ಸುದ್ದಿ

ಮೆಡಿಸಿನ್ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಬ್ಲಾಸ್ಟ್- ವಿಷಾಪೂರಿತ ಅನಿಲ ಸೋರಿಕೆಯಿಂದ ಗ್ರಾಮಸ್ಥರು ಕಂಗಾಲು……!

96

ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್‍ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ ಮೇಲೆ ಬಿದ್ದಿದೆ. ಇದರಿಂದ ಗ್ರಾಮದ ನಾಲ್ವರು ಗಾಯಗೊಂಡಿದ್ದಾರೆ.

ಬಾಯ್ಲರ್ ನಿಂದ ವಿಷಾನಿಲ ಸೋರಿಕೆಯಾಗಿ ಸುತ್ತಮುತ್ತಲ ಜನರ ಉಸಿರಾಟಕ್ಕೆ ತೊಂದರೆಯಾಗಿದೆ. ಹಾಗೆಯೇ ಘಟನೆಯಿಂದ ಸುಮಾರು ಮೂರು ಕಿಮೀ ದೂರದಷ್ಟು ಸ್ಫೋಟದ ತೀವ್ರತೆಗೆ ಭೂಮಿ ನಡುಗಿದ ಅನುಭವವಾಗಿದೆ ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ಶಾಸಕ ಜ್ಯೋತಿಗಣೇಶ್ ಸೇರಿದಂತೆ ಎಲ್ಲಾ ಅಧಿಕಾರಿಗಳು ಆಗಮಿಸಿದ್ದಾರೆ.ಅವಘಡ ಸಂಭವಿಸುವ ವೇಳೆ ಫ್ಯಾಕ್ಟರಿಯಲ್ಲಿ ಯಾವ ಸಿಬ್ಬಂದಿಯೂ ಇರಲಿಲ್ಲ. ಬೆಳಗ್ಗಿನ ಸಮಯವಾಗಿದ್ದರಿಂದ ತಿಂಡಿಗೆ ಸಿಬ್ಬಂದಿ ತೆರಳಿದ್ದರು. ಹೀಗಾಗಿ ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.

ಅಲ್ಲದೆ ಈ ಹಿಂದೆ ಕೂಡ ಈ ರೀತಿ ಬಾಯ್ಲರ್ ಸ್ಫೋಟಗೊಂಡಿತ್ತು. ಆಗ ಕೂಡ ವಿಷಾನಿಲ ಸೋರಿಕೆಯಾಗಿ ಗ್ರಾಮಸ್ಥರು ಉಸಿರಾಡಲು ಕಷ್ಟಪಟ್ಟಿದ್ದರು. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಂದ ಈ ಭಾಗದ ಸುತ್ತಮುತ್ತ ವಾಸಿಸುತ್ತಿರುವ ಜನರು ತೊಂದರೆ ಅನುಭವಿಸುವಂತಗಿದೆ. ಅನಾರೋಗ್ಯದಿಂದ ಬಳಲುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಸದ್ಯ ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೇಗೆ ಸ್ಫೋಟ ಸಂಭವಿಸಿತು ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಗೆ ಬರೋಬ್ಬರಿ 19 ಸಲಿ ಸರ್ಜರಿ ಮಾಡಿದರು ಸರಿ ಆಗಿಲ್ಲ..! ಇತನ ವಿಚಿತ್ರ ಕಾಯಿಲೆ ಏನು ಗೊತ್ತಾ..?

    ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್‌ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…

  • ವಿಚಿತ್ರ ಆದರೂ ಸತ್ಯ, ವ್ಯಕ್ತಿ ವಿಶೇಷಣ

    ಸತ್ತ ಭಿಕ್ಷುಕನ ಮನೆಯಲ್ಲಿ ದೊರೆತ ಹಣ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ ಪುರುಷರ ಜೊತೆ ಸಂಬಂಧ ಬೆಳೆಸಿ ಹೇಳೋದೇನು ಗೊತ್ತಾ…?ತಿಳಿಯಲು ಈ ಲೇಖನ ಓದಿ..

    ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.

  • ಸುದ್ದಿ

    ಮೊಬೈಲ್ ನಂಬರ್ ಬದಲಿಸುವ ಮುನ್ನ ಹೆಚ್ಚರ!..ಈ ಸುದ್ದಿ ತಿಳಿದರೆ ನಡುಕ ಹುಟ್ಟಿಸುತ್ತಿದೆ!

    ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್​ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…

  • ಸಿನಿಮಾ

    ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಮೀಟೂ ಪ್ರಕರಣ ಏನಾಗಿದೆ ಗೊತ್ತಾ..?

    ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…