ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ.
ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು, ಬದುಕು ಮೂರಾಬಟ್ಟೆ ಆಗಿದೆ. ಇನ್ನಾದರೂ ಮಳೆ ಶಾಂತವಾಗಿ ಪ್ರವಾಹ ಇಳಿಯಲಿ ಎಂದು ಸಂತ್ರಸ್ತರು ಪ್ರಕೃತಿಗೆ ಕೈಮುಗಿದು ಬೇಡಿಕೊಳ್ಳುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇತ್ರಾವತಿ ರೌದ್ರ ರೂಪ ತಾಳಿದ್ದು, ಬೆಳ್ತಂಗಡಿ ತಾಲೂಕಿನ ಕಿಲ್ಲೂರು ಪೇಟೆ ಪ್ರವಾಹಕ್ಕೆ ಕಂಗೆಟ್ಟಿದೆ. ಪುಟ್ಟ ಊರಿಗೆ ನುಗ್ಗಿದ ನೇತ್ರಾವತಿ ಅನಾಹುತಗಳನ್ನೇ ಸೃಷ್ಟಿಸಿದ್ದಾಳೆ. ಬೆಳಗಾವಿ ಜಿಲ್ಲೆಯ ನವಿಲುತೀರ್ಥದಲ್ಲಿರುವ ರೇಣುಕಾ ಜಲಾಶಯದಿಂದ ನೀರು ಬಿಟ್ಟಿರುವ ರಭಸಕ್ಕೆ ಮುನವಳ್ಳಿಯ ತೋರಗಣಲ್‍ಕೋಟೆ ಬಳಿರುವ ತೂಗುಸೇತುವೆ ಧ್ವಂಸಗೊಂಡಿದೆ. ಪ್ರವಾಹ ಅಪ್ಪಳಿಸಿದ ರಭಸಕ್ಕೆ ತೂಗು ಸೇತುವೆ ಮೇಲಕ್ಕೆ ಹಾರಿತ್ತು.ಕೊಡಗಿನಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಭಾಗಮಂಡಲ ಸಂಪೂರ್ಣ ಜಲಾವೃತವಾಗಿದೆ.
ಭಗಂಡೇಶ್ವರ ದೇವಸ್ಥಾನದ ಗೋಪುರದವರೆಗೂ ನೀರು ಬಂದಿದ್ದು, ಸತತವಾಗಿ ಸುರಿಯುತ್ತಿರುವ ಮಳೆಯಿಂದ ಕೊಡಗಿನಲ್ಲಿ ಸಾಲು ಸಾಲು ಅವಘಡಗಳು ಸಂಭವಿಸುತ್ತಿವೆ. ಶುಕ್ರವಾರ ರಾತ್ರಿ ಇಡೀ ಮಡಿಕೇರಿಯಲ್ಲಿ ಗಾಳಿ ಸಹಿತ ಮಳೆಯಾಗಿದ್ದು, ಮಡಿಕೇರಿ ಪಟ್ಟಣ ಸೇರಿದಂತೆ ವಿರಾಜಪೇಟೆ, ಸೋಮವಾರಪೇಟೆ ತಾಲೂಕುಗಳಲ್ಲಿ ಭಾರೀ ಮಳೆಯಾಗಿದೆ. ವಿರಾಜಪೇಟೆ ತಾಲೂಕಿನ ನಾಪೋಕ್ಲು ಗ್ರಾಮದಲ್ಲಿ ನೋಡನೋಡುತ್ತಿದ್ದಂತೆ ಮನೆ ಕುಸಿದಿದೆ
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್‌ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್‌ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್‌ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್‌ಗಳು…
ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.
ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…