ಸುದ್ದಿ

ರೈಲ್ವೇ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಗೆ ಹೆರಿಗೆ ಮಾಡಿದ ವೈದ್ಯರು..ನಿಜಕ್ಕೂ ಅಚ್ಚರಿಯೇ ಹೌದು….!

By admin

October 11, 2019

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ  ಡಾ ರಾಹುಲ್ ಗುಳೆ ತಿಳಿಸಿದ್ದಾರೆ.

ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ವಿಷಯವನ್ನು ರೈಲ್ವೇ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡ ಕೂಡಲೇ ರೈಲ್ವೆ ಅಧಿಕಾರಿಗಳು ಕೂಡಲೇ ಪ್ಲಾಟ್‌ಫಾರಂನಲ್ಲಿರುವ  ಚಿಕಿತ್ಸಾಲಯಕ್ಕೆ ಕರೆತಂದರು.  ಅರ್ಧ ಗಂಟೆಯಲ್ಲಿ ಸುಸೂತ್ರವಾಗಿ ಹೆರಿಗೆಯಾಗಿ, ತಾಯಿ ಹಾಗೂ ಗಂಡು ಮಗು ಆರೋಗ್ಯವಾಗಿದ್ದಾರೆ.ಹೆಚ್ಚುವರಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದ್ದಾರೆ.

ಥಾಣೆ ರೈಲ್ವೇ ನಿಲ್ದಾಣದಲ್ಲಿರುವ 1 ರೂ. ಕ್ಲಿನಿಕ್ ಅನ್ನು ಖಾಸಗಿಯವರು ನಡೆಸುತ್ತಿದ್ದಾರೆ. ಈ ಕ್ಲಿನಿಕ್‍ನಲ್ಲಿ ಇದುವರೆಗೂ 10 ಮಂದಿಗೆ ಹೆರಿಗೆ ಮಾಡಿಸಲಾಗಿದೆ. ರೈಲ್ವೇ ನಿಲ್ದಾಣದಲ್ಲಿರುವ ಒಂದು ರೂಪಾಯಿ ಆಸ್ಪತ್ರೆಗೆ ಮತ್ತು ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ರೈಲ್ವೆ ನಿಲ್ದಾಣದಲ್ಲಿ ತುರ್ತು ಚಿಕಿತ್ಸೆಗಾಗಿ ಈ ಒಂದು ರೂಪಾಯಿ ಚಿಕಿತ್ಸಾಲಯವನ್ನು ತೆರೆಯಲಾಯಿತು.  ಇದರ ಮೂಲ ಅಗತ್ಯ ಸೇವೆ ಒದಗಿಸಲು ನಮಗೆ ಅವಕಾಶ ನೀಡಿದ ರೈಲ್ವೆ ಅಧಿಕಾರಿಗಳಿಗೆ ಧನ್ಯವಾದ. ಈ ಹೆರಿಗೆಯ ಮೂಲಕ ಒಂದು ರೂಪಾಯಿ ಚಿಕಿತ್ಸಾಲಯದ ಮಹತ್ವ ಹಾಗೂ ರೈಲು ನಿಲ್ದಾಣದಲ್ಲಿ ಇಂತಹ ಚಿಕಿತ್ಸಾಲಯದ ಅಗತ್ಯವಿದೆ ಎಂಬುದು ಸಾಬೀತಾಗಿದೆ ಎಂದು ಡಾ ಗುಳೆ ಹೇಳಿದ್ದಾರೆ