News

ರಾಜಕೀಯ

20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

29

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ.

ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ ಎದ್ದಿದೆ.

ಲೋಕಸಭಾ ಚುನಾವಣೆಯ ಫಲಿತಾಂಶದ ಮೇಲೆ ಮೈತ್ರಿ ಸರ್ಕಾರದ ಭವಿಷ್ಯ ನಿಂತಿದೆ ಎನ್ನುವ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಕಾಂಗ್ರೆಸ್ಸಿನ 20 ಶಾಸಕರು ಯಡಿಯೂರಪ್ಪನವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗಿದ್ದು, ಯಡಿಯೂರಪ್ಪ ಅವರಿಗೆ ಸುಮಾರು 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಫೋನ್ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಸಿಎಂ ಕುಮಾರಸ್ವಾಮಿ ಸರ್ಕಾರದ ಪತನಕ್ಕೆ ಕೌಂಟ್‍ಡೌನ್ ಶುರುವಾಯ್ತಾ ಎನ್ನುವ ಪ್ರಶ್ನೆ ಎದ್ದಿದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಭವಿಷ್ಯ

    ಫೆಬ್ರವರಿಯಲ್ಲಿ ‘ಮೋದಿ’ಗೆ ಗಂಡಾಂತರ..!ಕಿಂಗ್ ಮೇಕರ್ ಆಗಲಿದ್ದಾರೆ “ಎಚ್’ಡಿಕೆ”!ಈ ಗುರೂಜಿಯಿಂದ ಭವಿಷ್ಯ…

    ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

  • ಸುದ್ದಿ

    ಅಧಿಕಾರಕ್ಕೆ ಬರುತ್ತಿದ್ದಂತೆ ಬಯಲಾಯ್ತು BSY ಸರ್ಕಾರದ ಬಹುಕೋಟಿ ಗುಡ್ ರಿಚ್ ಹಗರಣ…!!

    ಜಿಂದಾಲ್​ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್​ರಿಚ್​ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್​​​ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…

  • ಸುದ್ದಿ

    ಮೊಬೈಲ್ ನಂಬರ್ ಬದಲಿಸುವ ಮುನ್ನ ಹೆಚ್ಚರ!..ಈ ಸುದ್ದಿ ತಿಳಿದರೆ ನಡುಕ ಹುಟ್ಟಿಸುತ್ತಿದೆ!

    ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್​ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…

  • ಉಪಯುಕ್ತ ಮಾಹಿತಿ

    ನಿಮಗೆ ಕೊಟ್ಟಿರುವ ಚೆಕ್ ಬೌನ್ಸ್ ಆದರೆ ಏನು ಮಾಡಬೇಕು,ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ‌.

    ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…