ಸರ್ಕಾರಿ ಯೋಜನೆಗಳು

ನಿಮ್ಮ ಮನೆಗೆ ಬರ್ತಾ ಇದೆ ಉಚಿತ ಅನಿಲ ಭಾಗ್ಯ..!ನಿಮ್ಗೆ ಉಚಿತ ಸಿಲಿಂಡರ್,ಸ್ಟವ್ ಬೇಕಂದ್ರೆ ಮುಂದೆ ಓದಿ…

2181

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್‌ 1 ರಿಂದ  ರಾಜ್ಯದಲ್ಲಿ ಜಾರಿಗೆ ಬರಲಿದೆ.

ಕೇಂದ್ರ ಸರ್ಕಾರದ ಉಜ್ವಲ ಯೋಜನೆಯ ಪ್ರಯೋಜನ ಪಡೆದವರನ್ನು ಹೊರತುಪಡಿಸಿ ಉಳಿದ ಎಲ್ಲಾ ಬಿಪಿಎಲ್ ಕಾರ್ಡುದಾರರು ಅನಿಲ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಬಹುಹುದಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅಡುಗೆ ಅನಿಲ ಸಂಪರ್ಕ ಹೊಂದದೆ ಇರುವ ಬಿಪಿಎಲ್ ಕುಟುಂಬದವರು ಇದೇ ತಿಂಗಳಿನಿಂದ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ಸಲ್ಲಿಸಬಹುದು. ಆಹಾರ ಇಲಾಖೆ ಹಾಗೂ ಸಂಬಂಧಿಸಿದ ಅನಿಲ ವಿತರಕರು ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ.

ಉಚಿತ ಅನಿಲ ಭಾಗ್ಯ ಯೋಜನೆಯಲ್ಲಿ ಏನೆಲ್ಲಾ ಸಿಗಲಿದೆ?

  • 2 ಕೆ.ಜಿ ಅನಿಲ ಸಿಲಿಂಡರ್‌
  • ಉಚಿತ ಗ್ಯಾಸ್ ಸ್ಟವ್
  • ರೆಗ್ಯುಲೇಟರ್‌
  • ಉಚಿತವಾಗಿ ಎರಡು ಬಾರಿ ಸಿಲಿಂಡರ್ ಭರ್ತಿ ಮಾಡಲಾಗುತ್ತದೆ.

‘ಉಜ್ವಲ ಯೋಜನೆ’ ಹೊದಿರುವವರು ಇದಕ್ಕೆ ಅರ್ಹರಲ್ಲ…

ಇದಕ್ಕೆ ಮೊದಲು ಕೇಂದ್ರ ಸರ್ಕಾರದ ‘ಉಜ್ವಲ ಯೋಜನೆ’ಯಲ್ಲಿ ಸಿಲಿಂಡರ್ ಮತ್ತು ಅನಿಲ ಸಂಪರ್ಕ ಪಡೆದವರಿಗೆ  ಉಚಿತವಾಗಿ ಒಲೆ ವಿತರಿಸಲು ನಿರ್ಧರಿಸಲಾಗಿತ್ತು. ಆದರೆ, ಉಜ್ವಲ ಯೋಜನೆಯ ಸೌಲಭ್ಯ ರಾಜ್ಯದ ಎಲ್ಲ ಬಿಪಿಎಲ್‌ ಕುಟುಂಬಗಳಿಗೆ ಸಿಗುವುದಿಲ್ಲ ಎಂಬ ಕಾರಣಕ್ಕೆ ‍ಪ್ರತ್ಯೇಕವಾಗಿಯೇ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಲಾಗಿದೆ.

ಇಲ್ಲಿ ಓದಿ: ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ..?

ಈ ಯೋಜನೆಯಿಂದ ಸರ್ಕಾರ ಭಾರಿಸಲಿರುವ ವೆಚ್ಚ:-

ಈ ಯೋಜನೆಯಿಂದ ಸ್ಟೌವ್, ಕನೆಕ್ಟರ್ ಹಾಗೂ ಮೊದಲ ಎರಡು ಗ್ಯಾಸ್ ಸಿಲಿಂಡರ್ ಸರ್ಕಾರದ ಕಡೆಯಿಂದ ಉಚಿತವಾಗಿ ನೀಡಲಾಗುತ್ತದೆ. ಇದಕ್ಕೆ ಸರ್ಕಾರಕ್ಕೆ ಪ್ರತಿ ಸಂಪರ್ಕಕ್ಕೆ 4,040 ರೂ. ವೆಚ್ಚ ತಗಲಿದೆ ಎಂದು ಹೇಳಲಾಗಿದೆ.

ರಾಜ್ಯದ 10 ಲಕ್ಷ ಬಿಪಿಎಲ್ ಕುಟುಂಬಕ್ಕೆ ಉಚಿತವಾಗಿ ಗ್ಯಾಸ್ ಸಂಪರ್ಕ ನೀಡಲು ಸರ್ಕಾರ ಮುಂದಾಗಿದ್ದು, ಇದಕ್ಕಾಗಿ 300 ಕೋಟಿ ರೂ. ವ್ಯಯಿಸಲಿದೆ ಎಂದು ಹೇಳಲಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ