ತಂತ್ರಜ್ಞಾನ

ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂದೇಶ ಕಳುಹಿಸಲು ಹೊಸ ಆ್ಯಪ್‌..!ತಿಳಿಯಲು ಈ ಲೇಖನ ಓದಿ…

227

ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್‌ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್‌ ಅನ್ನು ಯಾವುದೇ ಸ್ಮಾರ್ಟ್‌ಫೋನ್‌ಗೆ ಅಳವಡಿಸಬಹುದು. ನೆಟ್‌ವರ್ಕ್‌ ಇಲ್ಲದಿದ್ದರೂ ಈ ಆ್ಯಪ್‌ ಹಲವು ಕಿಲೋ ಮೀಟರ್‌ಗಳ ದೂರದವರೆಗೂ ವೈ–ಫೈ ಸಿಗ್ನಲ್‌ ಹೊರಸೂಸುತ್ತದೆ.

ಅಪಘಾತ, ನೈಸರ್ಗಿಕ ವಿಕೋಪ, ಅಗ್ನಿ ಅವಘಡ ಮುಂತಾದ ಅನಾಹುತಗಳು ಸಂಭವಿಸಿದಾಗ ತುರ್ತು ಸಂದೇಶ ಕಳುಹಿಸಲು ಈ ಆ್ಯಪ್‌ ಸಹಕಾರಿಯಾಗುತ್ತದೆ. ಸ್ಪೇನ್‌ನ ಯುನಿವರ್ಸಿಡಾಡ್‌ ಡೆ ಅಲಿಕೇಂಟ್‌ನ (ಯುಎ) ವಿಜ್ಞಾನಿಗಳು ಈ ಆ್ಯಪ್‌ ರೂಪಿಸಿದ್ದಾರೆ.

ಇದರಿಂದ ನೆಟ್‌ವರ್ಕ್‌ ಇಲ್ಲದೆ ತೊಂದರೆಯಲ್ಲಿ ಸಿಲುಕಿರುವ ವ್ಯಕ್ತಿಯ ಸ್ಥಳದ ನಿಖರ ಮಾಹಿತಿ ದೊರೆಯುತ್ತದೆ. ಜತೆಗೆ ‘ನಾನು ಗಾಯಗೊಂಡಿದ್ದೇನೆ’, ನನಗೆ ಸಹಾಯ ಬೇಕಿದೆ’ ಎನ್ನುವ ಸಂದರ್ಭಾನುಸಾರ ಸಂದೇಶ ಕಳುಹಿಸಬಹುದು. ಇದರಿಂದ ಅವರು ಸಹಾಯ ಪಡೆಯಲು ಅನುಕೂಲವಾಗುತ್ತದೆ’ ಎಂದು ಯುಎಯ ಅಧ್ಯಾಪಕ ಮತ್ತು ಆ್ಯಪ್‌ ರೂಪಿಸಿರುವ ಏಂಜೆಲ್‌ ಬರ್ನಾ ತಿಳಿಸಿದ್ದಾರೆ.

ಈ ಉಪಕರಣದಲ್ಲಿ ಚಿಕ್ಕ ಅಂಟೆನಾ ಇದ್ದು, ಅದು ಅಪಾಯದಲ್ಲಿರುವ ವ್ಯಕ್ತಿಯ ಸ್ಮಾರ್ಟ್‌ಫೋನ್‌ಗೆ ಸಂಪರ್ಕ ಕಲ್ಪಿಸುತ್ತದೆ. ಆದರೆ, ಇಷ್ಟೆಲ್ಲ ಆಗುವ ಮೊದಲು ತೊಂದರೆಯಲ್ಲಿರುವ ವ್ಯಕ್ತಿ ತನ್ನ ಮೊಬೈಲ್‌ನಲ್ಲಿರುವ ಈ ಆ್ಯಪ್‌ ಅನ್ನು ಚಾಲನೆಗೊಳಿಸಿರಬೇಕು’ ಎಂದು ಅವರು ವಿವರಿಸಿದ್ದಾರೆ.

ದುರಂತಗಳು ಸಂಭವಿಸಿದ ಸಂದರ್ಭಗಳಲ್ಲಿ ಸಂಕಷ್ಟದಲ್ಲಿ ಸಿಲುಕಿದ ವ್ಯಕ್ತಿ ಕಳುಹಿಸುವ ತುರ್ತು ಸಂಕೇತಗಳನ್ನು ಸ್ವೀಕರಿಸಲು ರಕ್ಷಣಾ ತಂಡದ ಬಳಿಯೂ ಉಪಕರಣ ಇರಬೇಕು. ಆ ಉಪಕರಣವನ್ನು ಸಹ ಈ ಸಂಶೋಧನಾ ತಂಡ ತಯಾರಿಸಿದೆ.

ಪ್ರಾಯೋಗಿಕ ಪರೀಕ್ಷೆಯಲ್ಲಿ ಇದರ ವ್ಯಾಪ್ತಿ 2–3 ಕಿಲೋ ಮೀಟರ್‌ ಇದ್ದು, ಇದನ್ನು ಇನ್ನಷ್ಟು ವಿಸ್ತರಿಸಬಹುದು. ಜತೆಗೆ ಕಡಿಮೆ ದರದಲ್ಲೂ ಇದು ಲಭ್ಯವಾಗಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್..ಮೇ 28 ಕ್ಕೆ ಮುಗಿಯಲಿದೆ ಸಿದ್ದರಾಮಯ್ಯನವರ ಸರ್ಕಾರ..ತಿಳಿಯಲು ಈ ಲೇಖನ ಓದಿ…

    ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…

  • ಜ್ಯೋತಿಷ್ಯ

    ಆಂಜನೇಯನ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…

  • ಉಪಯುಕ್ತ ಮಾಹಿತಿ

    ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

    ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….

  • ಸುದ್ದಿ

    ಅಡುಗೆ ಸೋಡಾ ಬಗ್ಗೆ ನಿಮಗೆ ಗೊತ್ತಿರದ ಮಾಹಿತಿ..! ಸೋಡಾ ನೀರು ಕುಡಿದ್ರೆ ಎಷ್ಟೆಲ್ಲಾ ಲಾಭ ಇದೆ ಗೊತ್ತಾ…?

    ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…