ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಆಯೋಗದ ಸಮಿತಿ ಸದಸ್ಯರು, ಮನುಷ್ಯರಾಗಿ ಇಂತಹ ಹೀನ ಕೃತ್ಯಗಳನ್ನು ಸಹಿಸಲಸಾಧ್ಯ ಎಂದು ಆಯೋಗ ಸದಸ್ಯರು ಹೇಳಿದ್ದಾರೆ. ಸಂತ್ರಸ್ತ ಯುವಕ ಫಾರೂಖ್ ಅಹ್ಮದ್ ದಾರ್‍ಗೆ ಮುಂದಿನ 6 ವಾರದ ಒಳಗಡೆ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ದೇಶದಲ್ಲಿ ಶಾಂತಿ ಸುವ್ಯವಸ್ಥೆ ರಕ್ಷಣೆಗೆ ಹಲವು ಕಾನೂನುಗಳಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲೂ ಇಂತಹ ಕೃತ್ಯಗಳಿಗೆ ಕಾನೂನು ನೆರವು ನಾಗರಿಕ ಸಮಾಜದಲ್ಲಿ ಆರೋಪಿಯನ್ನು ಹೀಗೆ ಹೀನಾಯವಾಗಿ ನಡೆಸಿಕೊಳ್ಳುವುದು ಸರಿಯಲ್ಲ ಎಂದು ಮಾನವ ಹಕ್ಕು ಆಯೋಗ ಹೇಳಿದೆ.
ಈ ಪ್ರಕರಣದ ನಡೆದ ಬಳಿಕ ಭಾರತೀಯ ಸೇನೆ ಮಾನವ ಗುರಾಣಿಯಾಗಿ ಯುವಕನನ್ನು ಬಳಸಿದ್ದಕ್ಕೆ, ಲೀತುಲ್ ಗೊಗೋಯ್ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿತ್ತು. ಈ ಸುದ್ದಿ ಚರ್ಚೆಯಾಗುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾಗರಿಕರ ಜೀವ ರಕ್ಷಿಸಲು ನಾನು ಈ ಕೆಲಸ ಮಾಡಬೇಕಾಯಿತು ಎಂದು ಹೇಳಿದ್ದರು.
ಏನಿದು ಪ್ರಕರಣ?
ಕಳೆದ ಏಪ್ರಿಲ್’ನಲ್ಲಿ ಶ್ರೀನಗರ ಲೋಕಸಭೆಯ ಉಪಚುನಾವಣೆ ನಡೆದಿದ್ದು,ಈ ಚುನಾವಣೆಯನ್ನು ಕಾಶ್ಮೀರ ಪ್ರತ್ಯೇಕವಾದಿಗಳು ವಿರೋಧಿಸಿದ್ದರು. ಚುನಾವಣೆಗೆ ನಿಯೋಜನೆಗೊಂಡಿದ್ದ ಸೇನಾ ಸಿಬ್ಬಂದಿಯನ್ನು ಪ್ರತಿಭಟನಾಕಾರರು ಸುತ್ತುವರೆದು ದಾಳಿ ನಡೆಸುತ್ತಿದ್ದರು. ಆಗ ಕಾಶ್ಮೀರದಲ್ಲಿ ಭುಗಿಲೆದ್ದಿದ್ದ ವ್ಯಾಪಕ ಹಿಂಸಾಚಾರ ಮತ್ತು ಕಲ್ಲು ತೂರಾಟ ನಿಗ್ರಹಕ್ಕಾಗಿ ಸೇನಾ ಯೋಧ ಮೇಜರ್ ನಿತಿನ್ ಗಗೋಯ್ ಅವರು, ಕಲ್ಲು ತೂರಾಟಗಾರರ ನಾಯಕ ರೂಕ್ ಅಹ್ಮದ್ ದಾರ್ ನನ್ನು ಸೇನಾವಾಹನಕ್ಕೆ ಕಟ್ಟಿ ಮಾನವ ಗುರಾಣಿಯಾಗಿ ಬಳಕೆ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.
ಈ ಕುರಿತು ಸೇನೆ ತನಿಖೆಗೆ ಆದೇಶಿಸಿದ್ದು, ನಿತಿನ್ ಗಗೋಯ್ಅ ವರ ವಿರುದ್ಧ ಪೊಲೀಸರು ಎಫ್‍ಐಆರ್ ಸಹ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೇನಾ ಕೋರ್ಟ್ ಕ್ಲೀನ್ ಚಿಟ್ ನೀಡಿ ನಿತಿನ್ ಗಗೋಯ್ ಅವರನ್ನು ಶ್ಲಾಘಿಸಿತ್ತು.
ಇದರ ಬಗ್ಗೆ ಮಾತನಾಡಿದ್ದ ನಿತಿನ್ ಗಗೋಯ್’ರವರು, ಕಲ್ಲು ತೂರಾಟಗಾರರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಮಕ್ಕಳು, ಮಹಿಳೆಯರೂ ಇದ್ದರು. ನಾನು ಧ್ವನಿವರ್ಧಕದಲ್ಲಿ ಎಚ್ಚರಿಕೆ ಕೊಟ್ಟಿದ್ದರೂ ಪ್ರತಿಭಟನೆಕಾರರು ಮಣಿಯಲಿಲ್ಲ. ಹೀಗಾಗಿ ಅಲ್ಲಿದ್ದ ಚುನಾವಣಾ ಅಧಿಕಾರಿಗಳನ್ನು, ಜನರನ್ನು, ಪೊಲೀಸರನ್ನು ರಕ್ಷಿಸಲು ನಾನು ಆತನನ್ನು ಸೇನಾ ಜೀಪಿಗೆ ಕಟ್ಟಿದ್ದೆ. ಒಂದು ವೇಳೆ ನಾವು ಗೋಲಿಬಾರ್ ನಡೆಸಲು ಆದೇಶಿಸಿದ್ದರೆ ಅಲ್ಲಿನ ಹೆಚ್ಚು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದರು ಎಂದು ನಿತಿನ್ ಗಗೋಯ್’ರವರು ಅವರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.
ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್ಗೆ ರ್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್ಗೆ ರ್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.