ಸುದ್ದಿ

ರೈಲ್ವೇ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಗೆ ಹೆರಿಗೆ ಮಾಡಿದ ವೈದ್ಯರು..ನಿಜಕ್ಕೂ ಅಚ್ಚರಿಯೇ ಹೌದು….!

24

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ  ಡಾ ರಾಹುಲ್ ಗುಳೆ ತಿಳಿಸಿದ್ದಾರೆ.

ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ವಿಷಯವನ್ನು ರೈಲ್ವೇ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡ ಕೂಡಲೇ ರೈಲ್ವೆ ಅಧಿಕಾರಿಗಳು ಕೂಡಲೇ ಪ್ಲಾಟ್‌ಫಾರಂನಲ್ಲಿರುವ  ಚಿಕಿತ್ಸಾಲಯಕ್ಕೆ ಕರೆತಂದರು.  ಅರ್ಧ ಗಂಟೆಯಲ್ಲಿ ಸುಸೂತ್ರವಾಗಿ ಹೆರಿಗೆಯಾಗಿ, ತಾಯಿ ಹಾಗೂ ಗಂಡು ಮಗು ಆರೋಗ್ಯವಾಗಿದ್ದಾರೆ.ಹೆಚ್ಚುವರಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದ್ದಾರೆ.

ಥಾಣೆ ರೈಲ್ವೇ ನಿಲ್ದಾಣದಲ್ಲಿರುವ 1 ರೂ. ಕ್ಲಿನಿಕ್ ಅನ್ನು ಖಾಸಗಿಯವರು ನಡೆಸುತ್ತಿದ್ದಾರೆ. ಈ ಕ್ಲಿನಿಕ್‍ನಲ್ಲಿ ಇದುವರೆಗೂ 10 ಮಂದಿಗೆ ಹೆರಿಗೆ ಮಾಡಿಸಲಾಗಿದೆ. ರೈಲ್ವೇ ನಿಲ್ದಾಣದಲ್ಲಿರುವ ಒಂದು ರೂಪಾಯಿ ಆಸ್ಪತ್ರೆಗೆ ಮತ್ತು ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ರೈಲ್ವೆ ನಿಲ್ದಾಣದಲ್ಲಿ ತುರ್ತು ಚಿಕಿತ್ಸೆಗಾಗಿ ಈ ಒಂದು ರೂಪಾಯಿ ಚಿಕಿತ್ಸಾಲಯವನ್ನು ತೆರೆಯಲಾಯಿತು.  ಇದರ ಮೂಲ ಅಗತ್ಯ ಸೇವೆ ಒದಗಿಸಲು ನಮಗೆ ಅವಕಾಶ ನೀಡಿದ ರೈಲ್ವೆ ಅಧಿಕಾರಿಗಳಿಗೆ ಧನ್ಯವಾದ. ಈ ಹೆರಿಗೆಯ ಮೂಲಕ ಒಂದು ರೂಪಾಯಿ ಚಿಕಿತ್ಸಾಲಯದ ಮಹತ್ವ ಹಾಗೂ ರೈಲು ನಿಲ್ದಾಣದಲ್ಲಿ ಇಂತಹ ಚಿಕಿತ್ಸಾಲಯದ ಅಗತ್ಯವಿದೆ ಎಂಬುದು ಸಾಬೀತಾಗಿದೆ ಎಂದು ಡಾ ಗುಳೆ ಹೇಳಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

  • ಸುದ್ದಿ

    2 ದಿನಗಳ ಭೇಟಿಗಾಗಿ ಕೇದಾರನಾಥಕ್ಕೆ ಬಂದಿಳಿದ ಪ್ರಧಾನಿ ಮೋದಿ, ಪುನರ್ನಿರ್ಮಾಣ….

    ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್‌ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…

  • ಸುದ್ದಿ

    ‘ಕಾರ್ಗಿಲ್‌’ ಮೀನುಗಳ ಕಾಟ ; ಗಗನಕ್ಕೇರಿದ ಮೀನಿನ ಬೆಲೆ,.!!

    ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ  ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್‌ ಮೀನಿನ ಕಾಟವು  ಮುಂದುವರೆದಿದೆ ಇದರಿಂದ  ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು  ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್‌ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…

  • ಸುದ್ದಿ

    ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

    ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…

  • karnataka, ವಿಶೇಷ ಲೇಖನ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
    ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್