ದೇಶ-ವಿದೇಶ

ಸೇನೆಯ ಮೇಲೆ ಕಲ್ಲು ತೂರಾಟ, ನಡೆಸಿದ ಯುವಕನಿಗೆ 10 ಲಕ್ಷ ಪರಿಹಾರ..!

630

ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

 ಮೂಲ

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸಿದ  ಆಯೋಗದ ಸಮಿತಿ ಸದಸ್ಯರು, ಮನುಷ್ಯರಾಗಿ ಇಂತಹ ಹೀನ ಕೃತ್ಯಗಳನ್ನು ಸಹಿಸಲಸಾಧ್ಯ ಎಂದು ಆಯೋಗ ಸದಸ್ಯರು ಹೇಳಿದ್ದಾರೆ. ಸಂತ್ರಸ್ತ ಯುವಕ ಫಾರೂಖ್ ಅಹ್ಮದ್ ದಾರ್‍ಗೆ ಮುಂದಿನ 6 ವಾರದ ಒಳಗಡೆ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ದೇಶದಲ್ಲಿ ಶಾಂತಿ ಸುವ್ಯವಸ್ಥೆ ರಕ್ಷಣೆಗೆ ಹಲವು ಕಾನೂನುಗಳಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲೂ ಇಂತಹ ಕೃತ್ಯಗಳಿಗೆ ಕಾನೂನು ನೆರವು ನಾಗರಿಕ  ಸಮಾಜದಲ್ಲಿ ಆರೋಪಿಯನ್ನು ಹೀಗೆ ಹೀನಾಯವಾಗಿ ನಡೆಸಿಕೊಳ್ಳುವುದು ಸರಿಯಲ್ಲ ಎಂದು ಮಾನವ ಹಕ್ಕು ಆಯೋಗ ಹೇಳಿದೆ.

ಈ ಪ್ರಕರಣದ ನಡೆದ ಬಳಿಕ ಭಾರತೀಯ ಸೇನೆ ಮಾನವ ಗುರಾಣಿಯಾಗಿ ಯುವಕನನ್ನು ಬಳಸಿದ್ದಕ್ಕೆ, ಲೀತುಲ್ ಗೊಗೋಯ್ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿತ್ತು. ಈ ಸುದ್ದಿ ಚರ್ಚೆಯಾಗುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾಗರಿಕರ ಜೀವ ರಕ್ಷಿಸಲು ನಾನು ಈ ಕೆಲಸ ಮಾಡಬೇಕಾಯಿತು ಎಂದು ಹೇಳಿದ್ದರು.

ಏನಿದು ಪ್ರಕರಣ?

ಕಳೆದ ಏಪ್ರಿಲ್’ನಲ್ಲಿ ಶ್ರೀನಗರ ಲೋಕಸಭೆಯ ಉಪಚುನಾವಣೆ ನಡೆದಿದ್ದು,ಈ ಚುನಾವಣೆಯನ್ನು ಕಾಶ್ಮೀರ ಪ್ರತ್ಯೇಕವಾದಿಗಳು ವಿರೋಧಿಸಿದ್ದರು. ಚುನಾವಣೆಗೆ ನಿಯೋಜನೆಗೊಂಡಿದ್ದ ಸೇನಾ ಸಿಬ್ಬಂದಿಯನ್ನು ಪ್ರತಿಭಟನಾಕಾರರು ಸುತ್ತುವರೆದು ದಾಳಿ ನಡೆಸುತ್ತಿದ್ದರು. ಆಗ  ಕಾಶ್ಮೀರದಲ್ಲಿ ಭುಗಿಲೆದ್ದಿದ್ದ ವ್ಯಾಪಕ ಹಿಂಸಾಚಾರ ಮತ್ತು ಕಲ್ಲು ತೂರಾಟ ನಿಗ್ರಹಕ್ಕಾಗಿ ಸೇನಾ ಯೋಧ ಮೇಜರ್ ನಿತಿನ್ ಗಗೋಯ್ ಅವರು, ಕಲ್ಲು ತೂರಾಟಗಾರರ ನಾಯಕ ರೂಕ್ ಅಹ್ಮದ್ ದಾರ್ ನನ್ನು  ಸೇನಾವಾಹನಕ್ಕೆ ಕಟ್ಟಿ ಮಾನವ ಗುರಾಣಿಯಾಗಿ ಬಳಕೆ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.

ಈ ಕುರಿತು ಸೇನೆ ತನಿಖೆಗೆ ಆದೇಶಿಸಿದ್ದು, ನಿತಿನ್ ಗಗೋಯ್ಅ ವರ ವಿರುದ್ಧ ಪೊಲೀಸರು ಎಫ್‍ಐಆರ್ ಸಹ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೇನಾ ಕೋರ್ಟ್ ಕ್ಲೀನ್ ಚಿಟ್ ನೀಡಿ ನಿತಿನ್ ಗಗೋಯ್ ಅವರನ್ನು ಶ್ಲಾಘಿಸಿತ್ತು.

ಇದರ ಬಗ್ಗೆ ಮಾತನಾಡಿದ್ದ ನಿತಿನ್ ಗಗೋಯ್’ರವರು, ಕಲ್ಲು ತೂರಾಟಗಾರರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಮಕ್ಕಳು, ಮಹಿಳೆಯರೂ ಇದ್ದರು. ನಾನು ಧ್ವನಿವರ್ಧಕದಲ್ಲಿ ಎಚ್ಚರಿಕೆ ಕೊಟ್ಟಿದ್ದರೂ ಪ್ರತಿಭಟನೆಕಾರರು ಮಣಿಯಲಿಲ್ಲ. ಹೀಗಾಗಿ ಅಲ್ಲಿದ್ದ ಚುನಾವಣಾ ಅಧಿಕಾರಿಗಳನ್ನು, ಜನರನ್ನು, ಪೊಲೀಸರನ್ನು ರಕ್ಷಿಸಲು ನಾನು ಆತನನ್ನು ಸೇನಾ ಜೀಪಿಗೆ ಕಟ್ಟಿದ್ದೆ. ಒಂದು ವೇಳೆ ನಾವು ಗೋಲಿಬಾರ್ ನಡೆಸಲು ಆದೇಶಿಸಿದ್ದರೆ ಅಲ್ಲಿನ ಹೆಚ್ಚು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದರು ಎಂದು ನಿತಿನ್ ಗಗೋಯ್’ರವರು ಅವರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಅಪಘಾತವಾಗಿ 40 ನಿಮಿಷಗಳ ಕಾಲ ವಿಲವಿಲ ಎಂದು ಒದ್ದಾಡಿ ನಿಧನ ಹೊಂದಿದ ನಟ ಸುನಿಲ್.!

    ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ…

  • ಸೌಂದರ್ಯ

    ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

    ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ…

  • ರಾಜಕೀಯ

    ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

    ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

  • ಸುದ್ದಿ

    ಹುಷಾರ್ ! ಫೇಸ್​ಬುಕ್​ನಲ್ಲಿ ನೀವು ಕಳುಹಿಸುವ ವಾಯ್ಸ್ ಮೆಸೇಜ್ ಮೂರನೇ ವ್ಯಕ್ತಿಯು ಕೇಳಬಹುದು!ಇದನ್ನೊಮ್ಮೆ ಓದಿ …..!

    ಫೇಸ್ ಬುಕ್  ಮೆಸೆಂಜರ್ನಲ್ಲಿ  ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ​ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್​ಬುಕ್​, ವಾಟ್ಸ್​​ಆ್ಯಪ್​ ಸೇರಿಸಾಕಷ್ಟುಮೆಸೆಂಜರ್​ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ.  ಈಮೊದಲುಫೇಸ್​ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್​ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್​ ಮೆಸೇಜ್​ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್​ಬುಕ್​ ಮೆಸೆಂಜರ್​ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್​ಬುಕ್​ ಮೆಸೆಂಜರ್​ನಲ್ಲಿಕಳುಹಿಸುವ​ ವಾಯ್ಸ್​ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್​​ಬುಕ್​ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್​ನಲ್ಲಿಕಳುಹಿಸುವವಾಯ್ಸ್​​ ಮೆಸೇಜ್​ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್​ ಸಂಗ್ರಹಿಸಿದ್ದಫೇಸ್​ಬುಕ್​ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್​​ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.

  • ಸಿನಿಮಾ

    6 ವರ್ಷದ ಮಗನಿದ್ದರೂ ಎರಡನೇ ಮದುವೆ ಆಗುತ್ತಿರುವ ರಜನೀಕಾಂತ್ ಮಗಳು.!ಹುಡುಗ ಯಾರು ಗೊತ್ತಾ..?

    ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…

  • inspirational

    ಬಯಲಾಯ್ತು ದಾಸ ದರ್ಶನ್ ರವರ ಮತ್ತೊಂದು ಮುಖ..?

    ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…