ರಾಜಕೀಯ

ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದೇಕೆ ಗೊತ್ತಾ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?

186

ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ.

ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ ಮೋದಿ ಅವರ ದೇಶಭಕ್ತಿಯನ್ನ ಯಾರಿಂದಲೂ ಪ್ರಶ್ನೆ ಮಾಡಲು ಸಾಧ್ಯವಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಅದೇ ರೀತಿಯಾಗಿ ಸಮಾಜಮುಖಿಯಾಗಿ, ಸಮಾಜದ ಪರವಾಗಿ ಹಾಗೂ ಸಮಾಜಕೋಸ್ಕರ ಹೋರಾಟ ಮಾಡುವ ಬಹಳಷ್ಟು ತ್ಯಾಗಮಯಿ ರಾಜಕಾರಣಿಗಳಿದ್ದಾರೆ. ಅವರಿಂದಲೇ ಅಲ್ಪ ಸ್ವಲ್ಪ ನ್ಯಾಯ ನಮ್ಮ ಬಡವರಿಗೆ ಹಾಗೂ ರೈತರಿಗೆ ಸಿಗುತ್ತಿದೆ. ಸಿಎಂ ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿದ್ದು ಸುಳ್ಳಲ್ಲ. ಅವರು ಯಾರಿಗೂ ಮೋಸ ಮಾಡಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಯೋಜನೆಗಳನ್ನ ಮರೆಯುವಂತಿಲ್ಲ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿ ಹೇಳಿಕೆ ನೀಡಿರುವುದು ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಶಾಸಕಿ ಹೆಬ್ಬಾಳ್ಕರ್ ಮೋದಿಯನ್ನ ಹೊಗಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ