ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಈ ವರ್ಷ ಮದ್ಯ ಮಾರಾಟವಾಗಿದೆ?
ಜನವರಿಯಲ್ಲಿ 51.30 ಲಕ್ಷ ಬಾಕ್ಸ್, 4.43 ಕೋಟಿ ಲೀಟರ್
ಫೆಬ್ರವರಿಯಲ್ಲಿ 47.61 ಲಕ್ಷ ಬಾಕ್ಸ್, 4.11 ಕೋಟಿ ಲೀಟರ್
ಮಾರ್ಚ್‍ನಲ್ಲಿ 44.11 ಲಕ್ಷ ಬಾಕ್ಸ್, 3.80 ಕೋಟಿ ಲೀಟರ್
ಎಪ್ರಿಲ್‍ನಲ್ಲಿ 46.35 ಲಕ್ಷ ಬಾಕ್ಸ್, 4 ಕೋಟಿ ಲೀಟರ್

(ಒಂದು ಬಾಕ್ಸ್ ನಲ್ಲಿ 180 ಎಂಎಲ್ ಇರುವ ಒಟ್ಟು 48 ಬಾಟಲ್‍ಗಳಿರುತ್ತೆ.)ಅಬಕಾರಿ ಇಲಾಖೆ ಕೊಟ್ಟಿರುವ ಈ ಲೆಕ್ಕಾಚಾರದ ಪ್ರಕಾರ 2005 ರಿಂದ ಇಲ್ಲಿಯವರೆಗೆ ಏಪ್ರಿಲ್ ತಿಂಗಳಲ್ಲಿ ಈ ಬಾರಿಯೇ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ಹೆಚ್ಚು ಎಣ್ಣೆ ಮಾರಾಟವಾಗುತ್ತೆ.
ಇದಕ್ಕೆ ಪ್ರತಿ ವರ್ಷ ಅಬಕಾರಿ ಇಲಾಖೆ ಬಳಿ ಇರೋ ದಾಖಲೆಗಳೇ ಸಾಕ್ಷಿ. 2005ರಲ್ಲಿ ಒಂದು ವರ್ಷಕ್ಕೆ, 1 ಕೋಟಿ 44 ಲಕ್ಷ ಬಾಕ್ಸ್ ಗಳು ಮಾರಾಟವಾಗುತ್ತಿದ್ದರೆ, ಅದೇ 2018ರಲ್ಲಿ 5 ಕೋಟಿ 69 ಲಕ್ಷ ಬಾಕ್ಸ್ ಗಳು ಮಾರಾಟವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಮದ್ಯದ ಮಾರಾಟ ಪ್ರಮಾಣದ ಗುರಿಯನ್ನು ವರ್ಷದಿಂದ ವರ್ಷಕ್ಕೆ ಸರಕಾರ ಹೆಚ್ಚಿಸುತ್ತಲೇ ಇದೆ. ಹೀಗಾಗಿ ಪ್ರತಿ ವರ್ಷವೂ ಮದ್ಯ ಮಾರಾಟ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅದರಲ್ಲೂ 2018ರಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ, ಲೋಕಸಭೆ ಉಪ ಚುನಾವಣೆ,
ಎಷ್ಟು ಅಂಗಡಿಗಳಿವೆ?

ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕಾಗಿ ವಿವಿಧ ವರ್ಗದ ಒಟ್ಟು 256 ಲೈಸೆನ್ಸ್ ನೀಡಲಾಗಿದೆ. ಕೆ.ಆರ್.ಪೇಟೆಯಲ್ಲಿ 34, ಮದ್ದೂರಿನಲ್ಲಿ 48, ಮಳವಳ್ಳಿಯಲ್ಲಿ 33, ಮಂಡ್ಯದಲ್ಲಿ 62, ನಾಗಮಂಗಲದಲ್ಲಿ 27, ಪಾಂಡಪುರದಲ್ಲಿ 18 ಹಾಗೂ ಶ್ರೀರಂಗಪಟ್ಟಣದಲ್ಲಿ 35 ಲೈಸೆನ್ಸ್ ಹೊಂದಿರೋ ಬಾರ್ ಆಂಡ್ ರೆಸ್ಟೋರೆಂಟ್‍ಗಳಿವೆ. ಇವೆಲ್ಲ ಲೈಸೆನ್ಸ್ ಹೊಂದಿರೋ ಮದ್ಯ ಮಾರಾಟದ ಕೇಂದ್ರಗಳು. ಆದ್ರೆ, ಲೈಸೆನ್ಸ್ ಇಲ್ಲದೆ, ಹಳ್ಳಿ ಹಳ್ಳಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಮಾಡೋ ಕೇಂದ್ರಗಳು ಅಲ್ಲಲ್ಲಿ ಸಿಗುತ್ವೆ. ಕೆಲವು ಹೋಟೆಲ್‍ಗಳಂತೂ ಅನಧಿಕೃತವಾಗಿ ಬಾರ್ ಆಂಡ್ ರೆಸ್ಟೋರೆಂಟ್‍ಗಳಾಗಿವೆ. ಇಲ್ಲಿ ಹೇಳೋರು ಕೇಳೋರು ಇದ್ದಾರೋ ಇಲ್ವೋ ಗೊತ್ತಿಲ್ಲ.

ಒಂದೆಡೆ ‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಮದ್ಯ ಸೇವನೆ ಮಾಡಬೇಡಿ’ ಎನ್ನುವ ಸರಕಾರ ಮತ್ತೊಂದೆಡೆ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಅಬಕಾರಿ ಇಲಾಖೆಗೆ ಟಾರ್ಗೆಟ್ ನೀಡಿ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುತ್ತಿದೆ. ಯಾಕಂದ್ರೆ, ಸರಕಾರಗಳ ಪ್ರಮುಖ ಆದಾಯದ ಮೂಲಗಳಲ್ಲಿ ಅಬಕಾರಿ ಸುಂಕವೂ ಒಂದು. ಆದ್ರೆ, ಇದರಿಂದಾಗಿ ಮಂಡ್ಯದಲ್ಲಿ ಆಗ್ತಿರೋ ದುಷ್ಪರಿಣಾಮದ ಬಗ್ಗೆ ಯಾವ ನಾಯಕರಿಗೂ ಅರಿವು ಇದ್ದಂತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.
ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ. ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ. ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.
ನೀರಜ್ ಜಾರ್ಜ್ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…
ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…