ಸುದ್ದಿ

ಈ ಸಲದ ಮೋದಿ ಬಜೆಟ್’ನಲ್ಲಿ ಜಾಸ್ತಿಯಾಗಿದ್ದೇನು..?ಕಡಿಮೆಯಾಗಿದ್ದೇನು..?ಇಲ್ಲಿದೆ ಸಂಪೂರ್ಣ ಮಾಹಿತಿ…ನೋಡಿ ನಿಮ್ಮ ಅನಿಸಿಕೆ ತಿಳಿಸಿ…

By admin

February 02, 2018

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ  ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ  ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

2018ನೇ ಸಾಲಿನ  ಬಜೆಟ್’ನ ಪ್ರಮುಖ ಅಂಶಗಳು:-

ಏರಿಕೆಯಾಗಲಿರುವ ವಸ್ತುಗಳು :-

ಮೊಬೈಲ್ ಫೋನ್, ಟಿ.ವಿ ಸೆಟ್, ಡಿಜಿಟಲ್ ಕ್ಯಾಮೆರಾಗಳು, ಮೈಕ್ರೋವೇವ್ ಓವೆನ್, ಎಲ್‍ಇಡಿ ಬಲ್ಬ್ ಗಳು ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಏರಿಕೆಯಾಗಲಿದೆ.

ಈ ಸಲದ ಬಜೆಟ್’ನಲ್ಲಿ ಮೊಬೈಲ್ ಫೋನ್ ಮೇಲಿನ ಅಬಕಾರಿ ಸುಂಕವನ್ನು 15% ನಿಂದ 20% ಗೆ ಏರಿಸಲಾಗಿದೆ. ಅಲ್ಲಿಗೆ ಆ್ಯಪಲ್ ಐಫೋನ್‍ಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದ್ದು, ಭಾರತದಲ್ಲೇ ಉತ್ಪಾದಿಸುವ ಮೊಬೈಲ್ ಫೋನ್‍ಗಳ ಬೆಲೆಗೆ ಅಂತರ ಹೆಚ್ಚಲಿದೆ.

ಏರಿಕೆಯಾಗಲಿದೆ ಐಫೋನ್

ತಜ್ಞರ ಪ್ರಕಾರ ಐಫೋನ್ ದರದ ಮೇಲೆ 2ರಿಂದ 3 ಸಾವಿರ ರೂ. ಹೆಚ್ಚಾಗಲಿದೆ. ಉದಾಹರಣೆಗೆ ಐಫೋನ್ ಎಕ್ಸ್ ಮಾಡಲ್‍ನ ಫೋನ್ ಈಗ 89 ಸಾವಿರ ರೂ. ಇದ್ದು, ಕಂಪೆನಿ ತೆರಿಗೆ ಏರಿಕೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಿದ್ರೆ ಫೋನ್ ಬೆಲೆ 92 ಸಾವಿರ ರೂ. ಗೆ ಏರಿಕೆಯಾಗುವ ಸಾಧ್ಯತೆಯಿದೆ.

ಟಿ.ವಿಗಳ ಬೆಲೆ ಏರಿಕೆ :-

ಟಿ.ವಿ  ಬೆಲೆಗಳೂ ಕೂಡ ಏರಿಕೆಯಾಗಲಿದ್ದು, ಸ್ಕ್ರೀನ್ ಗಾತ್ರಕ್ಕೆ ಅನುಗುಣವಾಗಿ ಈಗಿರುವ ಬೆಲೆಗಿಂತ ಹೆಚ್ಚಾಗಲಿದೆ. 10 ಸಾವಿರ ರೂ. ಬೆಲೆಯ 20 ಲೀಟರ್ ಮೈಕ್ರೋವೇವ್ ಓವೆನ್ ಬೆಲೆ ಮೇಲೆ 500 ರೂ. ಹೆಚ್ಚಾಗುವ ಸಾಧ್ಯತೆಯಿದೆ.

ಪೆಟ್ರೋಲ್,ಡೀಸೆಲ್

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮೂಲ ಅಬಕಾರಿ ಸುಂಕವನ್ನು ಲೀಟರ್‌ಗೆ 2 ರು. ಹಾಗೂ ಹೆಚ್ಚುವರಿ ಅಬಕಾರಿ ಸುಂಕವನ್ನು 6 ರುಪಾಯಿ ಇಳಿಸುವುದಾಗಿ ಜೇಟ್ಲಿ ಅವರು ಬಜೆಟ್ ಭಾಷಣದಲ್ಲಿ ತಿಳಿಸಿದರು.ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಇಳಿಕೆ ಮಾಡಿದ್ದರೂ. ರಸ್ತೆ ಮತ್ತು ಮೂಲ ಸೌಕರ್ಯ ಹೆಸರಲ್ಲಿ 8 ರೂ. ಹೊಸ ಸೆಸ್ ಹಾಕುವ ಮೂಲಕ ದರವನ್ನು ಯಥಾಸ್ಥಿತಿಯಲ್ಲಿ ಇಡಲಾಗಿದೆ.

ಶಿಕ್ಷಣ ಕ್ಷೇತ್ರಕ್ಕೆ ಏನು ಕೊಡುಗೆ….

ಶಿಕ್ಷಣ ಕೇತ್ರದಲ್ಲಿ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಮೂಲಸೌಕರ್ಯ ಹಾಗೂ ತಂತ್ರಜ್ಞಾನ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.