ಸಿನಿಮಾ

ಭಾರತೀಯ ಚಿತ್ರರಂಗದ ಮೊದಲ ಮಹಿಳಾ ಸೂಪರ್ಸ್ಟಾರ್ ಇನ್ನಿಲ್ಲ…

346

ಬಾಲಿವುಡ್‍ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.

ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ.

1963ರ ಆಗಸ್ಟ್ 13 ರಂದು ತಮಿಳು ನಾಡಿನ ಶಿವಕಾಶಿಯಲ್ಲಿ ಜನಿಸಿದ್ದ ಶ್ರೀದೇವಿ ತಮ್ಮ 4ನೇ ವಯಸ್ಸಿನಲ್ಲಿ 1969 ರಲ್ಲಿ ಬಾಲನಟಿಯಾಗಿ ತಮಿಳಿನ ತುನೈವನ್ ಸಿನಿಮಾದಲ್ಲಿ ನಟಿಸಿದ್ದರು. 1971ರಲ್ಲಿ ಮಲೆಯಾಳಂನ ಪೂಂಪಟ್ಟಾ ಚಿತ್ರದಲ್ಲಿ ನಟಿಸಿದ್ದ ಶ್ರೀದೇವಿ ಅವರಿಗೆ ಅತ್ಯುತ್ತಮ ಬಾಲನಟಿ ಪ್ರಶಸ್ತಿ ಸಿಕ್ಕಿತ್ತುಅದಾದ ನಂತರ 1978ರಲ್ಲಿ ಸೊಲ್ವ ಸಾವನ್ ಸಿನಿಮಾ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ ಶ್ರೀದೇವಿ ಸುಮಾರು 215 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

13ನೇ ವಯಸ್ಸಿನಲ್ಲಿ ಜೂಲಿ ಚಿತ್ರದೊಂದಿಗೆ ಬಾಲಿವುಡ್‍ಗೆ ಎಂಟ್ರಿಕೊಟ್ಟ ಶ್ರೀದೇವಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಹಿಂದಿ, ತಮಿಳು, ತೆಲುಗು, ಮಲೆಯಾಳಂ ಮತ್ತು ಕನ್ನಡದಲ್ಲಿ ನಟಿಸುವ ಮೂಲಕ ಪಂಚಭಾಷಾ ಕಲಾವಿದೆಯಾಗಿ ಪ್ರಸಿದ್ಧಿ ಪಡೆದಿದ್ದರು.

ಕನ್ನಡದಲ್ಲಿ ನಟಿಸಿದ್ದ ಚಿತ್ರಗಳು:-

ಕನ್ನಡದ ಭಕ್ತಕುಂಬಾರ, ಬಾಲಭಾರತ, ಹೆಣ್ಣು ಸಂಸಾರದ ಕಣ್ಣು, ಯಶೋಧ ಕೃಷ್ಣ, ಸಂಪೂರ್ಣ ರಾಮಯಣ, ಪ್ರಿಯಾದಲ್ಲಿ ನಟಿಸಿದ್ದರು. ರೆಬಲ್ ಸ್ಟಾರ್ ಅಂಬರೀಶ್, ರಜನಿಕಾಂತ್ ಜೊತೆ ಅಭಿನಯಿಸಿದ್ದ ಶ್ರೀದೇವಿ 80ರ ದಶಕದಲ್ಲಿ ಬಾಲಿವುಡ್ ಪ್ರಸಿದ್ಧ ಕಲಾವಿದೆಯಾಗಿ ಮಿಂಚಿದ್ದರು.

ಕಾರಣ :-

ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ.

ಇನ್ನು ಶ್ರೀದೇವಿ  ಅವರಿಗೆ 2013 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಪರಸ್ಕರಿಸಲಾಗಿತ್ತು. 5 ಬಾರಿ ಫಿಲಂ ಫೇರ್ ಪ್ರಶಸ್ತಿ ಪಡೆದಿದ್ದ ಶ್ರೀದೇವಿ ಅವರಿಗೆ ಲೆಕ್ಕವಿಲ್ಲದಷ್ಟು ಪ್ರಶಸ್ತಿ ಪುರಸ್ಕಾರಗಳು ದೊರೆತಿದ್ದವು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣದಿಂದ ಯಾವ ರಾಶಿಗೆ ಏನು ಫಲ..?ತಿಳಿಯಲು ಈ ಲೇಖನ ಓದಿ..

    ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.

  • Health

    ಕಿತ್ತಳೆ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್‌ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…

  • ಸುದ್ದಿ

    ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

    ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…

  • ಆಧ್ಯಾತ್ಮ

    ದೀಪಗಳ ಹಬ್ಬದ ಹಿನ್ನಲೆ ಏನು ಗೊತ್ತಾ?ಪಟಾಕಿ ಹೊಡೆಯುವವರಿಗೆ ಇಲ್ಲಿವೆ, ಕೆಲವು ಸಲಹೆಗಳು…ತಿಳಿಯಲು ಇದನ್ನು ಓದಿ…

    ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…