ಉಪಯುಕ್ತ ಮಾಹಿತಿ

ಪ್ರಧಾನಮಂತ್ರಿ ಜನೌಷಧಿ ಯೋಜನೆಯಲ್ಲಿ, ಕ್ಯಾನ್ಸೆರ್’ಗೂ ಸಿಗಲಿವೆ ಅತೀ ಕಡಿಮೆ ಬೆಲೆಯ ಗುಣಮಟ್ಟದ ಔಷಧಿಗಳು!ತಿಳಿಯಲು ಈ ಲೇಖನ ಓದಿ…

By admin

October 18, 2017

ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.

 

ಜನೌಷಧಿಯ ಮಹತ್ವ:-

ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸರಕಾರ ಜನೌಷಧಿ ಮಳಿಗೆಗಳನ್ನು ಆರಂಭಿಸಿದೆ. ಹಲವು ತಾಲ್ಲೂಕು ಕೇಂದ್ರ ಗಳಲ್ಲಿಯೂ ಆರಂಭವಾಗಿದೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ‘ಪ್ರಧಾನ ಮಂತ್ರಿ ಭಾರತೀಯ ಜನರಿಕ್ ಕೇಂದ್ರ’ವು ಈ ನಿಟ್ಟಿನಲ್ಲಿ ಕರ್ನಾಟಕ ಸೇರಿದಂತೆ ದೇಶದ ಅನೇಕ ಕಡೆ ಮಳಿಗೆಗಳನ್ನು ಆರಂಭಿಸಿದೆ. ಈಗ ಮಾರುಕಟ್ಟೆಯಲ್ಲಿ ಇರುವ ವಿವಿಧ ಔಷಧಿ ಅಂಗಡಿಗಳಿಗೆ ಹೋಲಿಸಿದರೆ ಈ ಜನೌಷಧಿ ಮಳಿಗೆಗಳಲ್ಲಿ ಸಿಗುವ ಜೀವನಾಶ್ಯಕ ಔಷಧಿಗಳು ಶೇ.90ರ ದರಕ್ಕಿಂತ ಕಡಿಮೆ ಬೆಲೆಗೆ ಲಭ್ಯವಾಗುತ್ತವೆ.

ಎಲ್ಲ ವರ್ಗದವರಿಗೂ ಕಡಿಮೆ ದರದಲ್ಲಿ ದೊರೆಯುವ ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದ ಕಾರ್ಯ ಶ್ಲಾಘನೀಯ. ನಗರದ ಜನರು ಇದರ  ಸದುಪಯೋಗ ಪಡೆದುಕೊಳ್ಳಬೇಕು’ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಬಡವರಿಗೆ ಕಡಿಮೆ ದರದಲ್ಲಿ ಔಷಧಿಯನ್ನು ವಿತರಿಸಲಾಗುತ್ತಿದೆ.

ನಿಧಾನವಾಗಿ ಈ ಜನೌಷಧಿ ಮಳಿಗೆಗಳು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜನಪ್ರಿಯವಾಗುತ್ತಿವೆ. ಸಣ್ಣಪುಟ್ಟ ರೋಗರುಜಿನಗಳಿಗೂ ಜನಸಾಮಾನ್ಯರು ವೈದ್ಯರ ಬಳಿಗೆ ಹೋದರೆ ದುಬಾರಿ ಬೆಲೆಯ ಬ್ರಾಂಡೆಡ್ ಔಷಧಿಯನ್ನು ಬರೆದುಕೊಡುತ್ತಾರೆ. ಇದರಲ್ಲಿ ವೈದ್ಯರು ಮತ್ತು ಔಷಧಿ ಕಂಪೆನಿಗಳ ನಂಟು ಕೂಡಾ ಪ್ರಭಾವ ಬೀರುತ್ತದೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೆಲವು ದಿನಗಳ ಹಿಂದೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಪ್ರಧಾನಮಂತ್ರಿ ಅಸಮಾಧಾನ ವ್ಯಕ್ತಪಡಿಸಿದ ಆನಂತರ ಭಾರತೀಯ ವೈದ್ಯಕೀಯ ಮಂಡಳಿ ಆದೇಶವೊಂದನ್ನು ಹೊರಡಿಸಿ ಇನ್ನು ಮುಂದೆ ವೈದ್ಯರು ರೋಗಿಗಳಿಗೆ ಜನರಿಕ್ ಔಷಧಿಯನ್ನೇ ಬರೆದುಕೊಡಬೇಕೆಂದು ತಿಳಿಸಿತ್ತು. ಈಗ ಎಲ್ಲೆಡೆ ಈ ಯೋಜನೆಗೆ ವ್ಯಾಪಕ ಸ್ಪಂದನೆ ವ್ಯಕ್ತವಾಗುತ್ತಿದೆ..

ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಆರೋಗ್ಯ ಸೇವೆ ಕೈಗೆಟಕುವ ದರದಲ್ಲಿ ದೊರಕಬೇಕೆನ್ನುವ ಉದ್ದೇಶ ಇದರ ಹಿಂದಿದೆ.. ರಾಷ್ಟ್ರವೊಂದು ಅಭಿವೃದ್ಧಿಗೊಳ್ಳಬೇಕಾದಲ್ಲಿ ರಾಷ್ಟ್ರದ ಪ್ರಜೆಗಳು ಆರೋಗ್ಯವಂತರಾಗಿರುವುದು ಕೂಡ ಅಷ್ಟೆ ಮುಖ್ಯ,  ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಿ.

ಇಲ್ಲಿ ಗುಣಮಟ್ಟದ ಔಷಧಿ ಕಡಿಮೆ ದರದಲ್ಲಿ ಲಭ್ಯ:-

ಸಾರ್ವಜನಿಕರ ಕಷ್ಟವನ್ನು ದೂರಮಾಡಲು ಮನೆಬಾಗಿಲಿಗೆ ದೇವರು ಬಂದಂತಾಗಿದೆ. ಕೇಂದ್ರ ಸರ್ಕಾರ ಸಾಮಾನ್ಯ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಬೇಕೆಂಬ ನಿಟ್ಟಿನಲ್ಲಿ ಪ್ರತಿ ಜಿಲ್ಲಾ, ತಾಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಿದ್ದು ಪ್ರತಿಯೊಬ್ಬರೂ ಇಲ್ಲಿಂದಲೇ ಔಷಧಿಗಳನ್ನು ಖರೀದಿಸಬೇಕು ಎಂದು ಜನೌಷಧಿ ಕೇಂದ್ರದ ಹಿರಿಯ ಅಧಿಕಾರಿ ಡಾ.ಅನಿಲಾ ದೀಪಕ್ಶೆಟ್ಟಿ ಕರೆ ನೀಡಿದರು.