ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ ನಿರಾಕರಿಸಿ ಎಲ್ಲರಿಗೂ ಮಾದರಿಯಾದ ವರನಿಗೆ ಈ ಉಡುಗೊರೆ ನೋಡಿ ಸಿಕ್ಕಪಟ್ಟೆ ಖುಷಿಯಾಗಿದೆ. ಈ ವಿಶೇಷ ಉಡುಗೊರೆ ವಿಚಾರ ಸದ್ಯ ಎಲ್ಲೆಡೆ ಬಾರಿ ಸದ್ದು ಮಾಡುತ್ತಿದೆ.
ನಾನು ಯಾವುದೇ ವರದಕ್ಷಿಣೆ ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೆ. ಆದರೆ ನಾನು ಕಲ್ಯಾಣ ಮಂಟಪಕ್ಕೆ ಬಂದಾಗ, ಪುಸ್ತಕಗಳ ಬೃಹತ್ ರಾಶಿಯನ್ನು ಉಡುಗೊರೆಯಾಗಿ ಕಂಡು ತುಂಬಾ ಆಶ್ಚರ್ಯವಾಯಿತು ಎಂದು ಬರಿಕ್ ಹೇಳಿದ್ದಾರೆ. ಹಾಗೆಯೇ ನನ್ನ ಪತಿಗೆ ಓದುವ ಹಂಬಲ ಹೆಚ್ಚು. ನನಗೂ ಓದುವ ಹವ್ಯಾಸವಿದೆ. ಇದನ್ನು ತಿಳಿದ ನನ್ನ ತಂದೆ ಈ ಗಿಫ್ಟ್ ಕೊಟ್ಟಿದ್ದಾರೆ ಎಂದು ವಧು ತಿಳಿಸಿದ್ದಾರೆ.
ಈ ಬಗ್ಗೆ ವಧುವಿನ ಕುಟುಂಬದವರು ಮಾತನಾಡಿ, ಈ ಪುಸ್ತಕಗಳನ್ನು ಕೊಲ್ಕತ್ತಾ ಕಾಲೇಜು ರಸ್ತೆ, ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಪ್ರಕಾಶನವಾದ ಉದ್ಧೋಧನ್ ಪಬ್ಲಿಷ್ ಹೌಸ್ನಿಂದ ಖರೀದಿಸಿದ್ದೇವೆ. ಈ ಪುಸ್ತಕ ಸಂಗ್ರಹಣೆಯಲ್ಲಿ ರವೀಂದ್ರನಾಥ ಟ್ಯಾಗೋರ್, ಬಂಕಿಮ ಚಂದ್ರ ಚಟ್ಟೋಪಾಧ್ಯಾಯ, ಮತ್ತು ಶರತ್ ಚಂದ್ರ ಚಟ್ಟೋಪಾಧ್ಯಾಯವರ ಸಂಪೂರ್ಣ ಕೃತಿಗಳು ಇವೆ ಎಂದರು.
ವರದಕ್ಷಿಣೆ ಪಡೆಯುವುದು ಹಾಗೂ ಕೊಡುವುದು ಅಪರಾಧ ಎಂದು ತಿಳಿದಿದ್ದರೂ ಅನೇಕರು ವರದಕ್ಷಿಣೆಯಿಲ್ಲದೆ ಮದುವೆ ಆಗುವುದಿಲ್ಲ. ಇಂತಹ ಜನರ ನಡುವೆಯೂ ಸೂರ್ಯಕಾಂತ್ ಅವರ ತರಹ ವರದಕ್ಷಿಣೆ ನಿರಾಕರಿಸುವವರ ಸಂಖ್ಯೆ ಕಡಿಮೆ. ಸೂರ್ಯಕಾಂತ್ ಅವರು ಇತರರಿಗೆ ಮಾದರಿ ಎಂದು ಎಲ್ಲೆಡೆ ಪ್ರಶಂಸೆಯ ಮಾತುಗಳು ಕೇಳಿಬರುತ್ತಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ
ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…