ಕರ್ನಾಟಕ

ರಾಜ್ಯದ 6000 ಶಿಕ್ಷಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ..!

1508

ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆ ಏನು ಗೊತ್ತಾ?

ರಾಜ್ಯದಲ್ಲಿರುವ ಸುಮಾರು 6,000 ಶಿಕ್ಷಕರು ತಮ್ಮ ಸೇವೆಯಲ್ಲಿ ಮುಂದುವರಿಯಲು ಡಿಪ್ಲೊಮಾ ಇನ್ ಎಜುಕೇಷನ್ (ಡಿ.ಎಡ್) ಅರ್ಹತೆಯನ್ನು ಪೂರ್ಣಗೊಳಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಎಲ್ಲಾ ಶಿಕ್ಷಕರು ನ್ಯಾಷನಲ್ ಇನ್ಸ್‍ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‍ಐಒಎಸ್) ಸಂಸ್ಥೆಯಿಂದ ಮುಕ್ತ ಮತ್ತು ದೂರಶಿಕ್ಷಣದ ಮೂಲಕ 31ನೇ ಮಾರ್ಚ್ 2019ರ ಒಳಗೆ ಈ ಕನಿಷ್ಠ ವಿದ್ಯಾರ್ಹತೆಯನ್ನು ಹೊಂದಬೇಕು ಎಂದು ಸಚಿವಾಲಯ ನಿರ್ದೇಶನ ನೀಡಿದೆ.

ನಿಗದಿತ ಅವಧಿಯೊಳಗೆ ಅಗತ್ಯ ತರಬೇತಿ ಪಡೆಯಲು ವಿಫಲವಾಗುವ ಯಾವುದೇ ಶಿಕ್ಷಕ, ಶಿಕ್ಷಕಿಯರನ್ನು ವಜಾಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಅಗತ್ಯ ಕನಿಷ್ಠ ವೃತ್ತಿಪರ ವಿದ್ಯಾರ್ಹತೆ ಪಡೆಯಲು ಇದು ಶಿಕ್ಷಕರಿಗೆ ನೀಡುತ್ತಿರುವ ಕೊನೆಯ ಅವಕಾಶವಾಗಿದೆ ಎಂದು ತಿಳಿಸಲಾಗಿದೆ.


ಸೇವೆಯಲ್ಲಿರುವ ಎಲ್ಲ ಶಿಕ್ಷಕರು ಡಿ.ಎಡ್ ವಿದ್ಯಾರ್ಹತೆ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರಗಳು ಶಾಲೆಗಳಿಗೆ ಅಂತಿಮ ಗಡುವಿನ ಬಗ್ಗೆ ಮಾಹಿತಿ ನೀಡಬೇಕು ಹಾಗೂ ಶಿಕ್ಷಕರು ಈ ವಿದ್ಯಾರ್ಹತೆ ಹೊಂದುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅನಿತಾ ಕಾರ್ವಾಲ್ ತಿಳಿಸಿದ್ಧಾರೆ.

ನಾವು ಈ ಪ್ರಕ್ರಿಯೆಯನ್ನು ಆರಂಭಿಸಿದ್ದೇವೆ. ರಾಜ್ಯಾದ್ಯಂತ ಇರುವ ಎಲ್ಲ ಶಿಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ಧಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಯಮಾಡಿ ಬಿಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೇಳಿಕೊಂಡ ನಟ ಪ್ರಕಾಶ್ ರೈ ಪತ್ನಿ..!

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…

  • ಸುದ್ದಿ

    ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

    ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….

  • ಸಂಬಂಧ

    ಮದುವೆಯಾಗುವ ಹುಡುಗನಿಗೆ ಅಡುಗೆ ಬರುತ್ತಾ???ಶಾಕ್ ಆಗ್ಬೇಡಿ!ಮುಂದೆ ಓದಿ…..

    ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ

  • ಸುದ್ದಿ

    9ನೇ ತರಗತಿಗೆ ನೇರ ಪ್ರವೇಶ ಪಡೆದ 8 ವರ್ಷದ ಬಾಲಕ : ಕಾರಣವೇನು ಗೊತ್ತಾ ?

    ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…

  • ಸುದ್ದಿ

    ಕಾಂಗ್ರೆಸ್‍ನ ಡಿಸಿಎಂ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರಿಂದ ರಾಜೀನಾಮೆ….!

     ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…