ದೇಶ-ವಿದೇಶ

“ಭಾರತೀಯ ಸೇನೆ”ಗೆ ಶೀಘ್ರವೇ ಬರಲಿದೆ “ಸ್ವದೇಶಿ ಬುಲೆಟ್‌ ಪ್ರೂಫ್‌ ಜಾಕೆಟ್‌”………

324

ಹೌದು, ಪತ್ರಿಕೆಯೊಂದು ವರದಿ ಮಾಡಿರುವಂತೆ, ಪ್ರಸ್ತುತ ಭಾರತೀಯ ಸೇನೆಗೆ ಅಮೆರಿಕದಿಂದ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ತರಿಸಿಕೊಳ್ಳಲಾಗುತ್ತಿದ್ದು, ಇದೀಗ ಈ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ಇನ್ನು ಮುಂದೆ ಭಾರತದಲ್ಲೇ ತಯಾರಿಸಲಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್‌ ಇನ್‌ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ ಸ್ವದೇಶಿ ‘ಬುಲೆಟ್‌ಪ್ರೂಫ್‌’ ಜಾಕೆಟ್‌ವೊಂದನ್ನು ಅಭಿವೃದ್ಧಿಪಡಿಸಿದ್ದಾರೆ.

 

ಇದರ ಬಳಕೆಗೆ ರಕ್ಷಣಾ ಸಚಿವಾಲಯದ ಉನ್ನತಾಧಿಕಾರ ಸಮಿತಿ ಕೂಡ ಒಪ್ಪಿಗೆ ಸೂಚಿಸಿದೆ. ಇದರಿಂದಾಗಿ 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಯೋಧರು ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಬುಲೆಟ್‌ಪ್ರೂಫ್‌ ಜಾಕೆಟ್‌ ಅನ್ನು ಧರಿಸಲು ದಾರಿ ಸುಗಮವಾಗಿದೆ.

ಕೇಂದ್ರ ಸರ್ಕಾರಕ್ಕೆ ಹೇಗೆ ಉಳಿತಾಯ ?

ಇನ್ನು ಈ ಬುಲೆಟ್ ಪ್ರೂಫ್ ಜಾಕೆಟ್ ಗಳು ಕಡಿಮೆ ವೆಚ್ಚದ್ದಾಗಿದ್ದು, ಒಂದು ಜಾಕೆಟ್ ನಿರ್ಮಾಣಕ್ಕೆ ಕೇವಲ 50 ಸಾವಿರ ರು. ವೆಚ್ಚ ತಗುಲುತ್ತದೆ. ಆದರೆ ಅಮೆರಿಕದ ಜಾಕೆಟ್ ಗಳಿಗೆ 1.50 ಲಕ್ಷ ರು. ವೆಚ್ಚವಾಗುತ್ತಿದೆ. ಜತೆಗೆ ಒಂದು ಕವಚ 15ರಿಂದ 18 ಕೆ.ಜಿ.ವರೆಗೂ ತೂಕವಿದೆ. ಇಷ್ಟು ಮಣ ಭಾರದ ಜಾಕೆಟ್‌ ಧರಿಸಿ ಉಗ್ರರ ಜತೆ ಕಾದಾಡಬೇಕಾದ ಪರಿಸ್ಥಿತಿ ಯೋಧರಿಗಿದೆ.

ಇದನ್ನು ಮನಗಂಡ ಬಂಗಾಳಿ ವಿಜ್ಞಾನಿ ಪ್ರೊ| ಶಂತನು ಭೌಮಿಕ್‌ ಅತ್ಯಂತ ಕಡಿಮೆ ತೂಕದ, ಥರ್ಮೋ ಪ್ಲಾಸ್ಟಿಕ್‌ ಜಾಕೆಟ್‌ ಅನ್ನು ಅಭಿವೃದ್ಧಿಪಡಿ ಸಿದ್ದಾರೆ. ಈ ಜಾಕೆಟ್‌ ಬೆಲೆ 50 ಸಾವಿರ ವಿರಲಿದ್ದು, ತೂಕ 1.5 ಕೆ.ಜಿ.ಯಿರಲಿದೆ.

ಇದರಿಂದಾಗಿ 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಯೋಧರು ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಬುಲೆಟ್‌ ಪ್ರೂಫ್‌  ಜಾಕೆಟ್‌ ಅನ್ನು ಧರಿಸಲು ಹಾದಿ ಸುಗಮವಾದಂತಾಗಿದೆ. ಜತೆಗೆ ರಕ್ಷಣಾ ಇಲಾಖೆಯ ಬೊಕ್ಕಸಕ್ಕೆ ಪ್ರತಿ ವರ್ಷ 20 ಸಾವಿರ ಕೋಟಿ ರು. ಉಳಿತಾಯವಾಗಲಿದೆ.

ಯಾರೂ ಗೊತ್ತಾ ವಿಜ್ಞಾನಿ ಶಾಂತನು ಭೌಮಿಕ್ ?

ಪ್ರಸ್ತುತ ಭಾರತೀಯ ಯೋಧರಿಗೆ ಅಗ್ಗದ ಮತ್ತು ಕಡಿಮೆ ತೂಕದ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ಸಂಶೋಧಿಸಿರುವ, ವಿಜ್ಞಾನಿ ಶಾಂತನು ಭೌಮಿಕ್ ಮೂಲತಃ ಬಂಗಾಳ ಮೂಲದವರಾಗಿದ್ದು, ಪ್ರಸ್ತುತ ಕೊಯಮತ್ತೂರಿನ ಅಮೃತ ವಿಶ್ವವಿದ್ಯಾಲಯದಲ್ಲಿ ಏರೇಸ್ಪೇಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದಾರೆ.  ತಮ್ಮ ವಿನೂತನ ಸಂಶೋಧನೆಯನ್ನು ವಿಜ್ಞಾನಿ ಶಾಂತನು ಭೌಮಿಕ್ ಅವರು ನೇತಾಜಿ ಸುಭಾಷ್ ಚಂದ್ರಬೋಸ್ ಅವರಿಗೆ ಸಮರ್ಪಿಸಿದ್ದಾರೆ.

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ರಾಶಿಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….

  • ಸಂಬಂಧ

    ಮದುವೆಯಾಗುವ ಹುಡುಗನಿಗೆ ಅಡುಗೆ ಬರುತ್ತಾ???ಶಾಕ್ ಆಗ್ಬೇಡಿ!ಮುಂದೆ ಓದಿ…..

    ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ

  • ಮನರಂಜನೆ

    ಬಿಗ್ ಶಾಕಿಂಗ್.! ಬದಲಾಗಲಿದ್ದಾರೆ ಬಿಗ್ ಬಾಸ್ ನಿರೂಪಕರು..!ಯಾವ ನಟನ ಬದಲಿಗೆ, ಯಾವ ಸ್ಟಾರ್ ನಟ ಬರಲಿದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ.   ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು.   ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…

  • ಜ್ಯೋತಿಷ್ಯ

    ತಾಯಿ ಚಾಮುಂಡಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ

    ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…