ಕರ್ನಾಟಕ

ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

521

ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು. ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ವಿಧಾನಸಭೆ ಕಲಾಪದಲ್ಲಿ ರೈತರ ಅಲ್ಪಾವಧಿ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.

ಮುಖ್ಯಮಂತ್ರಿಗಳು ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದು, ಇದೀಗ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.

ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಮನವಿ ಮಾಡಿದ್ದಾರೆ.

ನೀವು ವಾಣಿಜ್ಯ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿಯವರಿಗೆ ಟ್ವಿಟ್ಟರ್ ಮೂಲಕ ಸಿಎಂ ಪರೋಕ್ಷವಾಗಿಯೇ ಚಾಲೆಂಜ್ ಹಾಕಿದ್ದಾರೆ.

ಹಾಗಾದ್ರೆ ಎಷ್ಟು ಮತ್ತು ಯಾವ ರೀತಿಯ ಸಾಲ ಮನ್ನಾ ಆಗಿದೆ? 

ರಾಜ್ಯ ಸರ್ಕಾರದಿಂದ ಸಹಕಾರಿ ಬ್ಯಾಂಕ್‍ಗಳಿಂದ ರೈತರು ಪಡೆದ ಅಲ್ಪವಾಧಿ 50 ಸಾವಿರ ಸಾಲವನ್ನು ಮನ್ನಾ ಮಾಡಲಾಗುವುದು. 2017ರ ಜೂನ್ 20ಕ್ಕೆ ಕೊನೆಗೊಂಡಂತೆ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಒಟ್ಟು 8165 ಕೋಟಿ ರೂ. ಅಲ್ಪವಾಧಿ ಸಾಲ ಮನ್ನಾವಾಗಲಿದ್ದು ಇದರಿಂದಾಗಿ 22 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ನಿಮ್ಮ ಈ ದಿನದ ರಾಶಿ ಫಲ ಹೇಗಿದೆ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…

  • ರಾಜಕೀಯ

    ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸ ಕ್ರಾಂತಿ..!ತಿಳಿಯಲು ಈ ಲೇಖನ ಓದಿ …

    ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.

  • ಸಿನಿಮಾ

    ರೊಬೋ-2.0 ಚಿತ್ರದ ಆ್ಯಮಿ ಜಾಕ್ಸನ್ ಫಸ್ಟ್ ಲುಕ್ ಬಿಡುಗಡೆ…! ತಿಳಿಯಲು ನೋಡಿ…

    ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ

  • ಸುದ್ದಿ

    ಎನ್ ಡಿಎ 2.0 ತನ್ನ ಮೊದಲ ಐದು ವರ್ಷಗಳ ಆರ್ಥಿಕ ಕಾರ್ಯತಂತ್ರ ಯೋಜನೆ ಜಾರಿಗೆ ತರಲಿ: ಕಿರಣ್ ಮಜುಂದಾರ್ ಶಾ ಹೆಳಿಕೆ…..

    ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…

  • govt

    ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ

    ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್‌ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್‌ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…