ಸರ್ಕಾರದ ಯೋಜನೆಗಳು

ಬಿ.ಪಿ.ಎಲ್. ಕುಟುಂಬಗಳಿಗೆ ಸರ್ಕಾರದಿಂದ “ಇಂದಿರಾ ಬಟ್ಟೆ ಭಾಗ್ಯ”..! ತಿಳಿಯಲು ಈ ಓದಿ..

475

ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್‌ ಈಗಾಗಲೇ ಇಂದಿರಾ ಹೆಸರಿನಲ್ಲಿ  ಕ್ಯಾಂಟೀನ್‌, ಕ್ಲಿನಿಕ್‌ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.

ಬಿ.ಪಿ.ಎಲ್. ಕುಟುಂಬದವರಿಗೆ ಉಚಿತವಾಗಿ ಬಟ್ಟೆ ನೀಡುವ ‘ಇಂದಿರಾ ವಸ್ತ್ರ ಭಾಗ್ಯ’ ಯೋಜನೆ ಜಾರಿಗೆ ಯೋಜಿಸಲಾಗಿದೆ. ಜವಳಿ ಇಲಾಖೆಯಿಂದ ವಾರ್ಷಿಕ 550 ಕೋಟಿ ರೂ. ವೆಚ್ಚದಲ್ಲಿ ‘ಇಂದಿರಾ ವಸ್ತ್ರ ಭಾಗ್ಯ’ ಯೋಜನೆ ಜಾರಿಗೊಳಿಸಲಿದ್ದು, ಹಣಕಾಸು ಇಲಾಖೆ ಒಪ್ಪಿಗೆ ಪಡೆದು ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುತ್ತದೆ.

ಪುರುಷರಿಗೆ ಶರ್ಟ್ ಬಟ್ಟೆ, ಪಂಚೆ, ಮಹಿಳೆಯರಿಗೆ ಸೀರೆ ಮತ್ತು ರವಿಕೆ ಬಟ್ಟೆ ನೀಡಲಾಗುವುದು. ರಾಜ್ಯದ 1.10 ಕೋಟಿ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಈ ಸೌಲಭ್ಯ ಸಿಗಲಿದೆ. ನ್ಯಾಯಬೆಲೆ ಅಂಗಡಿಗಳ ಮೂಲಕ ಬಟ್ಟೆಯನ್ನು ವಿತರಿಸಲಾಗುತ್ತದೆ ಎಂದು ಜವಳಿ ಸಚಿವ ರುದ್ರಪ್ಪ ಲಮಾಣಿ ಮಾಹಿತಿ ನೀಡಿದ್ದಾರೆ.

ಅನ್ನಭಾಗ್ಯ, ಕ್ಷೀರಭಾಗ್ಯ ಮೊದಲಾದ ಯೋಜನೆಗಳು ಜನಪ್ರಿಯವಾಗಿದ್ದು, ಅದೇ ಮಾದರಿಯಲ್ಲಿ ‘ಇಂದಿರಾ ವಸ್ತ್ರ ಭಾಗ್ಯ’ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ.

ಈ ಯೋಜನೆಯ ಅನುಷ್ಠಾನಕ್ಕೆ ವಾರ್ಷಿಕ 550 ಕೋಟಿ ರೂಪಾಯಿ ಅಗತ್ಯವಿದ್ದು, ಆ ಅನುದಾನವನ್ನು 2018-19 ಬಜೆಟ್‌ನಲ್ಲಿ ಘೋಷಿಸಿ, ಹಣ ಒದಗಿಸಲು ಸಚಿವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.


ಪುರುಷರಿಗೆ                ಮಹಿಳೆಯರಿಗೆ
ಪಂಚೆ    150              ಸೀರೆ         200
ಶರ್ಟ್‌    100              ರವಿಕೆ         50
ಒಟ್ಟು    250                              250

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನಿಮ್ಮ ಮನೆಯಲ್ಲಿಯೇ ಇದೆ, ಹಲ್ಲು ನೋವಿಗೆ ಮದ್ದು..!ತಿಳಿಯಲು ಈ ಲೇಖನ ಓದಿ…

    ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಮೆಟ್ರೊದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಹೆಚ್ಚರವಿರಲಿ, ಇಲ್ಲದಿದ್ದರೆ ಹೀಗೂ ಆಗಬಹುದು,..!!

    ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ  ಸಿಲುಕಿ ಪರದಾಡುವವರ ಸಂಖ್ಯೆಯೂ  ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ  ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…

  • ರಾಜಕೀಯ

    ಸಿದ್ದರಾಮಯ್ಯ ಮಣಿಸಲು ಕೋಲಾರ ಜನ ಶಪಥ! ಸಂಸದ ಮುನಿಸ್ವಾಮಿ

    ‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್‌ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…

  • ಆಧ್ಯಾತ್ಮ

    ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

    ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.

  • ಸಿನಿಮಾ

    ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ‘ಪ್ರೇಮಂ’ ಬೆಡಗಿ ‘ಸಾಯಿಪಲ್ಲವಿ’..!ತಿಳಿಯಲು ಈ ಲೇಖನ ಓದಿ …

    ‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.