ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ ಎನ್ನಲಾಗಿದೆ. ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಉಳಿದವರ ರಕ್ಷಣೆಗಾಗಿ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಇಲ್ಲಿಯವರೆಗೆ ಸುಮಾರು 17 ಸೇನಾ ಸಿಬ್ಬಂದಿ ಮತ್ತು 11 ನಾಗರಿಕರನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ಅವಶೇಷದಡಿ ಸಿಲುಕಿದ್ದಾರೆ ಎನ್ನಲಾಗುತ್ತಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಇಂದು ಮಧ್ಯಾಹ್ನದೊಳಗೆ ಪೂರ್ಣಗೊಳಿಸಲಾಗುವುದು. ಈ ಘಟನೆಯಲ್ಲಿ ಆರು ಸೇನಾ ಸಿಬ್ಬಂದಿ ಮತ್ತು ಸಾರ್ವಜನಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಸೋಲನ್‍ನ ಉಪ ಆಯುಕ್ತ ಕೆ.ಸಿ.ಚಮನ್ ತಿಳಿಸಿದ್ದಾರೆ.
ಘಟನೆ ನಡೆದಾಗ ಒಟ್ಟು 30 ಸಿಬ್ಬಂದಿ ಮತ್ತು ಇತರೆ ಕೆಲವರು ಕಟ್ಟಡದಲ್ಲಿದ್ದರು ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‍ಡಿಆರ್‍ಎಫ್) ಸಿಬ್ಬಂದಿ ನಡೆಸುತ್ತಿದ್ದಾರೆ.ಹಿಮಾಚಲ ಪ್ರದೇಶದ ಸಿಎಂ ಜೈರಾಮ್ ಠಾಕೂರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಘಟನೆ ಹಾಗೂ ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್ ನ ಅಜಯ್ ರಾಯ್ ಕಣಕ್ಕಿಳಿಯುವುದು ಕನ್‍ಫರ್ಮ್ ಆಗಿದೆ. ಹಾಗಾದ್ರೆ ಈ ಅಜಯ್ ರಾಯ್ ಯಾರು ಅಂದ್ರಾ? ಇವರು ಕಾಂಗ್ರೆಸ್ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…
ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್ಪಿಎಫ್ ನ 130ನೇ ಬೆಟಾಲಿನ್‍ನ 55 ರಾಷ್ಟ್ರೀಯ ರೈಫಲ್(ಆರ್‍ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್‍ಓಜಿ) ಜಂಟಿ…
ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…