ಸಿನಿಮಾ

ವಿಷ್ಣು-ಸೌಂದರ್ಯ ಸಾವಿಗೆ ಇವಳೇ ಕಾರಣನಾ..!ಮತ್ತೆ ಸುದ್ದಿಯಾಗುತ್ತಿದೆ ನಾಗವಲ್ಲಿ..!ತಿಳಿಯಲು ಈ ಲೇಖನ ಓದಿ…

1078

ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.


ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ವಿಷ್ಣುವರ್ಧನ್ ಹಾಗೂ ಸೌಂದರ್ಯ ಸಾವಿಗೆ ನಾಗವಲ್ಲಿ ಕಾರಣನಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ.

ಅಷ್ಟೇ ಅಲ್ಲ, ಚಿತ್ರತಂಡ ನಾಗವಲ್ಲಿಯನ್ನು ಹುಡುಕಿಕೊಂಡು ಆಕೆಯ ಅರಮನೆಗೆ ಹೋಗಿದೆ. ತಿರುವನಂತಪುರದ ನಾಗವಲ್ಲಿ ಪ್ಯಾಲೇಸ್‍ನಲ್ಲೂ ಚಿತ್ರೀಕರಣ ಮಾಡಿದೆ. ಕೇರಳ ಸರ್ಕಾರದ ಅನುಮತಿ ಪಡೆದು ಐದು ದಿನಗಳ ಕಾಲ ಅರಮನೆಯಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ.

`ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಚಿತ್ರವನ್ನು ಅರುಣ್ ಎನ್ನುವವರು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ವಿಕ್ರಮ್ ಕಾರ್ತಿಕ್ ನಾಯಕರಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಎರಡು ಶೇಡ್‍ನಲ್ಲಿ ಕಾಣಿಸಿಕೊಂಡಿದ್ದಾರಂತೆ. ರಾಜ ಹಾಗೂ ಪತ್ರಕರ್ತನಾಗಿ ನಟಿಸಿದ್ದಾರೆ.

ಇನ್ನು ವೈಷ್ಣವಿ ನಾಯಕಿಯಾಗಿ ನಟಿಸಿದ್ದಾರೆ. `ಆಪ್ತರಕ್ಷಕ’ದಲ್ಲಿ ಸೌಂದರ್ಯ ಅವರು ಮಾಡಿದಂತಹ ಪಾತ್ರವೇ ಇಲ್ಲಿ ಸಿಕ್ಕಿದೆಯಂತೆ. ಫೆಬ್ರವರಿ ತಿಂಗಳಲ್ಲಿ ಚಿತ್ರ ತೆರೆಕಾಣುವ ಸಾಧ್ಯತೆ ಇದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ