ಸುದ್ದಿ

ಶಬರಿಮಲೆಗೆ ಮಹಿಳೆಯರಿಬ್ಬರ ಪ್ರವೇಶ ಮಾಡಿದ್ದರ ಬಗ್ಗೆ ವೀರೇಂದ್ರ ಹೆಗ್ಗಡೆರವರು ಹೇಳಿದ್ದೇನು ಗೊತ್ತಾ?

198

ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ.

ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ.

ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ ಬೆಳಗ್ಗೆ 3.45ಕ್ಕೆ ದೇವಾಲಯವನ್ನು ಪ್ರವೇಶಿಸಿದ್ದರು. ಈ ಸಮಯದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು ಮತ್ತು ಯಾವುದೇ ಮಾಧ್ಯಮಗಳು ಸಹ ಇರಲಿಲ್ಲ.

44 ವರ್ಷ ಬಿಂದು ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, 42 ವರ್ಷದ ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ. ಮಹಿಳೆಯರ ಪ್ರವೇಶವನ್ನು ಖಚಿತಪಡಿಸಿದ ಕೇರಳ ಸಿಎಂ ಪಿಣಾರಯ್ ವಿಜಯನ್, ಇಬ್ಬರು ಮಹಿಳೆಯರು ಪೊಲೀಸ್ ಭದ್ರತೆಯಲ್ಲಿ ಶಬರಿಮಲೆ ಪ್ರವೇಶಿಸಿದ್ದಾರೆ. ಅವರಿಗೆ ರಕ್ಷಣೆ ನೀಡಿದ್ದಕ್ಕೆ ನಮಗೆ ಹೆಮ್ಮೆಯಿದೆ ಎಂದು ಅವರು ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ