ಸುದ್ದಿ

ಮಳೆ ಆತಂಕದಲ್ಲಿರುವ ಕೊಡಗಿನ ಜನತೆಗೆ ನೋಟಿಸ್ ಶಾಕ್ ನೀಡಿದ ನಗರಸಭೆ….!

37

ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ.

ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ ಬಿಟ್ಟು ಬಿಟ್ಟು ಸುರಿಯುತ್ತಲೇ ಇದ್ದಾನೆ. ಕಳೆದ ಬಾರಿ ಭೂ ಕುಸಿತವುಂಟಾಗಿದ್ದ ಪ್ರದೇಶಗಳ ಜನರು ಸ್ವಲ್ಪವೇ ಜೋರಾಗಿ ಮಳೆ ಬಿದ್ದರೂ ಆತಂಕಪಡುವಂತಾಗಿದ್ದು, ಜೀವ ಕೈಯಲ್ಲಿಯೇ ಹಿಡಿದು ಬದುಕುತ್ತಿದ್ದಾರೆ.ಇದೇ 20ರಿಂದ ಪ್ರತಿ ವರ್ಷದಂತೆ ಮಾನ್ಸೂನ್ ಮಳೆ ಬೀಳಲಿದ್ದು, ಅಪಾಯದ ಸ್ಥಿತಿಯಲ್ಲಿರುವ ಪ್ರದೇಶಗಳಲ್ಲಿ ಮನೆಗಳ ಖಾಲಿ ಮಾಡುವಂತೆ ಮಡಿಕೇರಿ ನಗರದಲ್ಲೇ ಇರುವ ಚಾಮುಂಡೇಶ್ವರಿ ನಗರ,

ಇಂದಿರಾನಗರ ಮತ್ತು ಮಂಗಳಾದೇವಿ ನಗರಗಳ ಜನರಿಗೆ ನಗರಸಭೆ ನೋಟಿಸ್ ಜಾರಿ ಮಾಡಿದೆ. ಇದು ಈ ಪ್ರದೇಶಗಳ ಜನರನ್ನು ಆತಂಕಕ್ಕೆ ದೂಡಿದ್ದು, ಜೀವ ಬಿಗಿ ಹಿಡಿದು ಬದುಕುತ್ತಿದ್ದಾರೆ.ಕಳೆದ ಬಾರಿ ಭೂಕುಸಿತದಿಂದ ಕೆಲವು ಮನೆಗಳು ಬಿರುಕು ಬಿಟ್ಟಿದ್ದರೆ, ಕೆಲವು ಮನೆಗಳು ವಾಸಿಸಲು ಯೋಗ್ಯವಲ್ಲದ ಸ್ಥಿತಿಯಲ್ಲಿವೆ. 20ರಿಂದ ಮಾನ್ಸೂನ್ ಮಳೆ ಮತ್ತೆ ಜೋರಾಗುವ ಸಾಧ್ಯತೆ ಇರುವುದರಿಂದ ಯಾವುದೇ ಅಪಾಯ ಎದುರಾಗದಂತೆ ಮುನ್ನೇಚ್ಚರಿಕೆ ಕ್ರಮವಾಗಿ ನೋಟಿಸ್ ನೀಡಿದ್ದೇವೆ ಅಷ್ಟೇ ಎಂದು ಜಿಲ್ಲಾಧಿಕಾರಿ ಹೇಳುತ್ತಿದ್ದಾರೆ.

ಆದರೆ ನಮಗೆ ಯಾವುದೇ ಪೂರ್ವ ವ್ಯವಸ್ಥೆ ಮಾಡಿಕೊಡದೆ ಮನೆ ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದೆ. ನಾವು ಮನೆಗಳನ್ನು ಖಾಲಿ ಮಾಡಿ ಎಲ್ಲಿಗೆ ಹೋಗೋದು, ಮನೆಗಳು ಬಾಡಿಗೆಗೆ ಸಿಗುತ್ತಿಲ್ಲ, ಸಿಕ್ಕರೂ ಅತ್ಯಂತ ದುಬಾರಿ ಬಾಡಿಗೆ ಇದೆ. ನಾವು ಇಲ್ಲಿಯೂ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಬೇಕು. ಸಾಧ್ಯವಾದರೆ ಮತ್ತೆ ಪರಿಹಾರ ಕೇಂದ್ರಗಳನ್ನು ತೆರೆದು ರಕ್ಷಣೆ ನೀಡಬೇಕು ಎಂದು ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪೊಲೀಸ್ ಠಾಣೆಯಲ್ಲಿ ಆರೋಪಿಯ ಬರ್ತ್‌ಡೇ ಸೆಲೆಬ್ರೇಷನ್….!

    ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್‌ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್‌ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…

  • ಉಪಯುಕ್ತ ಮಾಹಿತಿ

    ಈ ಚಿಕ್ಕ ಕೆಲಸವನ್ನ ಮಾಡಿದರೆ ಸಾಕು ಈ ಜನ್ಮದಲ್ಲಿ ಇಲಿಗಳು ನಿಮ್ಮ ಮನೆಗೆ ಸುಳಿಯುವುದಿಲ್ಲ, ಇಲಿಗಳ ಕಾಟಕ್ಕೆ ಮುಕ್ತಿ ಇಲ್ಲಿದೆ.

    ಯಾರ ಮನೆಯಲ್ಲಿ ಇಲಿಗಳು ಇಲ್ಲ ಹೇಳಿ, ಇನ್ನು ಇಲಿಗಳ ಕಾಟ ಕೇವಲ ಮನೆಯಲ್ಲಿ ಮಾತ್ರವಲ್ಲೇ ಹೊಲ ಗದ್ದೆಗಳಲ್ಲಿ ಕೂಡ ಇರುತ್ತದೆ, ಹೌದು ಹೊಲ ಗದ್ದೆಗಳಲ್ಲಿ ಇಲಿಗಳ ಕಾಟ ಆರಂಭವಾಯಿತು ಅಂದರೆ ರೈತರಿಗೆ ದಿಕ್ಕೇ ತೋಚದಂತೆ ಆಗುತ್ತದೆ. ಇಲಿಗಳು ಇಲ್ಲಿ ಇರುತ್ತದೆಯೋ ಅಲ್ಲಿ ಸರ್ವಶನಾಶ ಆಗುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ, ಯಾಕೆ ಅಂದರೆ ಇಲಿಗಳು ಕಚ್ಚದ ವಸ್ತುಗಳೇ ಇಲ್ಲ. ಎಷ್ಟೇ ಗಟ್ಟಿ ವಸ್ತುವಾದರೂ ಅದನ್ನ ತೂತು ಮಾಡುವ ಶಕ್ತಿಯನ್ನ ಹೊಂದಿರುತ್ತದೆ ಇಲಿಗಳು, ಮನೆಯ ವಸ್ತುಗಳನ್ನ ಹಾಲು ಮಾಡುತ್ತದೆ ಮತ್ತು…

  • ಉಪಯುಕ್ತ ಮಾಹಿತಿ

    ರಸ್ತೆಗಳ ಮೇಲೆ ಹಾಕಿರುವ ಹಳದಿ ಮತ್ತು ಬಿಳಿ ಪಟ್ಟಿಗಳ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

    ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.

  • God

    ಧರ್ಮಸ್ಥಳ ಮಂಜುನಾಥನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…