ಸುದ್ದಿ

ಎಚ್ಚರಿಕೆ ಕಾವೇರಿ ನೀರು ಬಿಟ್ಟರೆ ಜನ ದಂಗೆ ಏಳ್ತಾರೆ: ಮಾದೇಗೌಡ ……!

22

ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ ಇಷ್ಟು ವಿಷಮಿಸಿರುವಾಗ ತಮಿಳುನಾಡಿಗೆ ನೀರು ಬಿಟ್ಟರೆ ಜನರು ದಂಗೆ ಏಳುತ್ತಾರೆ ಎಂದು ಕಾವೇರಿ ಹೋರಾಟ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ಎಚ್ಚರಿಕೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿ ಅವರು, ರಾಜ್ಯಕ್ಕೆ ಪ್ರಾಧಿಕಾರದವರೇ ಬಂದು ಪರಿಶೀಲನೆ ನಡೆಸಲಿ. ನಮ್ಮ ಪರಿಸ್ಥಿತಿ ಹೇಗಿದೆ ಎಂದು ಖುದ್ದಾಗಿ ನೋಡಿಕೊಂಡು ಹೋಗಲಿ. ಅದನ್ನು ಬಿಟ್ಟು ಎಲ್ಲಿಯೋ ಕುಳಿತು ತೀರ್ಮಾನ ಕೈಗೊಳ್ಳುವುದು ಸರಿಯಲ್ಲ. ನೀರು ಬಿಟ್ಟರೆ ಹೋರಾಟ ನಡೆಸುವುದು ಅನಿವಾರ್ಯ ಎಂದರು.

ನನ್ನ 90 ವರ್ಷದ ಬದುಕಿನಲ್ಲಿ ಕುಡಿಯುವ ನೀರಿಗಾಗಿ ಇಷ್ಟೊಂದು ತತ್ವಾರ ಉಂಟಾಗಿದ್ದನ್ನು ನೋಡಿಲ್ಲ. ಕುಡಿಯುವ ನೀರಿಲ್ಲ ಎಂಬ ಕಾರಣಕ್ಕೆ ಹಳ್ಳಿಯ ಜನರು ನಗರ, ಪಟ್ಟಣಗಳಿಗೆ ಗುಳೆ ಹೋಗುತ್ತಿದ್ದಾರೆ. ಕೆರೆಕಟ್ಟೆಗಳು, ಕೊಳವೆ ಬಾವಿಗಳು ಬತ್ತಿಹೋಗಿವೆ. ಕೆಆರ್‌ಎಸ್‌ನಲ್ಲಿ ಇರುವ ನೀರನ್ನೇ ಕುಡಿಯುವ ಉದ್ದೇಶಕ್ಕೆ ಉಳಿಸಿಕೊಳ್ಳಬೇಕಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಹೇಳಿದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ