ಸುದ್ದಿ

ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

148

ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ ಬಿದ್ದಿದ್ದಾನೆ.

ಸರಿಸುಮಾರು 7 ಇಂಚು ಅಗಲವಿರುವ ಈ ಕೊಳವೆ ಬಾವಿಯನ್ನು ಬಟ್ಟೆಯಿಂದ ಮುಚ್ಚಲಾಗಿತ್ತು. ಇದನ್ನು ಗಮನಿಸದ ಬಾಲಕ ಆಟವಾಡುತ್ತಾ ಅದರ ಒಳಗಡೆ ಬಿದ್ದಿದ್ದಾನೆ. ಇದನ್ನು ಗಮನಿಸಿದ ತಾಯಿ ಬಾಲಕನನ್ನು ರಕ್ಷಿಸಲು ಮುಂದಾದ್ರೂ ವಿಫಲರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಆ ಬಳಿಕ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಸುಮಾರು 5 ದಿನಗಳಿಂದ ರಕ್ಷಣಾ ಕಾರ್ಯ ನಡೆದಿದ್ದು, ಇಂದು ಬಾಲಕನನ್ನು ಬೋರ್ ವೆಲ್ ಒಳಗಡೆಯಿಂದ ರಕ್ಷಿಸಲಾಯಿತು. ಕೂಡಲೇ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಆ ರಾಜ್ಯದಲ್ಲಿ ಚಾಪರ್ ನಿಲುಗಡೆ ಮಾಡಲು ಸಾಧ್ಯವಿಲ್ಲವಾಯಿತು. ಹೀಗಾಗಿ ಬಾಲಕನನ್ನು ರಸ್ತೆ ಮಾರ್ಗವಾಗಿ 140 ಕೀ.ಮಿ ತೆರಳಿ ಆಸ್ಪತ್ರೆಗೆ ದಾಖಲಿಸಲಾಯಿತು. ಘಟನೆ ಸಂಬಂಧ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಟ್ವೀಟ್ ಮಾಡಿ, ಸಂತಾಪ ಸೂಚಿಸಿದ್ದಾರೆ. ದೇವರು ಆತನ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬರೆದುಕೊಂಡಿದ್ದಾರೆ.

ಕಳೆದ ರಾತ್ರಿ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದ್ದಂತೆಯೇ ಸ್ಥಳೀಯರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು. ಇದೇ ವೇಳೆ ಅಲ್ಲಿನ ಮುಖ್ಯಮಂತ್ರಿಗಳು ಕೂಡ ವಿರೋಧ ಪಕ್ಷಗಳು ಕಾರ್ಯಾಚರಣೆಯನ್ನು ತಡಮಾಡುತ್ತವೆ ಎಂದು ಆರೋಪಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ನಟ ನಾಗಾರ್ಜುನ ಫಾರ್ಮ್ ಹೌಸ್‍ನಲ್ಲಿ ಪತ್ತೆಯಾದ ಅಸ್ಥಿಪಂಜರ….!

    ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್‍ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…

  • bank

    ಎಟಿಎಂ ನಲ್ಲಿ ‘ನೋಟು’ ಬರದಿದ್ರೆ ಏನು ಮಾಡಬೇಕು…?

    ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…