗೆಯೇ ಸಿರಿಧಾನ್ಯ ಬೆಳೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಆ ನಿಟ್ಟಿನಲ್ಲಿ ರಾಗಿ ಮತ್ತು ಜೋಳ ಖರೀದಿ ಮಾಡಲಾಗುತ್ತಿದೆ. ಬೇಡಿಕೆ ಇರುವ ಕಡೆ ರಾಗಿ ಮತ್ತು ಜೋಳವನ್ನು ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲಾಗುವುದು ಎಂದರು.

ಮುಖ್ಯಮಂತ್ರಿ ಅವರ ಅನಿಲಭಾಗ್ಯ ಯೋಜನೆಯಡಿ ಫಲಾನುಭವಿಗಳ ಪಟ್ಟಿ ಪಡೆಯ ಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಕಾರ್ಮಿಕರಿಗೆ ಈ ಸೌಲಭ್ಯ
ನೀಡಲಾಗುತ್ತದೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.