ಕರ್ನಾಟಕ

ಇಂದು ವೈದ್ಯರ ಮುಷ್ಕರ, ರೋಗಿಗಳ ಪರದಾಟ..!ತಿಳಿಯಲು ಇದನ್ನು ಓದಿ..

109

ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ. ಆರೋಗ್ಯ ಸೇವೆ ಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಜನತೆಗೆ ಆರೋಗ್ಯ ಸೇವೆಯಲ್ಲಿ ತೊಂದರೆಯಾಗದಂತೆ ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿನ ವೈದ್ಯರು, ಅರೆವೈದ್ಯ ಸಿಬಂದಿ ಶುಕ್ರವಾರ ಕರ್ತವ್ಯದಲ್ಲಿದ್ದು, ಕಾರ್ಯ ನಿರ್ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮಸೂದೆಯಲ್ಲಿ ಏನಿದೆ?:-

* ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿನ ದರವನ್ನು ಖಾಸಗಿ ಆಸ್ಪತ್ರೆಗಳು ವಿಧಿಸುವಂತಿಲ್ಲ. ದರ ಪಟ್ಟಿ ಫಲಕ ಕಡ್ಡಾಯ.

* ಹೆಚ್ಚು ಬಿಲ್ ಮಾಡಿದರೆ 25 ಸಾವಿರ ರು ಗಳಿಂದ 5 ಲಕ್ಷದ ತನಕ ದಂಡ ವಿಧಿಸಲಾಗುತ್ತದೆ.

* ನಿಯಮ ಉಲ್ಲಂಘನೆ ಮಾಡಿದರೆ 6 ತಿಂಗಳಿನಿಂದ 3 ವರ್ಷದ ತನಕ ಜೈಲು ಶಿಕ್ಷೆ ವಿಧಿಸಬಹುದು.

* ರೋಗಿ ಮೃತಪಟ್ಟರೆ ದೇಹ ಹಸ್ತಾಂತರ ಮಾಡುವ ಮುನ್ನ ಬಾಕಿ ಮೊತ್ತ ಪಾವತಿಸುವಂತೆ ಒತ್ತಾಯ ಮಾಡುವಂತಿಲ್ಲ.

* ವೈದ್ಯಕೀಯ ಸಂಸ್ಥೆಗಳು ಸಂಬಂಧಿಸಿದ ಪ್ರಾಧಿಕಾರದಲ್ಲಿ ನೋಂದಣಿ ಮಾಡುವುದು ಕಡ್ಡಾಯ. ಇವೆಲ್ಲ ತಿದ್ದುಪಡಿಗೆ ಖಾಸಗಿ ಆಸ್ಪತ್ರೆ ವೈದ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಖಾಸಗಿ ಆಸ್ಪತ್ರೆಗಳು ಒಂದು ದಿನದ ಮುಷ್ಕರವನ್ನು ಹಮ್ಮಿಕೊಂಡಿದ್ದು, ಶುಕ್ರವಾರ ಬೆಳಗ್ಗೆ 8 ರಿಂದ ರಾತ್ರಿ 8 ರ ತನಕ ಸೇವೆಗಳು ಸ್ಥಗಿತಗೊಂಡಿವೆ. ಕೆಲವೆಡೆ ನಾಳೆ ಬೆಳಗ್ಗೆ 8ರ ತನಕ ಸೇವೆಗಳು ಇರುವುದಿಲ್ಲ.
ಕರ್ನಾಟಕದಲ್ಲಿ ಶೇ 70ರಷ್ಟು ಹೊರರೋಗಿಗಳ ಪ್ರಕರಣಗಳನ್ನು ಖಾಸಗಿ ಆಸ್ಪತ್ರೆಗಳು ನಿರ್ವಹಿಸುತ್ತಿವೆ. ತುರ್ತು ಸೇವೆಗಳನ್ನು ಹೊರತು ಪಡಿಸಿ ಉಳಿದ ಸೇವೆಗಳನ್ನು ಸ್ಥಗಿತಗೊಳಿಸಲಾಗಿವೆ.

ಬೇಡಿಕೆಗೆ ಸರ್ಕಾರ ಬಗ್ಗದಿದ್ದರೆ, ವೃತ್ತಿ ತೊರೆಯುವ ಬೆದರಿಕೆ:-

ಕರ್ನಾಟಕ ಸರ್ಕಾರ ‘ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ (ತಿದ್ದುಪಡಿ) 2017’ನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ, ಬೇಡಿಕೆಗಳು ಈಡೇರದಿದ್ದರೆ ವೃತ್ತಿಯನ್ನು ತೊರೆಯುವುದಾಗಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಈ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು? ವೈದ್ಯರ ಬೇಡಿಕೆಗಳೇನು?

ವೈದ್ಯಕೀಯ ಸಂಸ್ಥೆಗಳ ಬೆಂಬಲ :-

ವೈದ್ಯಕೀಯ ಶಿಕ್ಷಣ ಸಂಸ್ಥೆಗಳು, ದಂತ ವೈದ್ಯರ ಒಕ್ಕೂಟ, ಪ್ರಯೋಗಾಲಯಗಳು, ಕರ್ನಾಟಕ ಖಾಸಗಿ ಆಸ್ಪತ್ರೆಗಳ ಒಕ್ಕೂಟ, ವಿವಿಧ ತಜ್ಞ ವೈದ್ಯರ ಸಂಘಟನೆಗಳು, ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್, ರಕ್ತನಿಧಿಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ. ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಸೇವೆ, ಒಳ ರೋಗಿಗಳ ವಿಭಾಗ ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಆದರೆ, ಹೊರರೋಗಿಗಳ ವಿಭಾಗ, ತಜ್ಞ ವೈದ್ಯರೊಡನೆ ಸಂದರ್ಶನ ಇಂದು ಸಾಧ್ಯವಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ