ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.

ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಶ್ಯಾಮ್ ಅವರು, ಮಂಡಿ ಲೋಕಸಭಾಕ್ಕೆ ಸೇರುವ ಕಿನ್ನೌರ್ನಲ್ಲಿ ಅ.25, 1951ರಂದು ನಡೆದ ಸ್ವತಂತ್ರ ಭಾರತದ ಮೊದಲ ಚುನಾವಣೆಯಲ್ಲಿ ಪ್ರಥಮ ಮತ ಹಾಕುವ ಮೂಲಕ “ಸ್ವತಂತ್ರ ಭಾರತದ ಮೊದಲ ಮತದಾರ”ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಆಗ ಅವರಿಗೆ 33ರ ಪ್ರಾಯ.

1951ರಿಂದ ಇಂದಿನವರೆಗೂ ಅವರು 17 ಬಾರಿ ಲೋಕಸಭಾ ಚುನಾವಣೆಯ ಮತ ಚಲಾಯಿಸಿದ್ದಾರೆ. ರಾಜ್ಯ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಯಾವುದನ್ನೂ ತಪ್ಪಿಸದ ನೇಗಿ, ತಮ್ಮ ಸುತ್ತಮುತ್ತಲಿನವರನ್ನೂ ಮತ ಹಾಕಿ, ಪ್ರಜಾಪ್ರಭುತ್ವ ಚಿಂತನೆ ಸಾಕಾರಗೊಳಿಸುನವಂತೆ ಪ್ರೇರೇಪಿಸುತ್ತಲೇ ಬಂದಿದ್ದಾರೆ.

ಹಿಮಾಚಲ ರಾಜ್ಯ ಚುನಾವಣಾ ಆಯೋಗವು, ಇವರ ಇಚ್ಛಾಶಕ್ತಿ ಗಮನಿಸಿ ಬುಡಕಟ್ಟು ಪ್ರದೇಶಗಳಲ್ಲಿ ಜನರಿಗೆ ಮತದ ಮಹತ್ವ ತಿಳಿಸಲು, ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿತ್ತು.

2010ರಲ್ಲಿ ಚುನಾವಣಾ ಆಯೋಗದ ವಜ್ರ ಮಹೋತ್ಸವದ ಪ್ರಯುಕ್ತ ಆಗಿನ ಮುಖ್ಯ ಚುನಾವಣಾ ಆಯುಕ್ತ ನವೀನ್ ಚಾವ್ಲಾ ಅವರು ಶಿಮ್ಲಾದಿಂದ 250 ಕಿ.ಮೀ. ದೂರದ ಕಲ್ಪದಲ್ಲಿರುವ ತಾತನ ಮನೆಗೇ ಹೋಗಿ ಅವರನ್ನು ಗೌರವಿಸಿದ್ದರು.

ಇತ್ತೀಚಿಗೆ ನಡೆದ ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ 97ರ ವಯಸ್ಸಿನಲ್ಲೂ ಶ್ಯಾಮ್ ಶರಣ್ ನೇಗಿ ಅವರು ವೋಟ್ ಮಾಡಿದ್ದು ವಿಶೇಷವಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…
ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…
ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…