ಸುದ್ದಿ

ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

45

ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರದಂದು ನಡೆದ ರಾಜ್ಯ ಆರೋಗ್ಯ ಇಲಾಖೆಯ ಸಭೆ ವೇಳೆ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಮಕ್ಕಳು ಮೆದುಳು ಜ್ವರದಿಂದ ಸಾವನ್ನಪ್ಪುತ್ತಿರುವುದರ ಬಗ್ಗೆ ಮಾತನಾಡುವ ಬದಲು ಕ್ರಿಕೆಟ್ ಪಂದ್ಯದ ಕುರಿತು ಪ್ರಶ್ನಿಸುತ್ತಿದ್ದು ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುದಕ್ಕೆ ಉದಾಹರಣೆಯಾಗಿದೆ. ‘ಕ್ರಿಕೆಟ್ ಪಂದ್ಯದ ಫಲಿತಾಂಶ ಏನಾಯ್ತು?’ ಎಂದು ಸಚಿವರು ಪ್ರಶ್ನಿಸುತ್ತಿರುವುದು ಮತ್ತು ಮತ್ತೊಬ್ಬ ವ್ಯಕ್ತಿ `4ನೇ ವಿಕೆಟ್ ಹೊಗಿದೆ’ ಎಂದು ಸಭೆಯಲ್ಲಿ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮಕ್ಕಳ ಸಾವಿನ ಕುರಿತು ರಾಜ್ಯದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿರುವುದು ಸರ್ಕಾರಕ್ಕೆ ತೀವ್ರ ಮುಜುಗರ ಸೃಷ್ಟಿಸಿದ್ದು, ಸಚಿವರ ಈ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಈ ಹಿಂದೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಹಾಯಕ ಸಚಿವ ಅಶ್ವಿನಿ ಕುಮಾರ್ ಚೌಬೆ ತೂಕಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಆ ಬಳಿಕ ಈ ಬಗ್ಗೆ ಚೌಬೆ ಅವರು ಸ್ಪಷ್ಟಿಕರಿಸಿ, ‘ನಾನು ನಿದ್ರಿಸುತ್ತಿರಲಿಲ್ಲ, ಪತ್ರಿಕಾಗೋಷ್ಠಿ ಬಗ್ಗೆ ಯೋಚಿಸುತ್ತಿದ್ದೆ’ ಎಂದು ಹೇಳಿದ್ದರು. ಆ ಬಳಿಕ ಸೋಮವಾರ ಸ್ವತಃ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರೇ, ಸಾವಿನ ಬಗ್ಗೆ ಪ್ರತಿದಿನ ಹೇಳಿಕೆಗಳನ್ನು ನೀಡುವುದಿಲ್ಲ ಎಂದಿದ್ದರು.

ಆಸ್ಪತ್ರೆಗೆ ದಾಖಲಾಗಿರುವವರು, ನೀಡಲಾಗುತ್ತಿರುವ ಚಿಕಿತ್ಸೆ, ಮೃತಪಟ್ಟ ಕುಟುಂಬಕ್ಕೆ ನೀಡುವ ಪರಿಹಾರ, ನೆರವುಗಳ ಕುರಿತು ವರದಿ ಸಲ್ಲಿಸುವಂತೆ ಮಾನವ ಹಕ್ಕುಗಳ ಆಯೋಗ ಆರೋಗ್ಯ ಸಚಿವಾಲಯಕ್ಕೆ ಕೇಳಿದೆ. ಹಾಗೆಯೇ ಈ ಬಗ್ಗೆ ನಾಲ್ಕು ವಾರದೊಳಗೆ ಉತ್ತರ ನೀಡುವಂತೆ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

    ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…

  • ಜೀವನಶೈಲಿ, ಸೌಂದರ್ಯ

    4 ಮೊಮ್ಮಕ್ಕಳ ಈ ಅಜ್ಜಿಯ ಬ್ಯೂಟಿ ಸಿಕ್ರೆಟ್ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.

  • ಸುದ್ದಿ

    ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತಂದ ಬಿಬಿಎಂಪಿ,.!

    ಬಿಬಿಎಂಪಿ  ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ  ಹೊಸ ಯೋಜನೆಯನ್ನು  ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು  ಮುಖ್ಯ ಕಾರಣವೇನೆಂದರೆ  ಬಾಣಂತಿಯರಿಗಾಗಿ ಉಪಯುಕ್ತ  ಪೌಷ್ಟಿಕಾಂಶ  ಮತ್ತು ಅವರಿಗಾಗಿ ಹಾಲು ಸಹ  ನೀಡಬೇಕು  ಎಂದು ನಿರ್ಧರಿಸಲಾಗಿದೆ.  ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಶುಭಾವಾಗುತ್ತೋ, ಅಶುಭಾವಾಗುತ್ತೋ ನೋಡಿ ತಿಳಿಯಿರಿ…

    ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…