ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬೆಂಗಳೂರಿನ ನಿವಾಸಿ ಆನಂದ್ ರಾವ್ ಆನ್ಲೈನ್ ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬರಿಂದ ಮೋಸ ಹೋಗಿದ್ದಾರೆ. ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಚಾಟ್ ಮಾಡುತ್ತಾ ಆನಂದ್ ರಾವ್ ಸ್ನೇಹ ಸಂಪಾದಿಸಿದ್ದಾಳೆ. ಹೀಗೆ ಸ್ನೇಹ ವಾಟ್ಸಪ್ ನಲ್ಲಿಯೂ ಮುಂದುವರೆದು, ಹಲವು ದಿನಗಳವರೆಗೂ ಇಬ್ಬರೂ ಚಾಟ್ ಮಾಡಿಕೊಂಡಿದ್ದಾರೆ.

ಯುವತಿ ಇಂಗ್ಲೆಂಡ್ ನಿಂದ ಬೆಂಗಳೂರು ಬರುತ್ತಿದ್ದೇನೆ ಅಂತಾ ಆನಂದ್ ರಾವ್ ಗೆ ಮೆಸೇಜ್ ಹಾಕಿದ್ದಾಳೆ. ಸ್ವಲ್ಪ ಸಮಯದ ಬಳಿಕ ಯುವತಿ ತಾನು ದೆಹಲಿಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನನ್ನನ್ನು ಹಿಡಿದಿದ್ದಾರೆ ಅಂತಾ ಮೆಸೇಜ್ ಕಳುಹಿಸಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು ಒಂದೂವರೆ ಲಕ್ಷ ರೂ. ಹಣ ನೀಡಿದ್ರೆ ನನ್ನನ್ನು ಬಿಡ್ತಾರೆ ಅಂತಾ ಸುಳ್ಳು ಹೇಳಿದ್ದಾಳೆ.

ಇತ್ತ ಗೆಳತಿ ತೊಂದರೆಯಲ್ಲಿ ಸಿಲುಕಿದ್ದಾಳೆ ಎಂದು ಆನಂದ್ರಾವ್ ಯುವತಿಯ ಖಾತೆಗೆ ಒಂದು ಲಕ್ಷದ ಐದು ಸಾವಿರ ರೂ. ಹಣ ಜಮಾ ಮಾಡಿದ್ದಾರೆ. ಹಣ ಖಾತೆಗೆ ಬಂದ ಕೂಡಲೇ ಯುವತಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.

ತಾನು ಮೋಸ ಹೋಗಿದ್ದೇನೆ ಎಂದು ಅರಿತ ಕೂಡಲೇ ಆನಂದ್ರಾವ್ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..
ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.