ಸುದ್ದಿ

ಶಾಕಿಂಗ್ ನ್ಯೂಸ್ : ಪ್ರವಾಸಿಗರಿಗೆ ಇನ್ಮುಂದೆ ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಸಮಯ ಕಳೆದರೆ ದಂಡ ಗ್ಯಾರಂಟಿ…!

28

ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ…

ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ ಅನಧಿಕೃತ ಪ್ರವೇಶವನ್ನು ನಿಯಂತ್ರಿಸುವ ಸಲುವಾಗಿ ಈ ಹೊಸ ನಿಯಮವನ್ನು ಜಾರಿಗೆ ತಂದಿರುವುದಾಗಿ ಇಲಾಖೆ ಸ್ಪಷ್ಟನೆ ನೀಡಿದೆ.

ಈ ಬಗ್ಗೆ ಮಾತನಾಡಿರುವ ಇಲಾಖೆಯ ಸೂಪರಿಂಟೆಂಟ್ ಬಸಂತ್ ಕುಮಾರ್ ಅವರು, ತಾಜ್ ಮಹಲ್ ನಲ್ಲಿ ಈ ಹಿಂದೆ ಪ್ರವಾಸಿಗರು ಬೆಳಗ್ಗಿನಿಂದ ಸಂಜೆಯವರೆಗೂ ಸಮಯ ಕಳೆಯಬಹುದಿತ್ತು. ಆದರೆ ಈ ವೇಳೆ ತಾಜ್ ಮಹಲ್ ನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿರುತ್ತಿತ್ತು. ಅಲ್ಲದೆ ಅನಧಿಕೃತವಾಗಿ ಪ್ರವೇಶದ ಅವಕಾಶವೂ ಇತ್ತು. ಹೀಗಾಗಿ ಇದಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಹೊಸ ನಿಯಮ ಜಾರಿಗೆತರಲಾಗಿದೆ. ಹೊಸ ನಿಯಮದ ಅನ್ವಯ ಪ್ರವಾಸಿಗರು ತಾಜ್ ಮಹಲ್ ನಲ್ಲಿ 3 ಗಂಟೆಗಳನ್ನು ಮಾತ್ರ ಕಳೆಯಬಹುದು. 3 ಗಂಟೆಗೂ ಅಧಿಕ ಸಮಯದ ಬಳಿಕ ದಂಡ ವಿಧಿಸಲಾಗುತ್ತದೆ. ಇದಕ್ಕಾಗಿ ಟರ್ನ್ ಸ್ಟೈಲ್ ಗೇಟ್ ಗಳನ್ನು ಪರಿಚಯಿಲಾಗುತ್ತಿದ್ದು, ಪೂರ್ವ ಮತ್ತು ಪಶ್ಚಿಮ ದ್ವಾರಗಳಲ್ಲಿ ಇವುಗಳನ್ನು ಅಳವಡಿಸಲಾಗುತ್ತದೆ. 7 ಗೇಟ್ ಗಳ ಪೈಕಿ 5 ಗೇಟ್ ಗಳು ಎಕ್ಸಿಟ್ ಗೆ ಮೀಸಲಿಡಲಾಗುತ್ತದೆ. ವಿದೇಶಿಗರ ಪ್ರವೇಶಕ್ಕೆ ಪ್ರತ್ಯೇಕ ಗೇಟ್ ಗಳು ಇರಲಿದ್ದು, ಟೋಕನ್ ಗಳ ಮೂಲಕವಷ್ಟೇ ಪ್ರವೇಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಹೊಸ ನಿಯಮಕ್ಕೆ ಪ್ರವಾಸಿಗರ ತೀವ್ರ ವಿರೋಧ , ಇನ್ನು ಪುರಾತತ್ವ ಇಲಾಖೆಯ ಹೊಸ ನಿಯಮಕ್ಕೆ ಪ್ರವಾಸಿಗರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ನಾವು ತಾಜ್ ಮಹಲ್ ಸಮಯ ಕಳೆಯಲು ಬರುತ್ತೇವೆ. ಆದರೆ ಪುರಾತತ್ವ ಇಲಾಖೆಯ ಈ ನಿಯಮಗಳಿಂದ ಪ್ರವಾಸಿಗರು ತಾಜ್ ಮಹಲ್ ನಿಂದ ವಿಮುಖರಾಗುವ ಅಪಾಯವಿದೆ. ಕೇವಲ ಮೂರು ಗಂಟೆ ಮಾತ್ರ ಸಮಯಾವಕಾಶ ವಿಧಿಸಿದರೆ ತಾಜ್ ಮಹಲ್ ಗೆ ಆಗಮಿಸಲೂ ಕೂಡ ಪ್ರವಾಸಿಗರು ಎರಡೆರಡು ಬಾರಿ ಯೋಚಿಸುತ್ತಾರೆ. ಇದು ನಿಜಕ್ಕೂ ಪ್ರವಾಸೋದ್ಯಮದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
ಅಂತೆಯೇ ಅಸ್ಟ್ರೇಲಿಯಾ ಮೂಲದ ಸೆಲಿನಾ ಎಂಬ ಪ್ರವಾಸಿಗರೂ ಕೂಡ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದು, ಭಾರತೀಯ ಪ್ರವಾಸಗರಿಗಿಂತ ವಿದೇಶಗರಿಗೆ ಬಹುತೇಕ 10 ಪಟ್ಟು ಹೆಚ್ಚು ಶುಲ್ಕು ವಿಧಿಸುತ್ತಿದ್ದಾರೆ. ಅದಾಗ್ಯೂ ನಾವು ಇಲ್ಲಿಗೆ ಬರುತ್ತಿದ್ದೇವೆ. ಆದರೆ ಇದೀಗ ಸಮಯದ ಮಿತಿ ವಿಧಿಸಿರುವುದು ನಾವು ಮತ್ತೆ ತಾಜ್ ಮಹಲ್ ಗೆ ಭೇಟಿ ನೀಡಬೇಕೆ ಎಂಬ ಪ್ರಶ್ನೆ ಉದ್ಭವಿಸುವಂತೆ ಮಾಡಿದೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

    ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…

  • ಜ್ಯೋತಿಷ್ಯ

    ತಾಯಿ ದುರ್ಗಾ ಪರಮೇಶ್ವರಿಯನ್ನು ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಫಲವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…

  • ಉಪಯುಕ್ತ ಮಾಹಿತಿ

    ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

    ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

  • ಸುದ್ದಿ

    ಸಾಲು ಸಾಲು ರಜೆ – 11 ದಿನ ಬ್ಯಾಂಕ್ ಬಾಗಿಲು ಬಂದ್ : ಬ್ಯಾಂಕ್ ಗ್ರಾಹಕರಿಗೊಂದು ಮುಖ್ಯ ಮಾಹಿತಿ….!

    ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…

  • ಸಿನಿಮಾ

    ದರ್ಶನ್ ಅಭಿಮಾನಿಗಳಿಗೆ ಸಖತ್ ಸಿಹಿ ಸುದ್ದಿ!ಫಿಕ್ಸ್ ಆಯ್ತು ಕುರುಕ್ಷೇತ್ರ ಚಿತ್ರದ ರಿಲೀಜ್ ಡೇಟ್…ಯಾವಾಗ ಗೊತ್ತಾ?

    ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….