ಸುದ್ದಿ

ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರಿಗೊಂದು ಬಿಗ್ ಶಾಕ್, ಇಷ್ಟಕ್ಕೂ ಏನದು, ಇದನ್ನೊಮ್ಮೆ ಓದಿ ..!

50

ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ 500ರೂ.ಗೆ ಹೆಚ್ಚಿಸಲಾಗಿದೆ. ಪರವಾನಗಿ ಇಲ್ಲದೆ ಅನಧಿಕೃತ ವಾಹನಗಳಿಗೆ 1000 ದಿಂದ 5000ರೂ. ವರೆಗೆ ಪರಿಷ್ಕರಿಸಲಾಗಿದೆ.

ಚಾಲನಾ ಪರವಾನಗಿ ಇಲ್ಲದೆ ವಾಹನ ಚಾಲನೆ ಮಾಡಿದರೆ ವಿಧಿಸುವ ದಂಡದ ಪ್ರಮಾಣವನ್ನು 500 ರಿಂದ 5000ರೂ.ಗೆ ಹೆಚ್ಚಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದಕ್ಕೆ ವಿಧಿಸಲಾಗುತ್ತಿದ್ದ ದಂಡವನ್ನು 2000 ದಿಂದ 10,000ರೂ.ಗೆ ಹೆಚ್ಚಿಸಲಾಗಿದೆ. ಅತೀ ವೇಗದ ಚಾಲನೆಗೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 400 ರಿಂದ 1000ರೂ.ಗೆ ಪರಿಷ್ಕರಿಸಲಾಗಿದೆ. ಪರವಾನಗಿ ಇಲ್ಲದ ವಾಹನಕ್ಕೆ ವಿಧಿಸಲಾಗುತ್ತಿದ್ದ ದಂಡವನ್ನು 5000 ದಿಂದ 10,000ಕ್ಕೆ ಹೆಚ್ಚಿಸಲಾಗಿದ್ದು, ಅರ್ಹತೆ ಇಲ್ಲದವರು ವಾಹನ ಚಾಲನೆ ಮಾಡಿದರೆ ವಿಧಿಸಲಾಗುತ್ತಿದ್ದ ದಂಡವನ್ನು 500 ರಿಂದ 10,000ರೂ.ಗೆ ಹೆಚ್ಚಳ ಮಾಡಲಾಗಿದೆ.

ಸೀಟ್‍ಬೆಲ್ಟ್ ಧರಿಸದೆ ವಾಹನ ಚಾಲನೆ ಮಾಡಿದರೆ ವಿಧಿಸುವ ದಂಡದ ಪ್ರಮಾಣ 100 ರಿಂದ 1000ರೂ.ಗೆ ಹೆಚ್ಚಿಸಲಾಗಿದೆ. ಆ್ಯಂಬುಲೆನ್ಸ್‍ನಂತಹ ತುರ್ತು ವಾಹನಗಳಿಗೆ ಅವಕಾಶ ಮಾಡಿಕೊಡದಿದ್ದರೆ 10,000ರೂ., ಟಿಕೆಟ್ ರಹಿತ ಪ್ರಯಾಣಕ್ಕೆ 500ರೂ. ದಂಡ ವಿಧಿಸಲಾಗಿದೆ. ವಿಮೆ ಇಲ್ಲದೆ ಚಾಲನೆ ಮಾಡುವ ವಾಹನಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 1000 ದಿಂದ 2000ರೂ.ಗೆ ಹಾಗೂ ಅಪಾಯಕಾರಿ ವಾಹನ ಚಾಲನೆಗೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 1000 ದಿಂದ 5000ರೂ.ಗೆ ಹೆಚ್ಚಿಸಲಾಗಿದೆ.

ಅತಿ ಭಾರದ ಸರಕು ಸಾಗಣೆ ಮಾಡಿದರೆ 20,000ರೂ.ವರೆಗೂ ದಂಡ ವಿಧಿಸುವುದಲ್ಲದೆ ಅಧಿಕ ಸಂಖ್ಯೆಯ ಪ್ರಯಾಣಿಕರನ್ನು ಕರೆದೊಯ್ಯುವ ವಾಹನಗಳಿಗೆ ಪ್ರತೀ ಪ್ರಯಾಣಿಕರಿಗೆ 1000ರೂ., ಹಾಗೆಯೇ ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸಿದರೆ 1000 ದಿಂದ 5000ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಅಪ್ರಾಪ್ತರು ವಾಹನ ಚಾಲನೆ ಮಾಡಿ ಎಸಗುವ ಅಪರಾಧಕ್ಕೆ 25,000ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ ವಿಧಿಸುವ ಅವಕಾಶವನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ