ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ ….
ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು.
237 ರನ್‌ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್‌ಗೆ 68 ಎಸೆತಗಳಲ್ಲಿ 74 ರನ್ ಸೇರಿಸಿ ಇನಿಂಗ್ಸ್‌ಗೆ ಉತ್ತಮ ಅಡಿಪಾಯ ಹಾಕಿದರು.
ಮಾಲಿಂಗ ಹಾಕಿದ ಮೊದಲ ಓವರ್‌ನಲ್ಲೇ ಗುಣತಿಲಕ ಅವರಿಂದ ಜೀವದಾನ ಪಡೆದ ಅಜರ್ ಅಲಿ ತಾಳ್ಮೆಯಿಂದ ಆಡಿ 50 ಎಸೆತಗಳಲ್ಲಿ 34 ರನ್ ಗಳಿಸಿದರು. ಆದರೆ ಜಮಾನ್ ಸ್ಫೋಟಿಸಿದರು. 36 ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು ಎಂಟು ಬೌಂಡರಿ ಒಳ ಗೊಂಡ 50 ರನ್ ಗಳಿಸಿದರು. ಇವರ ಜೊತೆಯಾಟ ಮುರಿದು ಬಿದ್ದ ನಂತರ ತಂಡ ನಿರಂತರವಾಗಿ ವಿಕೆಟ್ ಕಳೆದು ಕೊಂಡಿತು. 137 ರನ್ ಗಳಿಸುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡ ತಂಡಕ್ಕೆ ನಾಯಕ ಸರ್ಫರಾಜ್ ಅಹಮ್ಮದ್ ಮತ್ತು ಫಾಹಿಮ್ ಅಶ್ರಫ್ ಜೀವ ತುಂಬಿದರು.
ಎಂಟನೇ ವಿಕೆಟ್‌ಗೆ ಇವರಿಬ್ಬರು 25 ರನ್ ಸೇರಿಸಿದರು. ಫಾಹಿಮ್ ರನೌಔಟ್ ಆದಾಗ ಶ್ರೀಲಂಕಾ ಪಾಳಯದಲ್ಲಿ ಸಂಭ್ರಮ ಅಲೆದಾಡಿತು. ಈ ಸಂತಸಕ್ಕೆ ಸರ್ಫರಾಜ್ (ಔಟಾಗದೆ 61; 79 ಎ, 5 ಬೌಂ) ಮತ್ತು ಮಹಮ್ಮದ್ ಅಮೀರ್ ತಣ್ಣೀರೆರಚಿದರು. ಎಂಟನೇ ವಿಕೆಟ್‌ಗೆ 90 ಎಸೆತಗಳಲ್ಲಿ 75 ರನ್ ಸೇರಿಸಿದ ಇವರು ಜಯ ಕಸಿದುಕೊಂಡರು. ಇವರ ಜೊತೆಯಾಟದ ನಿರ್ಣಾಯಕ ಹಂತದಲ್ಲಿ ಎರಡು ಕ್ಯಾಚ್‌ಗಳನ್ನು ಕೈಚೆಲ್ಲಿದ ಶ್ರೀಲಂಕಾ ಇದಕ್ಕೆ ತಕ್ಕ ಫಲ ಉಂಡಿತು.
ಬೌಲರ್–ಬ್ಯಾಟ್ಸ್‌ಮನ್ ಸಮಬಲದ ಹೋರಾಟ: ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿತು. ಆರಂಭಿಕ ಬ್ಯಾಟ್ಸ್‌ಮನ್ ನಿರೋಷನ್ ಡಿಕ್ವೆಲಾ ಅವರ ಅರ್ಧಶತಕ ಮತ್ತು ನಾಯಕ ಏಂಜಲೊ ಮ್ಯಾಥ್ಯೂಸ್ ಅವರ ತಾಳ್ಮೆಯ 39 ರನ್ ಶ್ರೀಲಂಕಾ ಇನಿಂಗ್ಸ್‌ಗೆ ಬಲ ತುಂಬಿತು. ಮಹಮ್ಮದ್ ಅಮೀರ್, ಜುನೈದ್ ಖಾನ್, ಫಾಹಿಮ್ ಅಶ್ರಫ್ ಮತ್ತು ಹಸನ್ ಅಲಿ ಪಾಕಿಸ್ತಾನ ಬೌಲಿಂಗ್‌ಗೆ ಮೊನಚು ನೀಡಿದರು.
ನಿರೋಷನ್ ಮತ್ತು ಧನುಷ್ಕಾ ಆರಂಭದಲ್ಲೇ ವೇಗವಾಗಿ ರನ್ ಗಳಿಸಲು ಪ್ರಯತ್ನಿಸಿದರು. ಆದರೆ ಆರನೇ ಓವರ್‌ನಲ್ಲಿ ಎಡಗೈ ವೇಗಿ ಜುನೈದ್ ಖಾನ್ 13 ರನ್ ಗಳಿಸಿದ್ದ ಗುಣತಿಲಕ ಅವರನ್ನು ವಾಪಸ್ ಕಳುಹಿಸಿದರು. ಡಿಕ್ವೆಲಾ ಜೊತೆಗೂಡಿದ ಕುಶಾಲ್ ಮೆಂಡಿಸ್ ನಿಧಾನವಾಗಿ ಇನಿಂಗ್ಸ್ ಕಟ್ಟಿ ದರು. ಹತ್ತು ಓವರ್‌ಗಳ ಮುಕ್ತಾಯದ ವೇಳೆಗೆ ಇವರಿಬ್ಬರು ತಂಡದ ಮೊತ್ತವನ್ನು 50ಕ್ಕೆ ಏರಿಸಿದರು.
50 ರನ್‌ಗಳ ಜೊತೆಯಾಟದ ನಂತರ ಮೆಂಡಿಸ್ ಔಟಾದರು. ಎರಡು ಎಸೆತಗಳ ಅಂತರದಲ್ಲಿ ದಿನೇಶ್ ಚಾಂಡಿ ಮಲ್ ಕೂಡ ಔಟಾದರು. ಈ ಸಂದರ್ಭ ದಲ್ಲಿ ಜೊತೆಗೂಡಿದ ಡಿಕ್ವೆಲಾ ಮತ್ತು ನಾಯಕ ಏಂಜೆಲೊ ಮ್ಯಾಥ್ಯೂಸ್ ಉತ್ತಮ ಆಟವಾಡಿ ನಾಲ್ಕನೇ ವಿಕೆಟ್‌ಗೆ 78 ರನ್ ಸೇರಿಸಿದರು. ಇದರ ಪರಿ ಣಾಮ ತಂಡದ ಮೊತ್ತ 150ರ ಗಡಿ ದಾಟಿತು. 39 ರನ್ ಗಳಿಸಿದ ಮ್ಯಾಥ್ಯೂಸ್ ಔಟಾದ ನಂತರವೂ ಡಿಕ್ವೆಲಾ ರನ್ ಗಳಿಸುತ್ತ ಸಾಗಿದರು. ಅಷ್ಟರಲ್ಲಿ ಪಾಕಿ ಸ್ತಾನ ಬೌಲರ್‌ಗಳು ಮೇಲುಗೈ ಸಾಧಿಸಿ ದರು. ಒಂಬತ್ತು ರನ್‌ಗಳ ಅಂತರದಲ್ಲಿ ಡಿಕ್ವೆಲಾ (73; 86 ಎ, 4 ಬೌಂ) ಒಳ ಗೊಂಡಂತೆ ಮೂರು ವಿಕೆಟ್ ಕಬಳಿಸಿ ದರು. ಅಸೇಲಾ ಗುಣರತ್ನೆ ಮತ್ತು ಸುರಂಗ ಲಕ್ಮಲ್ ಎಂಟನೇ ವಿಕೆಟ್‌ಗೆ 46 ರನ್ ಸೇರಿಸಿದರು.
ಸಂಕ್ಷಿಪ್ತ ಸ್ಕೋರ್:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.