ಮಾಸ್ತಿ ವೆಂಕಟೇಶ ಅಯ್ಯಂಗಾರರು
ಜನನ : 6 ಜೂನ್ 1891 ಹೊಂಗೆನಹಳ್ಳಿ, ಮಾಲೂರು, ಕೋಲಾರ, ಮೈಸೂರ್ ರಾಜ್ಯ, ಬ್ರಿಟಿಷ್ ಇಂಡಿಯಾ.
ಮರಣ: (ಜೂನ್ 6 – 1986) (ವಯಸ್ಸು 95) ಬೆಂಗಳೂರು, ಕರ್ನಾಟಕ, ಭಾರತ.

ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
ಬಾಲ್ಯ, ಜೀವನ, ವಿದ್ಯಾಭ್ಯಾಸ:-
- ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾ ರ್ “ಪೆರಿಯಾತ್” ಎಂದರೆ ದೊಡ್ಡ ಮನೆಯವರು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು.

ಸಾಹಿತ್ಯ:-
- ಮಾಸ್ತಿ ಕನ್ನಡಿಗರಿಗೆ ಒಂದು ಆದರ್ಶ. ಎಂಥ ಕಷ್ಟ ಕಾಲದಲ್ಲೂ ಅವರು ಜೀವನವನ್ನೆದುರಿಸಿದರು. ಸಾಹಿತ್ಯ ರಚಿಸಿದಂತೆಯೇ ಸಾಹಿತ್ಯ ಪೋಷಕರಾದರು. ಜಿ ಪಿ ರಾಜರತ್ನಂ, ದ ರಾ ಬೇಂದ್ರೆಯಂತಹವರಿಗೆ ಅವರು ಆದರ್ಶರಾಗಿದ್ದರು 1910 ರಲ್ಲಿ ಬರೆದ ರಂಗನ ಮದುವೆ ಎಂಬ ಸಣ್ಣ ಕಥೆಗಳ ಸಂಗ್ರಹದಿಂದ ಹಿಡಿದು ಅವರು ನಿಧನರಾಗುವುದಕ್ಕೆ ಕೆಲವೇ ತಿಂಗಳುಗಳ ಹಿಂದೆ ಪ್ರಕಟವಾದ ‘ಮಾತುಗಾರ ರಾಮಣ್ಣ’ ಎಂಬ ಕೃತಿಯವರೆಗೆ ಅವರು ರಚಿಸಿದ ಕೃತಿಗಳ ಸಂಖ್ಯೆ ೧೨೩.
- ಇದರಲ್ಲಿ ಸಣ್ಣಕತೆಗಳು, ಕಾದಂಬರಿಗಳು, ನಾಟಕಗಳು, ವಿಮರ್ಶೆಗಳು, ಪ್ರಬಂಧಗಳು, ಧಾರ್ಮಿಕ ಕೃತಿಗಳು, ಅನುವಾದ, “ಜೀವನ” ಎಂಬ ಅವರೇ ನಡೆಸುತ್ತಿದ್ದ ಪತ್ರಿಕೆಯಲ್ಲಿ ಬರೆದ ಸಂಪಾದಕೀಯ ಲೇಖನಗಳು, ಕವಿತೆಗಳ ಸಂಗ್ರಹ, ಕಾವ್ಯ ಸೇರಿವೆ. 20ನೆಯ ಶತಮಾನದ ಆರಂಭದ ಕಾಲ. ಕನ್ನಡ ಭಾಷೆಗೆ ಹೇಳಿಕೊಳ್ಳುವಂಥ ಪ್ರೋತ್ಸಾಹವಿರಲಿಲ್ಲ. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಸಾಹಿತ್ಯದಲ್ಲಿ ಗಮನಾರ್ಹ ಕೆಲಸವಾಗಬೇಕಾಗಿದ್ದ ಕಾಲದಲ್ಲಿ ಮಾಸ್ತಿ ಸಾಹಿತ್ಯ ರಚನೆಯ ಕೆಲಸವನ್ನು ಕೈಗೊಂಡರು.

- ಮಾಸ್ತಿ ಬರೆದ ಕಾದಂಬರಿಗಳು ಎರಡು. ಜ್ಞಾನಪೀಠ ಪ್ರಶಸ್ತಿ ಗಳಿಸಿದ ಕೃತಿ ಚಿಕವೀರ ರಾಜೇಂದ್ರ – ಕೊಡಗಿನ ಕಡೆಯ ರಾಜ ಚಿಕವೀರ ರಾಜೇಂದ್ರನನ್ನು ಕುರಿತದ್ದು, ಮತ್ತೊಂದು “ಚನ್ನಬಸವನಾಯಕ”.
- “ಭಾವ” – ಮಾಸ್ತಿ ಅವರ ಆತ್ಮಕಥೆ ಇರುವ ಮೂರು ಸಂಪುಟಗಳ ಗ್ರಂಥ.
ಮುಖ್ಯ ಕೃತಿಗಳು:-
ಸಣ್ಣ ಕತೆಗಳ ಸಂಗ್ರಹ
ನೀಳ್ಗತೆ
ಕಾವ್ಯ ಸಂಕಲನಗಳು

ಜೀವನ ಚರಿತ್ರೆ
ನಾಟಕ
ಕಾದಂಬರಿ
ಪ್ರಶಸ್ತಿಗಳು:-
- ಜ್ಞಾನಪೀಠ ಪ್ರಶಸ್ತಿ (1983).
- ಕರ್ನಾಟಕ ವಿಶ್ವವಿದ್ಯಾಲಯದ ಡಿ. ಲಿಟ್.
- ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ.
- ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪದವಿ.
ಮೂಲ:-ಮಾಸ್ತಿ ವೆಂಕಟೇಶ ಅಯ್ಯಂಗಾರರು