ಜ್ಯೋತಿಷ್ಯ

ದಿನ ಭವಿಷ್ಯ ಬುಧವಾರ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

511

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಮೇಷ:-

ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ ಸಹಪಾಠಿಗಳನ್ನು ಗೆಲ್ಲುವಿರಿ. ದುಷ್ಟ ಫಲ ನಿವಾರಣೆಗಾಗಿ ಗಣಪತಿಯನ್ನು ಆರಾಧಿಸಿರಿ.

ವೃಷಭ:-

ನಿಮ್ಮ ಬುದ್ಧಿಮತ್ತೆಗೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ವಿಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಮಿಥುನ:

ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ಮುಂದೆ ಸಮಸ್ಯೆಗೆ ದಾರಿ ಆಗುವುದು. ಕೆಲವು ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ. ಕುಲದೇವತಾ ಸ್ಮರಣೆ ಮಾಡಿರಿ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.

ಕಟಕ :-

ಸಣ್ಣಪುಟ್ಟ ವಿಷಯಗಳನ್ನು ಬಗ್ಗೆ ಜಗಳವಾಡಿ ದೊಡ್ಡದು ಮಾಡಿ ಸಂಗಾತಿಯಿಂದ ದೂರ ಇರುವುದು ಒಳ್ಳೆಯದಲ್ಲ. ನೀವು ಆಡುವ ಮಾತುಗಳನ್ನು ಇನ್ನೊಬ್ಬರೂ ಅಷ್ಟೇ ಗಹನವಾಗಿ ಚಿಂತಿಸುತ್ತಾರೆ ಎಂಬುದನ್ನು ತಿಳಿಯಿರಿ.

 ಸಿಂಹ:

ತಾಯಿಯ ಮಮತೆ ಮತ್ತು ವಾಹನ ಸುಖ ದೊರೆಯುವುದಾದರೂ ಸಂಗಾತಿಯ ಅಸಹಕಾರ ನಿಮ್ಮ ಮನೋಚಿಂತನೆಯನ್ನು ಹೆಚ್ಚಿಸುವುದು. ಮನೋನಿಯಾಮಕ ರುದ್ರ ದೇವರನ್ನು ಭಜಿಸಿ, ಒಳಿತಾಗುವುದು.

ಕನ್ಯಾ :-

ಹಣಕಾಸಿನ ತೊಂದರೆ ಕಡಿಮೆಯಾಗುತ್ತದೆ. ಬಾಳಸಂಗಾತಿಯೊಡನೆ ಚರ್ಚಿಸಿ ಸಲಹೆ ಪಡೆಯಲು ಸಕಾಲವಾಗಿದೆ. ನೀವಾಡುವ ಮಾತು ಇತರರಿಗೆ ರುಚಿಸುವುದಿಲ್ಲ. ಆರೋಗ್ಯದ ಸಲುವಾಗಿ ಗಣಪತಿಯನ್ನು ಪ್ರಾರ್ಥಿಸಿ.

ತುಲಾ:

ನಿಮ್ಮ ಹತ್ತಿರದ ಜನ ಅಥವಾ ಬಂಧುಗಳೇ ನಿಮ್ಮ ಕಾರ್ಯವೈಖರಿಯನ್ನು ಟೀಕಿಸುವರು. ನೀವು ಸಮಾಜದಲ್ಲಿ ಗಳಿಸುತ್ತಿರುವ ಗೌರವ, ಆದರಗಳನ್ನು ಕಂಡು ಇತರರು ಹೊಟ್ಟೆಕಿಚ್ಚು ಪಡುವರು. ನಿಮ್ಮ ಬಗ್ಗೆ ದೂರು ಹೇಳಿದರೆ ನಕ್ಕು ಸುಮ್ಮನಾಗಿ.

ವೃಶ್ಚಿಕ :-

ನೀವು ನಿಮ್ಮ ಮಕ್ಕಳ ಮೇಲೆ ಇಟ್ಟಂತಹ ಭರವಸೆ ಕಾರ್ಯರೂಪಕ್ಕೆ ಬರುವುದು. ಸಾಲದ ತೀರುವಳಿ ಮಾಡಿದಲ್ಲಿ ಅನುಕೂಲವಾಗುವುದು. ಭಗವಂತನ ಕೃಪೆ ಇದ್ದಲ್ಲಿ ನಿಮ್ಮನ್ನು ಜನರು ಹಾಡಿ ಕೊಂಡಾಡುವರು.

ಧನಸ್ಸು:

ವ್ಯಾಪಾರ, ವ್ಯವಹಾರ ಅಂದ ಮೇಲೆ ಲಾಭ ನಷ್ಟ ಇದ್ದದ್ದೇ. ಎಲ್ಲಾ ಕಾಲದಲ್ಲೂ ಲಾಭವೇ ಆಗುತ್ತದೆ ಎಂದು ತಿಳಿಯಬಾರದು. ಮುಷ್ಟಿ ಕಾಳು ಚೆಲ್ಲಿ ಮೂಟೆ ಕಾಳನ್ನು ಪಡೆಯುವಂತೆ ನಿಮ್ಮ ಹಣ ಖರ್ಚಾಗುವುದು. ಆದರೂ ಮುಂದೆ ಒಳಿತಾಗುವುದು.

ಮಕರ :-

ಮಾತು ಬಲ್ಲವನಿಗೆ ಜಗಳವಿಲ್ಲ ಎಂದರು ಹಿರಿಯರು. ನೀವಾಡುವ ಮಾತುಗಳು ಬಗ್ಗೆ ಮತ್ತೊಬ್ಬರಿಗೆ ನೋವನ್ನುಂಟು ಮಾಡುವ ಸಂಭವ ಹೆಚ್ಚು. ಈ ಬಗ್ಗೆ ಜಾಗ್ರತೆ ಇರಲಿ. ಆರೋಗ್ಯದ ಕಡೆ ಗಮನ ಇರಲಿ.

ಕುಂಭ:-

ನಿಮ್ಮ ಪ್ರತಿಭೆಯಿಂದ ಪದೋನ್ನತಿ ಸಿಗುವುದು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಓದು ಮುಂದುವರಿಕೆಯ ಬಗ್ಗೆ ಚಿಂತನೆ ನಡೆಸುವಿರಿ. ಸಹಜವಾಗಿಯೇ ಕೆಲವರು ವಿರೋಧಿಸುವ ಜನ ಇರುತ್ತಾರೆ. ಅವರ ಟೀಕೆಗಳಿಗೆ ಕಿವಿಗೊಡದಿರಿ.

ಮೀನ:-

ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಚಾತುರ್ಯ ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ