ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೋಟ್ಯಾಧೀಪತಿಗಳಾಗುವ ಅದೃಷ್ಟ ಅಂದರೆ ಇದೆ ಇರಬಹುದು! ಹೌದು, ಅರುಣಾಚಲ ಪ್ರದೇಶದ ಬೊಮ್ಜ ಎಂಬ ಹಳ್ಳಿಯು ಈಗ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರ ಹೊಮ್ಮಿದೆ.ಈ ಹಳ್ಳಿಯ ಎಲ್ಲಾ ಕುಟುಂಬಗಳು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ.

ಅರುಣಾಚಲಪ್ರದೇಶದ ತವಾಂಗ್ ಜಿಲ್ಲೆಯ ಬೋಮ್ಜಾ ಗ್ರಾಮಸ್ಥರು ಒಂದೇ ದಿನದಲ್ಲಿ ಕೋಟ್ಯಾಧಿಪತಿಯಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವಾಲಯದಿಂದ ಅರುಣಾಚಲಪ್ರದೇಶದ ಹಳ್ಳಿಯ ಜನರಿಗೆ ಕೊಟ್ಯಾಧಿಪತಿಯಾಗುವ ಭಾಗ್ಯ ಬಂದಿದೆ.ಹೌದು, ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು ಇದರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಇದರಿಂದಾಗಿ ಈ ಹಳ್ಳಿ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರಹೊಮ್ಮಿದೆ.

ಕೇಂದ್ರದ ರಕ್ಷಣಾ ಸಚಿವಾಲಯ 40.80 ಕೋಟಿ ಬಿಡುಗಡೆ ಬೋಮ್ಜಾ ಗ್ರಾಮದ ಸುಮಾರು 200.056 ಎಕರೆ ಭೂಮಿಯನ್ನು ಭಾರತೀಯ ಸೇನೆಯ ವಿವಿಧ ಕಾಮಗಾರಿಗಳ ಅಭಿವೃದ್ಧಿಗಾಗಿ ರಕ್ಷಣಾ ಸಚಿವಾಲಯ ಸ್ವಾಧೀನಪಡಿಸಿಕೊಂಡಿದೆ. ಹಳ್ಳಿಯ ಎಲ್ಲಾ 31 ಕುಟುಂಬಗಳಿಗೆ ರೂ. 40,80,38,400 ಮೊತ್ತವನ್ನು ವಿತರಣೆ ಮಾಡಿದೆ. ಒಂದು ಕುಟುಂಬಕ್ಕೆ 2.44 ಕೋಟಿ ರೂ. ಪರಿಹಾರ ಸಿಕ್ಕಿದರೆ ಮತ್ತೊಂದು ಕುಟುಂಬಕ್ಕೆ 6.73 ಕೋಟಿ ರೂ. ಸಿಕ್ಕಿದೆ.

ಏಷಿಯಾದಲ್ಲೇ ಹೆಚ್ಚು ಕೋಟ್ಯಾಧಿಪತಿಗಳಿರುವ ಶ್ರೀಮಂತ ಗ್ರಾಮ ಆಗಿದ್ದು, ಗ್ರಾಮದ ಒಟ್ಟು 31 ಕುಟುಂಬಗಳಲ್ಲಿ ಸಂತ್ರಸ್ತ 29 ಕುಟುಂಬಗಳಿಗೆ ತಲಾ ರೂ. 1.09 ಕೋಟಿ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಖಂಡು ವಿತರಿಸಿದ್ದಾರೆ. ಅವುಗಳಲ್ಲಿ ಒಂದು ಕುಟುಂಬ ರೂ. 6.73 ಕೋಟಿ ಪಡೆದಿದ್ದರೆ ಇನ್ನೊಂದು ಕುಟುಂಬ ರೂ. 2.45 ಕೋಟಿ ಪರಿಹಾರ ಧನ ಪಡೆದಿವೆ. ಒಟ್ಟಿನಲ್ಲಿ ಈ ಗ್ರಾಮದ ಏಷಿಯಾದಲ್ಲೇ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿದ್ದು, ಎಲ್ಲಾ ಕುಟುಂಬಗಳು ಕೋಟ್ಯಾಧಿಪತಿಗಳಾಗಿರುವ ಏಕೈಕ ಗ್ರಾಮ.ಈ ಹಣವನ್ನು ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ವಿತರಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…
ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.