ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧಕ-೧ , ದ.ರಾ.ಬೇಂದ್ರೆ ಯವರ ಜೀವನ ಮತ್ತು ಅವರ ಸಾಧನೆ ಬಗ್ಗೆ ಕಿರು ಲೇಖನ.
( ನಿಮ್ಮ ಅಭಿಪ್ರಾಯ ಮತ್ತು ಮುಂದಿನ ಸಾಧಕರನ್ನು ನೀವೇ ನಮಗೆ ತಿಳಿಸಿ )

“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ(ಅಂಬವ್ವ). ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ. ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯ ಕುಟುಂಬ. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗ ಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಂ.ಎ. ಮಾಡಿಕೊಂಡು ಕೆಲಕಾಲ (೧೯೪೪ – ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ “ಕೃಷ್ಣ ಕುಮಾರಿ”-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.

![]()
ಬೇಂದ್ರೆ ಸ್ಮಾರಕ, ಧಾರವಾಡ
ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ “ಪ್ರಭಾತ” ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. “ಗರಿ”, “ಕಾಮಕಸ್ತೂರಿ “, “ಸೂರ್ಯಪಾನ”, “ನಾದಲೀಲೆ”, “ನಾಕುತಂತಿ” ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ “ಗೆಳೆಯರ ಗುಂಪು” ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು.

(ಪ್ರಥಮ ಆವೃತ್ತಿಯ ವರ್ಷದೊಂದಿಗೆ) ಅಂಬಿಕಾತನಯದತ್ತರ ಸಮಗ್ರ ಕಾವ್ಯ ೬ ಸಂಪುಟಗಳು


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್‌ನ ಕೈನ್ಸ್‌ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…
ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…
ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್‌ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್, ಭಾರತೀಯ ಏರ್‌ಲೈನ್ಸ್ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.