ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರದಂದು ನಡೆದ ರಾಜ್ಯ ಆರೋಗ್ಯ ಇಲಾಖೆಯ ಸಭೆ ವೇಳೆ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಮಕ್ಕಳು ಮೆದುಳು ಜ್ವರದಿಂದ ಸಾವನ್ನಪ್ಪುತ್ತಿರುವುದರ ಬಗ್ಗೆ ಮಾತನಾಡುವ ಬದಲು ಕ್ರಿಕೆಟ್ ಪಂದ್ಯದ ಕುರಿತು ಪ್ರಶ್ನಿಸುತ್ತಿದ್ದು ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುದಕ್ಕೆ ಉದಾಹರಣೆಯಾಗಿದೆ. ‘ಕ್ರಿಕೆಟ್ ಪಂದ್ಯದ ಫಲಿತಾಂಶ ಏನಾಯ್ತು?’ ಎಂದು ಸಚಿವರು ಪ್ರಶ್ನಿಸುತ್ತಿರುವುದು ಮತ್ತು ಮತ್ತೊಬ್ಬ ವ್ಯಕ್ತಿ `4ನೇ ವಿಕೆಟ್ ಹೊಗಿದೆ’ ಎಂದು ಸಭೆಯಲ್ಲಿ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮಕ್ಕಳ ಸಾವಿನ ಕುರಿತು ರಾಜ್ಯದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿರುವುದು ಸರ್ಕಾರಕ್ಕೆ ತೀವ್ರ ಮುಜುಗರ ಸೃಷ್ಟಿಸಿದ್ದು, ಸಚಿವರ ಈ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಈ ಹಿಂದೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಹಾಯಕ ಸಚಿವ ಅಶ್ವಿನಿ ಕುಮಾರ್ ಚೌಬೆ ತೂಕಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಆ ಬಳಿಕ ಈ ಬಗ್ಗೆ ಚೌಬೆ ಅವರು ಸ್ಪಷ್ಟಿಕರಿಸಿ, ‘ನಾನು ನಿದ್ರಿಸುತ್ತಿರಲಿಲ್ಲ, ಪತ್ರಿಕಾಗೋಷ್ಠಿ ಬಗ್ಗೆ ಯೋಚಿಸುತ್ತಿದ್ದೆ’ ಎಂದು ಹೇಳಿದ್ದರು. ಆ ಬಳಿಕ ಸೋಮವಾರ ಸ್ವತಃ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರೇ, ಸಾವಿನ ಬಗ್ಗೆ ಪ್ರತಿದಿನ ಹೇಳಿಕೆಗಳನ್ನು ನೀಡುವುದಿಲ್ಲ ಎಂದಿದ್ದರು.

ಆಸ್ಪತ್ರೆಗೆ ದಾಖಲಾಗಿರುವವರು, ನೀಡಲಾಗುತ್ತಿರುವ ಚಿಕಿತ್ಸೆ, ಮೃತಪಟ್ಟ ಕುಟುಂಬಕ್ಕೆ ನೀಡುವ ಪರಿಹಾರ, ನೆರವುಗಳ ಕುರಿತು ವರದಿ ಸಲ್ಲಿಸುವಂತೆ ಮಾನವ ಹಕ್ಕುಗಳ ಆಯೋಗ ಆರೋಗ್ಯ ಸಚಿವಾಲಯಕ್ಕೆ ಕೇಳಿದೆ. ಹಾಗೆಯೇ ಈ ಬಗ್ಗೆ ನಾಲ್ಕು ವಾರದೊಳಗೆ ಉತ್ತರ ನೀಡುವಂತೆ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…
ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿ ರಿಯಾಜ್ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…
ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ