ಕರ್ನಾಟಕ

ಗೋವಾ ನಿರಾಶ್ರಿತ ಕನ್ನಡಿಗರಿಗೆ, ರಾಜ್ಯದಿಂದ ಸಿಕ್ಕ ಭಾಗ್ಯ ಏನು ಗೊತ್ತಾ..?

115

ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ‌ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೈನಾ ಬೀಚ್‌ನಲ್ಲಿ  ಜೆಸಿಬಿ, ಟಿಪ್ಪರ್‌ಗಳೊಂದಿಗೆ  ಸ್ಥಳೀಯಾಡಳಿತದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, 55 ಮನೆ ಹಾಗೂ ಗುಡಿಸಲುಗಳನ್ನು ತೆರವು ಮಾಡಿದ್ದರು, ಗೋವಾ ಸರ್ಕಾರದ ಕ್ರಮಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಕನ್ನಡಿಗರನ್ನು ರಕ್ಷಿಸುವಂತೆ ಮನವಿ ಮಾಡಿದ್ದವು.

ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರ ಸಂಖ್ಯೆ ಎಷ್ಟು, ಎಲ್ಲರಿಗೂ ನಿವೇಶನ ಒದಗಿಸಲು ಬೇಕಾದ ಭೂಮಿ ಮತ್ತಿತರ ವಿಷಯಗಳನ್ನು ಒಳಗೊಂಡಂತೆ ಮೂರು ದಿನದಲ್ಲಿ ವರದಿ ನೀಡಲು ಗಡಿ ಅಭಿವೃದ್ಧಿ  ಪ್ರಾಧಿಕಾರದ ಅಧಿಕಾರಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ.

ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಮೊದಲ ಹಂತದಲ್ಲಿ ಅವರಿಗೆ ನಿವೇಶನದ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದರು.

ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಚಿಂಚನಸೂರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಅ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡಾಕ್ಟರೇಟ್ ಪಡೆದ ರವಿಮಾಮ : ತಪ್ಪಿರುವ ದಾರಿಯನ್ನ ಸರಿ ಮಾಡಿಕೊಳ್ಳುತ್ತೇನೆ ಎಂದ ಕ್ರೇಜಿ ಸ್ಟಾರ್…!

    ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್‌ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್  ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…

  • ಜ್ಯೋತಿಷ್ಯ

    ನಿಮ್ಮ ಉಗುರಿನ ಮೇಲೆ ಅರ್ಧ ಚಂದ್ರಾಕೃತಿ ಇದೆಯೇ?ಇದು ನಿಮ್ಮ ಜೀವನದಲ್ಲಿ ಏನನ್ನು ಸೂಚಿಸುತ್ತೆ ಗೊತ್ತಾ?

    ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….

  • ಸಿನಿಮಾ

    ಕನ್ನಡದ ಈ ಸಿನಿಮಾ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಪರಭಾಷೆಗೆ ಡಬ್ಬಿಂಗ್ ಮಾರಾಟ..!ಶಾಕ್ ಆಗ್ತೀರಾ…ಮುಂದೆ ಓದಿ…

    ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

  • ಸುದ್ದಿ

    ಅಮ್ಮನಿಗೆ ವರ ಬೇಕಿದೆ, ಷರತ್ತುಗಳು ಅನ್ವಯ. ಫೇಸ್ಬುಕ್ ನಲ್ಲಿ ಮಗನ ಪೋಸ್ಟ್ ವೈರಲ್.

    ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್‍ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ  ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್‍ಬುಕ್…

  • ಸುದ್ದಿ

    ಖೋಟಾನೋಟು ಚಲಾವಣೆ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, 33 ಲಕ್ಷ ರೂ ವಶ, ಬೆಂಗಳೂರಿನ ಬಾಣಸವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…!

    ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…

  • ಸುದ್ದಿ, ಸ್ಪೂರ್ತಿ

    15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತು ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ ತೆಗೆದ ರೈತ, ಈ ಸುದ್ದಿ ನೋಡಿ.

    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್‍ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್‍ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್‍ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…