ಇಂಗ್ಲಿಷ್ ನಲ್ಲಿ ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ.
ಹಾಗಲಕಾಯಿಯ ಉಪಯೋಗಗಳು
ಕೊಲೆಸ್ಟ್ರಾಲ್ಕಡಿಮೆಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ ಕೊಲೆಸ್ಟ್ರಾಲನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.
ರೋಗನಿರೋಧಕಶಕ್ತಿಯನ್ನುಹೆಚ್ಚಿಸುತ್ತದೆ: ವೈರಸ ಮತ್ತು ಬ್ಯಾಕ್ಟೀರಿಯಾಗಳ ವಿರುದ್ದ ಹೋರಾಡುವ ಸಾಮಥ್ರ್ಯವನ್ನು ಹೊಂದಿರುವುದರಿಂದ ವಿವಿಧ ಅಲರ್ಜಿಯನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.
ಮಧುಮೇಹವನ್ನುಕಡಿಮೆಮಾಡುತ್ತದೆ : ಪ್ರತಿದಿನ ಹಾಗಲಕಾಯಿ ಸೇವಿಸುವುದರಿಂದ ಮಧುಮೇಹಿಗಳ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಹಾಗಲಕಾಯಿಯ ಜ್ಯೂಸ್ ಅತಿ ಸಾಮಾನ್ಯವಾದ, ಜನಪ್ರಿಯ ಪರಿಹಾರವಾಗಿದೆ. insulin ಗೆ ಸಮನಾದ ಕೆಲವು ರಾಸಾಯನಿಕಗಳು ಹಾಗಲಕಾಯಿಯಲ್ಲಿದ್ದು, ಅವು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತವೆ.
ಮಲಬದ್ಧತೆಯನ್ನುತಡೆಗಟ್ಟುತ್ತದೆ: ಮಲಬದ್ದತೆಯನ್ನು ತಡೆಗಟ್ಟುವಲ್ಲಿ ಹಾಗಲಕಾಯಿ ನೈಸರ್ಗಿಕ ಪರಿಹಾರವಾಗಿದೆ. ಯಾವದೇ ಅಡ್ಡ ಪರಿಣಾಮಗಳಿಲ್ಲ.
ಚರ್ಮಮತ್ತುಕೂದಲಿನಕಾಂತಿಗಾಗಿ: ಚರ್ಮದ ಮೇಲಿನ ಮಯಸ್ಸಾದ ಚಿಹ್ನೆಗಳನ್ನು ಕಡಿಮೆ ಮಾಡುವಲ್ಲಿ ಆಂಟಿ ಆಕ್ಸಿಡೆಂಟಗಳು ಮತ್ತು ವಿಟಮಿನ್ ಸಿ ಮತ್ತು ಎ ಸಹಾಯ ಮಾಡುತ್ತದೆ. ಹಾಗಲಕಾಯಿಯ ಸೇವನೆಯು ಮೊಡವೆಗಳ ನಿವಾರಣೆಗೆ ಸಹಕಾರಿಯಾಗಿದೆ ಮಾತ್ರವಲ್ಲದೇ ಆಳವಾದ ಚರ್ಮದ ಸೋಂಕುಗಳಿಗೂ ಶಮನಕಾರಿಯಾಗಿದೆ. ಹಾಗಲಕಾಯಿಯ ರಸವನ್ನು ನಿಂಬೆ ಹಣ್ಣಿನ ರಸದೊಂದಿಗೆ ಬೆರೆಸಿ, ಪ್ರತಿದಿನ ಖಾಲಿ ಹೊಟ್ಟೆಗೆ 6 ತಿಂಗಳುಗಳ ಕಾಲ ಸೇವಿಸಿರಿ ಇಲ್ಲವೇ ನಿಮ್ಮ ನಿರೀಕ್ಷಿತ ಫಲಿತಾಂಶ ದೊರೆಯುವವರೆಗೆ ಸೇವನೆಯನ್ನು ಮುಂದುವರೆಸಿರಿ.
ತೂಕಕಡಿಮೆಮಾಡುತ್ತದೆ ಕ್ಯಾಲೋರಿ, ಕೊಬ್ಬು ಮತ್ತು ಕಾರ್ಬೋಹೈಡ್ರೇಟಗಳು ಕಡಿಮೆ ಇರುವುದರಿಂದ ತೂಕ ಇಳಿಸುವಲ್ಲಿ ಆಹಾರದಲ್ಲಿ ಸೇರಿಸಲಾಗುತ್ತದೆ.
ಕಣ್ಣಿನದೃಷ್ಟಿಹೆಚ್ಚಿಸುತ್ತದೆ: ಇದರಲ್ಲಿನ ಬೀಟಾ ಕ್ಯಾರೋಟಿನ್ ಮತ್ತು ಜೀವಸತ್ವ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅವಶ್ಯಕವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡುತ್ತದೆ. ಹಾಗಲಕಾಯಿಯ ರಸದಲ್ಲಿ ಬೀಟಾ-ಕ್ಯಾರೋಟೀನ್ ಮತ್ತು ವಿಟಮಿನ್ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅಗತ್ಯವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡಿದಂತಾಗುತ್ತದೆ. ಅಲ್ಲದೇ ಉತ್ತಮ ಪ್ರಮಾಣದಲ್ಲಿರುವ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟುಗಳು ಮಧುಮೇಹದ ಕಾರಣದಿಂದಾಗಿ ಉತ್ಪತ್ತಿಯಾಗುವ ದೃಷ್ಟಿದೋಷದಿಂದ ಕಣ್ಣುಗಳನ್ನು ಕಾಪಾಡುತ್ತವೆ. ಹಾಗಲಕಾಯಿಯ ನಿಯಮಿತ ಸೇವನೆಯಿಂದ ಕಣ್ಣುಗಳ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಬರಲು ಸಾಧ್ಯವಾಗುತ್ತದೆ.
ರಕ್ತವನ್ನುಶುದ್ಧಿಕರಿಸುತ್ತದೆ ಪ್ರತಿದಿನ ಬೆಳೆಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿ ರಸ ಸೇವಿಸುವುದರಿಂದ ರಕ್ತ ಶುದ್ಧಿಗೊಳ್ಳುತ್ತದೆ.
ಕ್ಯಾನ್ಸರ್ನಿಂದಕಾಪಾಡುತ್ತದೆ
ರಕ್ತದಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗಲು ಕ್ಯಾನ್ಸರ್ ಗೆ ತುತ್ತಾಗಿ ಬಾಡಲಿಯ ಕಾರ್ಯಕ್ಷಮತೆ ಕುಸಿಯುವುದು ಪ್ರಮುಖ ಕಾರಣವಾಗಿದೆ. ಹಾಗಲಕಾಯಿಯಲ್ಲಿರುವ ಪೋಷಕಾಂಶಗಳು ಈ ಕ್ಯಾನ್ಸರ್ ಗೆ ಕಾರಣವಾದ ಅಪಾಯಕಾರಿ ಜೀವಕೋಶಗಳನ್ನು ಬೆಳೆಯದಂತೆ ತಡೆಯುತ್ತದೆ. ಪರಿಣಾಮವಾಗಿ ಬಾಡಲಿ ಸುಕ್ಷಮವಾಗಿ ಕಾರ್ಯನಿರ್ವಹಿಸಿ ರಕ್ತಕ್ಕೆ ಅಗತ್ಯವಾದ ಪ್ರಮಾಣದಲ್ಲಿ ಇನ್ಸುಲಿನ್ ಅನ್ನು ಉತ್ಪಾದಿಸಿಕೊಡಲು ಸಾಧ್ಯವಾಗುತ್ತದೆ.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…
ಸೌತ್ ಸೆನ್ಸೇಷನಲ್ ಹೀರೋ ವಿಜಯ್ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್ನಲ್ಲಿ ಹಾಟ್ ಟಾಪಿಕ್ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್ ಕೊಟ್ಟು, ಸೂಪರ್ ಸ್ಟಾರ್ ಪಟ್ಟಕ್ಕೇರಿದ…
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ಚಂಡೀಗಢ, ಅ.9-ಚೀನಾ ಡ್ರೋಣ್ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್ಗಳು ಹಾರಾಟ ನಡೆಸಿವೆ.ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…