ಸ್ಪೂರ್ತಿ

ಶಿಕ್ಷಣ ಕೊಡುವದಷ್ಟೇ ಅಲ್ಲ, ಹುಡುಗಿಯರಿಗೆ ಮದ್ವೆ ಕೂಡ ಮಾಡಿಸುತ್ತೆ ಈ ಶಾಲೆ..!

By admin

February 19, 2019

ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ.

ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ.

ದಿವ್ಯಾಂಗ ಹುಡುಗಿಯರ ಶಿಕ್ಷಣಕ್ಕಾಗಿ ಶಾಲೆ ತೆರೆಯಲಾಗಿತ್ತು. ಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆ ಮಕ್ಕಳಿಗೆ ಆತ್ಮವಿಶ್ವಾಸದ ಬಗ್ಗೆ ಪಾಠ ಹೇಳಲಾಗುತ್ತದೆ.

ಶಾಲೆ, ದಿವ್ಯಾಂಗ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತದೆ. ಹುಡುಗಿಯರು ಶಿಕ್ಷಣ ಪಡೆದು ಮದುವೆ ವಯಸ್ಸಿಗೆ ಬಂದಾಗ ಅವ್ರಿಗೆ ಯೋಗ್ಯ ವರನನ್ನು ಹುಡುಕಿ ಮದುವೆ ಮಾಡಲಾಗುತ್ತದೆ. ಈ ಶಾಲೆಯಲ್ಲಿ ಕಲಿತ ಅನೇಕ ಹುಡುಗಿಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.