ಸುದ್ದಿ

ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

41

ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ ಅವರು ಸೋಮವಾರ ಜಿಲ್ಲಾದ್ಯಂತ ಸೆಕ್ಷನ್ 144 ಜಾರಿ ಮಾಡಿದ್ದರು. ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಯಾರೂ ಮನೆಯಿಂದ ಹೊರಗೆ ಬರಬಾರದು ಎಂದು ಪ್ರಕಟಣೆ ಹೊರಡಿಸಿದ್ದರು.ಅಲ್ಲದೆ ಪ್ರಕಟಣೆಯಲ್ಲಿ ತಿಳಿಸಿರುವ ಸಮಯದಲ್ಲಿ ಜಿಲ್ಲೆಯಲ್ಲಿ ಯಾವುದೇ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುವಂತಿಲ್ಲ.

ಎಂಎನ್‍ಆರ್‍ಇಜಿಎ ಕಾರ್ಯಕ್ರಮಗಳ ಅಡಿಯಲ್ಲಿ ಬೆಳಗ್ಗೆ 10.30ರ ಬಳಿಕ ಯಾವುದೇ ತೆರೆದ ಸ್ಥಳಗಳಲ್ಲಿ ಕಾರ್ಮಿಕರು ಕೆಲಸ ಮಾಡಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಅಷ್ಟೇ ಅಲ್ಲದೆ, ಜೂನ್ 22ರವರೆಗೆ ಬಿಹಾರದ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಮೂಲಕ ಬಿಸಿಲ ಝಳಕ್ಕೆ ಮೃತಪಡುವವರ ಸಂಖ್ಯೆ ತಗ್ಗಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ.ಹಾಗೆಯೇ ಬಿಹಾರದ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಗಯಾದ ಅನುಗ್ರಹ ನಾರಾಯಣ ಮಗಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಅವರಿಗೆ ಸರ್ಕಾರದಿಂದ ಅಗತ್ಯ ನೆರವನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಸಿಲ ತಾಪಕ್ಕೆ ಬಲಿಯಾದ ಮೃತರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ.ಗಳ ಪರಿಹಾರ ಧನವನ್ನು ಘೋಷಿಸಿದ್ದಾರೆ. ಅಲ್ಲದೆ ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಪ್ರತಿಕ್ರಿಯಿಸಿ, ಜನರು ಬಿಸಿಲಿಗೆ ಹೋಗುವುದಕ್ಕಿಂತ ನೆರಳು ಇರುವ ಪ್ರದೇಶದಲ್ಲಿ ಇರುವುದು ಸೂಕ್ತ. ಅತಿಯಾದ ಬಿಸಿಲ ತಾಪಕ್ಕೆ ಮನುಷ್ಯನ ಆರೋಗ್ಯದಲ್ಲಿ ಏರುಪೇರು ಆಗುತ್ತದೆ. ಮೆದುಳು ಸಂಬಂಧಿ ರೋಗಗಳು ಬರುತ್ತವೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    750 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಗೆ ಶಾಶ್ವತ ಕುಡಿಯವ ನೀರು ಯೋಜನೆ…!

    ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…

  • ವಿಚಿತ್ರ ಆದರೂ ಸತ್ಯ

    ಈ ಕೋತಿ ಮಾಡಿದ ವಿಚಿತ್ರ ಚೇಷ್ಟೆಯ ಬೆಲೆ ಲೀಟರ್‌ಗೆ 70 ರೂ..!ಮಂಗಗಳು ಹೀಗೂ ಮಾಡ್ತವೆ…

    ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.

  • ಆಧ್ಯಾತ್ಮ

    ಶ್ರೀ ಶಿರಡಿ ಸಾಯಿಬಾಬಾ ಅವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ವಿಷಯಗಳು..!

    ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.

  • ಕ್ರೀಡೆ

    ವೈರಲ್ ಆಯ್ತು ಟೆನಿಸ್ ತಾರೆ ಸಾನಿಯಾ ಮಿರ್ಜಾ, ತನ್ನ ಮಗುವಿನೊಂದಿಗೆ ಇರುವ ಫೋಟೋ..!ಮಗು ಹೇಗಿದೆ ಗೊತ್ತಾ..?

    ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ‘ಸಿಹಿ ಸುದ್ದಿ’…ಇದನ್ನೊಮ್ಮೆ ಓದಿ…!

    ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…

  • inspirational

    ಗೋವಿನ ಬಾಲದ ಒಂದು ಕೂದಲಿನಿಂದ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತದೆ, ಗೋಮಾತೆಯ ಮಹಿಮೆ.

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….