ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು.
ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ ಧರಿಸಿಕೊಂಡು ಬಂದೆ ಎಂದು ಪವಿತ್ರಾ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಕಾಲೇಜು ವಿದ್ಯಾರ್ಥಿನಿ ಸುಮತಿ ಮನೆಗೆ ವಾಪಸ್ಸಾಗಿ ಬೇರೆ ಬಟ್ಟೆ ಧರಿಸಿ ಆರ್ಟಿಓ ಕಚೇರಿಗೆ ಬಂದಿದ್ದರು. ಅಂದು ಸುಮತಿ ಬರ್ಮುಡಾ ಹಾಗೂ ಶರ್ಟ್ ಧರಿಸಿದ್ದರು. ಹೀಗಾಗಿ ಮತ್ತೆ ಮನೆಗೆ ತೆರಳಿ ನಿಯತ್ತಾದ ಡ್ರೆಸ್ ಧರಿಸಿ ಬಂದಿದ್ದರು. ಇದಕ್ಕೂ ಮೊದಲು ಡ್ರೆಸ್ ಕುರಿತಂತೆ ಸುಮತಿ ಹಾಗೂ ಇನ್ಸ್ ಪೆಕ್ಟರ್ ಮಧ್ಯೆ ವಾಗ್ವಾದ ನಡೆದಿತ್ತು. ಇವರಿಬ್ಬರ ಜಗಳ ತಾರಕಕ್ಕೇರುತ್ತಿದ್ದಂತೆಯೇ ಇನ್ಸ್ ಸ್ಪೆಕ್ಟರ್ ಸಹೋದ್ಯೋಗಿಗಳು ಸ್ಥಳದಲ್ಲಿ ಜಮಾಯಿಸಿ ಸಮಜಾಯಿಷಿ ನೀಡಿದ್ದಾರೆ.
ಲೈಸೆನ್ಸ್ ಸಿಗುವ ಈ ಅವಕಾಶವನ್ನು ದುರುಪಯೋಗಪಡಿಸಿಕೊಳ್ಳಲು ನನಗೆ ಇಷ್ಟವಿರಲಿಲ್ಲ. ಹೀಗಾಗಿ ನಾನು ಮತ್ತೆ ಮನೆಗೆ ತೆರಳಿ ಬಟ್ಟೆ ಬದಲಾಯಿಸಿಕೊಂಡು ಬಂದೆ ಎಂದು ಸುಮತಿ ತಿಳಿಸಿದ್ದಾರೆ.ಈ ಬಗ್ಗೆ ವಕೀಲ ವಿ. ಎಸ್ ಸುರೇಶ್ ಮಾತನಾಡಿ, ಡ್ರೈವಿಂಗ್ ಟೆಸ್ಟ್ ಗೆ ಇಂತದ್ದೇ ಡ್ರೆಸ್ ಹಾಕಿಕೊಂಡು ಬರಬೇಕೆಂಬ ನಿಯಮ ಕಾನೂನಿನಲ್ಲಿ ಇಲ್ಲ. ಆದರೆ ಲೈಸೆನ್ಸ್ ಸಿಗಬೇಕಾದರೆ ವ್ಯಕ್ತಿಗೆ 18 ವರ್ಷ ಆಗಿರಬೇಕು ಅಷ್ಟೇ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…
ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ
ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ. ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…