ಸುದ್ದಿ

ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

26

 ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ.

ಇವರ ಆಪ್ತರು ಹಾಗೂ ಹಿರಿಯ ಮುಖಂಡರಾದ ರಮೇಶ್‍ಕುಮಾರ್ ಕೂಡ ಸದಾ ಎಚ್ಚರಿಸುತ್ತಿದ್ದಾರೆ. ಹಾಗಾಗಿ ಸಿದ್ದರಾಮಯ್ಯನವರು ಯಾವುದೇ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುತ್ತಿಲ್ಲ. ಎಲ್ಲರೊಂದಿಗೆ ಸಮಾಲೋಚನೆ ನಡೆಸಿ ಚರ್ಚೆಗೆ ಮುಂದಾಗುತ್ತಿದ್ದಾರೆ. ಪ್ರತಿಪಕ್ಷ ಬಿಜೆಪಿಯನ್ನು ಯಾವ ರೀತಿ ಕಟ್ಟಿಹಾಕಬೇಕೆಂಬ ಸಲಹೆಗಳನ್ನು ಪಡೆದು ಹೆಜ್ಜೆ ಇಡುತ್ತಿದ್ದಾರೆ.

ಮುಂಬರುವ ಉಪಚುನಾವಣೆಯ ಹೊಣೆ ಕೂಡ ಇವರ ಹೆಗಲ ಮೇಲಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೆಚ್ಚಿನ ಸ್ಥಾನಗಳನ್ನು ಪಡೆಯುವುದು ಇವರ ಉದ್ದೇಶವಾಗಿದೆ. ಈಗಾಗಲೇ ಹಿರಿಯ ಕಾಂಗ್ರೆಸ್ ನಾಯಕರು ಇವರ ವಿರುದ್ಧ ಕತ್ತಿ ಮಸೆದಿದ್ದರು. ಅಲ್ಲದೆ ಹೈಕಮಾಂಡ್‍ಗೆ ದೂರು ಕೂಡ ನೀಡಿದ್ದರು. ಹಾಗಾಗಿ ಅವೆಲ್ಲವನ್ನೂ ಸಿದ್ದು ಮೆಟ್ಟಿ ನಿಲ್ಲಬೇಕಾದ ಹಿನ್ನೆಲೆಯಲ್ಲಿ ಈಗ ತಮ್ಮ ವರಸೆ ಬದಲಿಸಿ ಎಲ್ಲರೊಟ್ಟಿಗೆ ಹೆಜ್ಜೆ ಹಾಕುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಟ್ರೊಲ್ ಪೇಜ್ ಗಳಿಗೆ ಆಗ ತುತ್ತಾಗಿದ್ದಅಗ್ನಿಶಾಕ್ಷಿ ಈಗ ಪುಟ್ಟಗೌರಿ ಧಾರಾವಾಹಿ

    ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.

  • ಸುದ್ದಿ

    ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

    ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…

  • ಸುದ್ದಿ

    ವೇಶ್ಯೆಯರನ್ನೂ ಬಿಡದ ಕಾಮುಕರು, ಮೂವರ ಮೇಲೆ 9 ಮಂದಿಯಿಂದ ಸಾಮೂಹಿಕ ಅತ್ಯಾಚಾರ…!

    ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…

  • ಸುದ್ದಿ

    ನಟಿ ಕಾಜಲ್‍ಗಾಗಿ ಬರೋಬ್ಬರಿ 60 ಲಕ್ಷ ರೂ. ಕಳೆದುಕೊಂಡ ಅಭಿಮಾನಿ…!

    ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್‌ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…

  • ವ್ಯಕ್ತಿ ವಿಶೇಷಣ

    ಕನ್ನಡ ಭಾಷೆಯಲ್ಲೇ2 ಸಾವಿರ ತೀರ್ಪು ನೀಡಿದ ‘ಮಿಟ್ಟಲಕೋಡ ‘ ಭಾಷಾ ಪ್ರೇಮದ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

    ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಹೇಳಿದ್ದರು.

  • ದೇವರು-ಧರ್ಮ

    ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…