ಸುದ್ದಿ

ಬ್ರೆಕಿಂಗ್ ಸುದ್ದಿ..!ಭಾರತೀಯ ವಾಯು ಸೇನೆಯ ಪೈಲಟ್ ನ್ನು ಬಂಧಿಸಿದ್ದೇವೆಂದು ವಿಡಿಯೋ ಬಿಡುಗಡೆ ಮಾಡಿದ ಪಾಕ್?

247

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ. 

ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು ಹೇಳಿರುವ ವಿಡಿಯೋವನ್ನು ಪಾಕಿಸ್ತಾನ ಸೇನೆ ಬಿಡುಗಡೆ ಮಾಡಿದೆ. ಇದು ಎಷ್ಟು ನಿಜವೋ ಎಂಬುದು ಇನ್ನು ತಿಳಿದುಬಂದಿಲ್ಲ.

ಜೈಷ್ ಉಗ್ರರ ಮೇಲೆ ದಾಳಿ ನಡೆಸಿದ ಬಳಿಕ ಭಾರತದ ಸೈನಿಕರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ವಾಯುಸೇನೆ ಇಂದು ಬೆಳಗ್ಗೆ ದಾಳಿ ಮಾಡಿದೆ. ಈ ದಾಳಿಯ ವಿಚಾರ ತಿಳಿಯುತ್ತಿದ್ದಂತೆ ಭಾರತ ಪ್ರತಿದಾಳಿ ನಡೆಸುವ ವೇಳೆ ಪಾಕಿಸ್ತಾನದ ಒಂದು ವಿಮಾನ ಪತನವಾಗಿದೆ ಎಂಬ ವರದಿಗಳು ಬಂದಿವೆ.

ಪಾಕ್ ವಾಯುಸೇನೆಯನ್ನು ಹಿಮ್ಮೆಟ್ಟಿಸುವ ಸಮಯದಲ್ಲಿ ನಮ್ಮ ಮಿಗ್ ವಿಮಾನ ಪತನಗೊಂಡಿದ್ದು ಪೈಲಟ್ ನಾಪತ್ತೆಯಾಗಿದ್ದಾರೆ. ಪಾಕಿಸ್ತಾನ ಪೈಲಟ್ ನಮ್ಮ ಬಳಿ ಇದ್ದಾರೆ ಎಂದು ಹೇಳುತ್ತಿದೆ. ಈ ಮಾಹಿತಿಯನ್ನು ನಾವು ಪರಿಶೀಲಿಸುತ್ತಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಇತಿಹಾಸ

    ʼಮೈಸೂರು ದಸರಾʼ ಶುರುವಾಗಿದ್ದೇಗೆ ಗೊತ್ತಾ?,ಅದರ ಹಿನ್ನೆಲೆ ಏನೆಂದು ತಿಳಿಹಿರಿ…!

    ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…

  • ಸುದ್ದಿ

    ರಾಮಮಂದಿರಕ್ಕೆ ಜೂನ್‌ 10ರಂದು ಶಿಲಾನ್ಯಾಸ, ರುದ್ರಾಭಿಷೇಕದೊಂದಿಗೆ ನಿರ್ಮಾಣ ಆರಂಭ!

    ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್‌ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ರಾಶಿಗಳಿಗೆ ವಿಪರೀತ ಧನಯೋಗವಿದ್ದು, ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…

  • ಜ್ಯೋತಿಷ್ಯ

    ಶಾಸ್ತ್ರಗಳ ಪ್ರಕಾರ ಯಾವ ರಾಶಿಯವರು ಯಾವ ಬಣ್ಣದ ಬಳೆ ಹಾಕಿದ್ರೆ ಗಂಡನ ಆಯಸ್ಸು ಹೆಚ್ಚಾಗುತ್ತೆ ನೋಡಿ

    ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…

  • ಸುದ್ದಿ

    ಗಂಡು ಹೆಣ್ಣು ಹಾರ ಬದ್ಲಾಯಿಸಿಕೊಂಡ ನಂತರ ವರನ ದುರ್ಮರಣ……?ಯಾಕೆ

    ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….

  • Uncategorized

    ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

    ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ