ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.

ಹೌದು. 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ವೇಳೆ ಇಲ್ಲಿಯ ಪ್ರಚಾರ ಕಾರ್ಯಗಳಲ್ಲಿ ಹಾರ್ಡ್ ಬೋರ್ಡ್ ಗಳನ್ನು ಬಳಸಲಾಗುತ್ತದೆ. ಈ ಹಾರ್ಡ್ ಬೋರ್ಡ್ ಗಳನ್ನು ಭಾರತದಲ್ಲಿ ನಿಷೇಧಗೊಂಡಿರುವ ನೋಟುಗಳನ್ನು ತಯಾರಿಸಿ ನಿರ್ಮಾಣ ಮಾಡಲಾಗುತ್ತಿದೆ.
ದಕ್ಷಿಣ ಆಫ್ರಿಕಾಗೆ ಹೇಗೆ ಹೋಗುತ್ತೆ?
ನಿಷೇಧಗೊಂಡಿರುವ ನೋಟುಗಳನ್ನು ಸುಟ್ಟರೆ ಪರಿಸರ ಮಾಲಿನ್ಯವಾಗುವ ಕಾರಣ ಆರ್‍ಬಿಐ ಕೇರಳದ ಕಣ್ಣೂರಿನಲ್ಲಿರವ ವೆಸ್ಟರ್ನ್ ಇಂಡಿಯಾ ಪ್ಲೈವುಡ್(ಡಬ್ಲ್ಯೂಐಪಿ) ಕಂಪೆನಿಯನ್ನು ಸಂಪರ್ಕಿಸಿತ್ತು. ಬಳಿಕ ಕಂಪೆನಿ ಹಳೆಯ ನೋಟುಗಳನ್ನು ಬಳಸಿ ಈಗ ಪ್ಲೈವುಡ್ ಹಾರ್ಡ್ ಬೋರ್ಡ್ ಗಳನ್ನು ತಯಾರಿಸಿದೆ.

ಕಂಪನಿಯ ಪ್ರಧಾನ ವ್ಯವಸ್ಥಾಪಕ ಟಿಐ ಬಾವ ಪ್ರತಿಕ್ರಿಯಿಸಿ, ನೋಟ್ ನಿಷೇಧಗೊಂಡ ಬಳಿಕ ತಿರುವನಂತಪುರಂನಲ್ಲಿರುವ ಆರ್‍ಬಿಐ ಕಚೇರಿ ನಮ್ಮನ್ನು ಸಂಪರ್ಕಿಸಿತು. ಬಳಿಕ ನಾವು ನೋಟಿನ ಸ್ಯಾಂಪಲ್ ನೀಡುವಂತೆ ಕೇಳಿದ್ವಿ. ನಮ್ಮ ರಿಸರ್ಚ್ ತಂಡ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸುವುದು ಹೇಗೆ ಎನ್ನುವುದನ್ನು ಕಂಡುಹಿಡಿದರು. ಬಳಿಕ ಈ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸಲಾಗಿದ್ದು, ಇವುಗಳು 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ ಎಂದು ಹೇಳಿದರು.

ಹೇಗೆ ಹಾರ್ಡ್ ಬೋರ್ಡ್ ತಯಾರಿಸುತ್ತೀರಿ ಎಂದು ಕೇಳಿದ ಪ್ರಶ್ನೆಗೆ, ಹೆಚ್ಚಿನ ಶಾಖದಲ್ಲಿ ನೋಟಿನ ಚೂರುಗಳನ್ನು ಕುದಿಸಿ ಹಿಟ್ಟು ಮಾಡಲಾಗುತ್ತದೆ. ಈ ಹಿಟ್ಟಿನ ಜೊತೆ ಮರದ ಹಿಟ್ಟನ್ನು ಮಿಶ್ರಣ ಮಾಡಿ ಪ್ಲೈವುಡ್ ಬೋರ್ಡ್ ತಯಾರಿಸಲಾಗಿದೆ. ಇಂತಹ ಬೋರ್ಡ್ ಗಳಿಗೆ ಆಫ್ರಿಕಾ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಲ್ಲಿ ಬೇಡಿಕೆಯಿದೆ ಎಂದು ಬಾವ ಉತ್ತರಿಸಿದರು.

ಪ್ರಸ್ತುತ ಭಾರತದಲ್ಲಿ ನೋಟನ್ನು ಸಂಸ್ಕರಿಸಿ ಅದನ್ನು ಪ್ಲೈವುಡ್ ಮಾಡುವ ತಂತ್ರಜ್ಞಾನ ಡಬ್ಲ್ಯೂಐಪಿ ಕಂಪೆನಿ ಬಳಿ ಮಾತ್ರ ಇದೆ. ಇದೂವರೆಗೆ 750 ಟನ್ ಹಳೆಯ ನೋಟುಗಳನ್ನು ನಾವು ಸ್ವೀಕರಿಸಿದ್ದೇವೆ. ಒಂದು ಟನ್ ನೋಟಿಗೆ 128 ರೂ. ನೀಡಿದ್ದೇವೆ. ಈ ಎಲ್ಲ ಪ್ರಕ್ರಿಯೆ ಕಣ್ಣೂರಿನ ವಾಲಪಟ್ಟನಂಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದಿದೆ ಎಂದು ಅವರು ವಿವರಿಸಿದರು.
ನಾವು ತಯಾರಿಸಿದ ಹಾರ್ಡ್ ಬೋರ್ಡ್ ಗಳು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಈ ಬೋರ್ಡ್ ನೋಟ್ ನಿಂದ ತಯಾರಿಸಲಾಗಿದೆ. ಹೀಗಾಗಿ ಇದಕ್ಕೆ ಬೆಲೆ ಜಾಸ್ತಿ ಎಂದು ಹೇಳಿ ಮಾರಾಟ ಮಾಡುತ್ತಿದ್ದಾರೆ. ಆದರೆ ನಾವು ಆ ರೀತಿ ಮಾಡದೇ ಒಂದೇ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿದರು..
ಆರ್‍ಬಿಐಗೆ ಎಷ್ಟು ನೋಟು ಬಂದಿದೆ?

ರದ್ದಾಗಿರುವ 500 ಮತ್ತು 1 ಸಾವಿರ ರೂ. ಮುಖಬೆಲೆಯ 15.44 ಲಕ್ಷ ರೂ. ಮೌಲ್ಯದ ನೋಟುಗಳ ಪೈಕಿ 15.28 ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳು ಆರ್‍ಬಿಐಗೆ ವಾಪಸ್ ಬಂದಿದೆ. 16 ಸಾವಿರ ಕೋಟಿ ರೂ. ಮೌಲ್ಯದ ನೋಟುಗಳು ಅಥವಾ ಶೇ.1.4 ರಷ್ಟು ನೋಟುಗಳು ವಾಪಸ್ ಬಂದಿಲ್ಲ. ಶೇ.98.6ರಷ್ಟು ನೋಟುಗಳು ವಾಪಸ್ ಬಂದಿದೆ ಎಂದು ಆರ್‍ಬಿಐ ಆಗಸ್ಟ್ 30ರಂದು ಮಾಹಿತಿ ನೀಡಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ…
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.