ಸುದ್ದಿ

ಶಾಕಿಂಗ್ ನ್ಯೂಸ್!ಯಲಹಂಕ ಏರ್ ಶೋ ನೋಡಲು ಹೋದವರ 150ಕ್ಕೂ ಹೆಚ್ಚು ಕಾರುಗಳು ಭಸ್ಮ?ಬಂದ್ ಆಯ್ತು ಏರ್ ಶೋ

155

ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು.

ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10 ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿವೆ. ಮುಂಜಾಗ್ರತಾ ಕ್ರಮ ಕೈಗೊಳ್ಳದ ಕಾರಣ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.

ಕಾರ್ ಪಾರ್ಕಿಂಗ್ ಗೇಟ್‌ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, ಕಾರ್ ಮಾಲಿಕರು ತಮ್ಮ ತಮ್ಮ ಕಾರ್ ಬಳಿ ಓಡಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರನ್ನು ಕಾರ್ ಬಳಿ ಬಿಟುತ್ತಿಲ್ಲವಾದ್ದರಿಂದ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ವಾಗ್ವಾದವೂ ಏರ್ಪಟ್ಟಿದೆ..

ಮೊದಲನೇ ಹಂತದ ವಿಮಾನ ಹಾರಾಟ ಮುಕ್ತಾಯಗೊಂಡಿದ್ದು, ಇಂದು ಮತ್ತು ನಾಳೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಹುಲ್ಲಿಗೆ ಕೆಲ ಕಿಡಿಗೇಡಿಗಳು ಸಿಗರೇಟ್ ಹಾಕಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಯಲಹಂಕದ ಮೈದಾನದಲ್ಲಿ ದಟ್ಟಹೊಗೆ ಕಾಣಿಸಿಕೊಂಡಿದ್ದು, ಈಗಾಗಲೇ ಅಗ್ನಿಶಾಮಕದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ತಲುಪಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • budget, karnataka

    6ನೇ ವೇತನ ಆಯೋಗದ ಗಾಳಿಸುದ್ದಿಗೆ ಕಿವಿ ಕೊಡಬೇಡಿ – ಇಲ್ಲಿದೆ ನಿಜವಾದ ಭಜೆಟ್ನ ಸುದ್ದಿ

    ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.

  • ಕ್ರೀಡೆ

    ಈ ಭಾರಿಯ ಐಪಿಎಲ್ ವಿದೇಶದಲ್ಲೋ? ಅಥವಾ ಭಾರತದಲ್ಲೋ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

    ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…

  • ಸುದ್ದಿ

    ಈ ಸಲದ ಮೋದಿ ಬಜೆಟ್’ನಲ್ಲಿ ಜಾಸ್ತಿಯಾಗಿದ್ದೇನು..?ಕಡಿಮೆಯಾಗಿದ್ದೇನು..?ಇಲ್ಲಿದೆ ಸಂಪೂರ್ಣ ಮಾಹಿತಿ…ನೋಡಿ ನಿಮ್ಮ ಅನಿಸಿಕೆ ತಿಳಿಸಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

  • ಸುದ್ದಿ

    ತೊಟ್ಟಿಲಲ್ಲಿ ಅಳುತ್ತಿದ್ದ ಮಗುವನ್ನು ನೋಡಿ ತೊಟ್ಟಿಲು ತೂಗಿ ಲಾಲನೆ ಮಾಡಿದ ಬಸವಣ್ಣ ನಿಜಕ್ಕೂ ಆಶ್ಚರ್ಯ..!

    ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…